ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ ) ಹಾಗೂ ಸೇವೆಯಲ್ಲಿರುವವರು(ಮಿಕ್ಕುಳಿದ ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯು ಈಗ ಸೇವೆಯಲ್ಲಿರುವ(Residual Reserved post) 438ಹುದ್ದೆಗಳ ನೇಮಕಕ್ಕೆ ಹುದ್ದೆಗಳ ಅರ್ಜಿ ಇದರ ಜೊತೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ(ಸ್ಥಳೀಯ) (Karnataka kalyana reserved post) ನ 107 ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಗಳನ್ನು ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ
ಯುಜಿಸಿ ಯಿಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯ ದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕೊನೆಯ ದಿನಾಂಕ, ಅಂದರೆ 1.04.2020 ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ, ಅಭ್ಯರ್ಥಿಗಳು ಸೈನ್ಯದಲ್ಲಿ ನೀಡಿದ ಪದವಿ ಪ್ರಮಾಣ ಪತ್ರವನ್ನು ದಿನಾಂಕ 1.4.2020 ರೊಳಗೆ ಪಡೆದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು.)
ಸೇವಾನಿರತ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಮತ್ತು ಅನುಭವ
ಸೇವಾ ನಿರತ ಮಾಜಿ ಸೈನಿಕ ಮೀಸಲಾತಿ ಕೋರುವ ಮಾಜಿ ಸೈನಿಕ ಅಭ್ಯರ್ಥಿಗಳು ಸಹ ಇಲಾಖೆಯ ಯಾವುದೇ ವೃಂದದಲ್ಲಿ 5 ವರ್ಷಗಳ ಕನಿಷ್ಠ ಸೇವೆಯನ್ನು ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್/ ಹೆಡ್ ಕಾನ್ ಸ್ಟೇಬಲ್/ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಪೂರ್ಣ ಗೊಳಿಸಿರಬೇಕು. ಹಾಗೂ ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿ ಮೇಲಿನ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಿಬ್ಬಂದಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅಂತಹ ಅಭ್ಯರ್ಥಿಗಳನ್ನು ಮಾತ್ರ ಸೈನಿಕ ಸೇವಾನಿರತ ಮೀಸಲಾತಿ ಅಡಿಯಲ್ಲಿ ಪರಿಗಣಿಸಲಾಗುವುದು.
ಟಿಪ್ಪಣಿ
ಪದವಿಗೆ ಡಿಪ್ಲೋಮಾ ಇತ್ಯಾದಿ ವಿದ್ಯಾರ್ಹತೆ ಗಳು ಸಮಾನವಾಗುವುದಿಲ್ಲ. ಮೇಲಿನ ವಿದ್ಯಾರ್ಹತೆಯನ್ನು ಹೊರತು ಪಡಿಸಿ ಬೇರೆ ಯಾವ ವಿದ್ಯಾರ್ಹತೆ ಗಳನ್ನು ಪರಿಗಣಿಸಲಾಗುವುದಿಲ್ಲ.
ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುವ, ಅಥವಾ ಅಂಕಪಟ್ಟಿ ಇಲ್ಲದೇ ಇರುವ ಅಭ್ಯರ್ಥಿಗಳ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಶುಲ್ಕ ವಿವರ
ಸಾಮಾನ್ಯ ಅರ್ಹತೆ, ಹಿಂದುಳಿದ ವರ್ಗ, ಪ್ರವರ್ಗ 2ಎ, 2ಬಿ, 3 ಎ, 3ಬಿ ಅಭ್ಯರ್ಥಿಗಳಿಗೆ 500 ರೂ. ಮತ್ತು ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 250 ಅರ್ಜಿ ನಿಗದಿಪಡಿಸಲಾಗಿದೆ.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 22, 2021 ಕೊನೆಯ ದಿನವಾಗಿರುತ್ತದೆ.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 24 ಫೆಬ್ರವರಿ 2021ಕೊನೆಯ ದಿನವೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.