3006 ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆ : ಅ.18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

Advertisements

ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ( ಸಿಎಚ್ ಒ) ಪೋಸ್ಟ್ ಗಳನ್ನು ಭರ್ತಿ ಮಾಡಲು ಕಳೆದ ತಿಂಗಳು ಅಧಿಸೂಚನೆ ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27-09-2021

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-10-2021 ಸಂಜೆ 5 ಗಂಟೆವರೆಗೆ

ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ : 23-10-2021

ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭ ದಿನಾಂಕ : 26-10-2021

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸಿಎಚ್ ಒ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ.

ಹುದ್ದೆಯ ಹೆಸರು : ಸಮುದಾಯ ಆರೋಗ್ಯ ಅಧಿಕಾರಿಗಳು ( ಸಿಹೆಚ್ ಒ)

ಹುದ್ದೆಗಳ ಸಂಖ್ಯೆ : 3006

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್/ ಪೋಸ್ಟ್ ಬಿಎಸ್ಸಿ ನರ್ಸಿಂಗ್ ಜೊತರ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ ಎನ್ ಸಿ/ ಐಎನ್ ಸಿ ಅಲ್ಲಿ ನೋಂದಣಿ ಪಡೆದಿರಬೇಕು.

ಮಾಸಿಕ ಸಂಭಾವನೆ : ರೂ.22,000 ಜೊತೆಗೆ ರೂ. 8000 ರವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಹೆಚ್ಚಿನ ಆಧ್ಯತೆಯುಳ್ಳ ಜಿಲ್ಲೆಗಳಲ್ಲಿ ಈ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ ರೂ. 24,200 ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave a Comment