ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾಪೋರೇಶನ್ ಲಿಮಿಟೆಡ್ ( ಎನ್‌ಎಂಡಿಸಿ) ನಲ್ಲಿ ವಿವಿಧ ಹುದ್ದೆಗಳಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಮಾರ್ಚ್ 31,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಗಳ ವಿವರ, ಅರ್ಜಿ ಶುಲ್ಕ, ವಿದ್ಯಾರ್ಹತೆ, ವಯೋಮಿತಿಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ.
ಹುದ್ದೆಗಳ ವಿವರ : ಎನ್‌ಎಂಡಿಸಿ ನಲ್ಲಿ ವರ್ಕ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆ : 304 ಹುದ್ದೆ
ವಿದ್ಯಾರ್ಹತೆ : ಐಟಿಐ, ಮೆಟ್ರಿಕ್, ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ. ೧೫೦/- ನ್ನು ಆನ್‌ಲೈನ್ ಮೂಲಕ ಅಥವಾ ಚಲನ್ ಮೂಲಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 18,100/- ರಿಂದ 35,040 ರೂ.ಗಳವರೆಗೆ ವೇತನವನ್ನು ನೀಡಲಾಗುವುದು.
ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 30 ವಯೋಮಿತಿಯನ್ನು ಹೊಂದಿರಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ ಮಾರ್ಚ್ 31, 2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಎಪ್ರಿಲ್ 15,2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.
ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ.