ಬಳ್ಳಾರಿ ಜಿಲ್ಲಾಡಳಿತ ಕಚೇರಿಯಿಂದ ಜಿಲ್ಲೆಯಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅಗತತ್ಯ ಸಿಬ್ಬಂದಿಗಳನ್ನು ನೇಮಕಾತಿ ಮಾಡಲು ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಯು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಿದ್ದು ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ :
ಹುದ್ದೆಗಳ ವಿವರ : ಫಿಸಿಷಿಯನ್, ನರ್ಸ್, ಲ್ಯಾಬ್ ಟೆಕ್ನಿಷಿಯನ್, ಡಾಕ್ಟರ್, ಗ್ರೂಪ್ ಡಿ ನೌಕರರು, ಡಯಟೀಷಿಯನ್, ಸ್ಟೋರ್ ಕೀಪರ್, ಮನಃಶಾಸ್ತ್ರಜ್ಞ, ರೇಡಿಯೋಲಾಜಿ, ನರ್ಸಿಂಗ್ ಸೂಪರ್‌ವೈಸರ್, ಕೌನ್ಸಲರ್‌ಗಳು ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದ್ದಾರೆ.
ಒಟ್ಟು ಹುದ್ದೆಗಳ ಸಂಖ್ಯೆ : 1000 ಕ್ಕೂ ಅಧಿಕ ಇರುತ್ತದೆ.
ಸಂದರ್ಶನದ ದಿನಾಂಕ : 04-05-2021 ರಿಂದ 11-05-2021 ರವರೆಗೆ
ಸಂದರ್ಶನದ ಸಮಯ : ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಮೂರು ತಿಂಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ನಂತರ ಮೂರು ತಿಂಗಳು ಮುಂದೂಡುವ ಅವಕಾಶ ಇರುತ್ತದೆ.
ಹುದ್ದೆಗಳಿಗೆ ಸಂದರ್ಶನ ಪ್ರಕ್ರಿಯೆಗಳನ್ನು ಆಯಾ ತಾಲೂಕಿನ ತಹಶೀಲ್ದಾರ ಕಛೇರಿಯಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳು ಹೆಚ್ಚಿನ ವಿವರಗಳನ್ನು ಬಳ್ಳಾರಿಯ ಜಿಲ್ಲಾಡಳಿತ ಕಚೇರಿಯಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು : 08392277100
ಜಿಲ್ಲಾ ಆಸ್ಪತ್ರೆ, ವಿಮ್ಸ್ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಶುಶ್ರೂಷಕರಿಗೆ ಹಾಗೂ ಮೆಡಿಕಲ್ ಸಿಬ್ಬಂದಿಗಳಿಗೆ ಅವಶ್ಯಕತೆ ಇದ್ದಲ್ಲಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.