ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಹಿಳೆಯರಿಗೆ ಅವಕಾಶ

Advertisements

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 25 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 25 “ಗ್ರಾಮ ಕಾಯಕ ಮಿತ್ರ ಹುದ್ದೆ” ಗಳಿಗೆ ಹೊರಗುತ್ತಿಗೆ ಆಧಾರಾದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 25-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2021 ಸಂಜೆ 5 ಗಂಟೆಯವರೆಗೆ

ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿಸಲ್ಲಿಸತಕ್ಕದ್ದು.

ವಿದ್ಯಾರ್ಹತೆ : ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು.

ದಿನಾಂಕ 01.01.2021 ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್‌ಕಾರ್ಡ್‌ ಹೊಂದಿರಬೇಕು.

ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ ಕನಿಷ್ಠ ಎರಡು ವರ್ಷ ಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಬೇಕು.

ವಯೋಮಿತಿ : ದಿನಾಂಕ 01-01-2021 ಕ್ಕೆ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 45 ವರ್ಷ ಮೀರಿರಬಾರದು.

ಓದು ಬರಹ ಚೆನ್ನಾಗಿ ತಿಳಿದಿರಬೇಕು.

ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದವರೊಂದಿಗೆ ಸ್ಪಂದಿಸುವ ಗುಣಲಕ್ಷಣಗಳನ್ನು ಹೊಂದಿರಬೇಕು.

ಗ್ರಾಮ ರೋಜ್‌ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮರೋಜ್‌ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

Leave a Comment