ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾನಲ್ಲಿ 25 ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

Advertisements

ಏರ್ಪೋರ್ಟ್ ಅಥಾರಿಟಿ ಆಪ್ ಇಂಡಿಯಾ ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-03-2021

ಏರ್ಪೋರ್ಟ್ ಅಥಾರಿಟಿ ಆಪ್ ಇಂಡಿಯಾ ನಲ್ಲಿ 25 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ‌.

ಒಟ್ಟು ಹುದ್ದೆ- 25

ವಿದ್ಯಾರ್ಹತೆ: ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅಥವಾ ಪದವಿ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳು 26 ವಯೋಮಿತಿ ಯನ್ನು ಮೀರಿರಬಾರದು.( ಜನವರಿ 1,2020 ರ ಅನ್ವಯ)

ವೇತನ: ಪದವಿ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.15,000/- ಹಾಗೂ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.12,000/- ಸ್ಟೈಫೆಂಡ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಅರ್ಜಿದಾರ ದಾಖಲೆ ಪರಿಶೀಲನೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave a Comment