50 ಸಶಸ್ತ್ರ ಪಿಸಿ ಹುದ್ದೆಯ ಆಯ್ಕೆ ಪಟ್ಟಿ ಪ್ರಕಟ

Advertisements

ಕರ್ನಾಟಕ ಪೊಲೀಸ್ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 50 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ 2ನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕೆಎಸ್ ಪಿ ಯು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ 2020 ಮೇ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು. 18-10-2020 ರಂದು ಲಿಖಿತ ಪರೀಕ್ಷೆ ನಡೆಸಿತ್ತು. ಆನಂತರ 2020 ಡಿಸೆಂಬರ್ 19,24 ಹಾಗೂ ಜನವರಿ 2021 ರ 08 ರಂದು ಸಹಿಷ್ಣುತೆ, ದೇಹದಾರ್ಢ್ಯತೆ ಪರೀಕ್ಷೆಯನ್ನು ನಡೆಸಿತ್ತು.

ವೃಂದ ಮತ್ತು ನೇಮಕಾತಿ ನಿಯಮದನ್ವಯ ಅರ್ಹತಾ ಪಟ್ಟಿಯನ್ನು ಪ್ರಕಟಿಸಿತ್ತು. ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗೆ ಗೈರು ಹಾಜರಾಗಿರುವ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯಿಂದ ಬಿಡಲಾಗಿದೆ.

ಪೊಲೀಸ್ ಇಲಾಖೆಯು ಬಿಡುಗಡೆ ಮಾಡಿದ 2 ನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ.

http://rec20.ksp-online.in/

Leave a Comment