ಸಿವಿಲ್ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ, ಸಹಿಷ್ಞುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪೊಲೀಸ್ ಇಲಾಖೆಯು ದಿನಾಂಕ ನಿಗದಿಪಡಿಸಿದೆ. ಈ ಪರೀಕ್ಷೆಗಳಿಗೆ ಕ್ರೀಡಾಂಗಣವನ್ನು ಮೀಸರಿಸಿಕೊಳ್ಳುವ ಬಗ್ಗೆಯೂ ಪೊಲೀಸ್ ಮಹಾ ನಿರೀಕ್ಷಕರು ಸೂಚಿಸಿದ್ದಾರೆ.
ದಿನಾಂಕ 15-03-2021 ರಿಂದ 15-04-2021 ರವರೆಗೆ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಪಿಎಸ್‌ಐ ಹುದ್ದೆಗಳಿಗೆ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ನಡೆಯಲಿದೆ.
545 ಪಿಎಸ್‌ಐ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆ ಇದಾಗಿದೆ. ಸದರಿ ಹುದ್ದೆಗಳಿಗೆ ಪೊಲೀಸ್ ಇಲಾಖೆಯು 2021 ರ ಜನವರಿ ತಿಂಗಳಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟಿಸಿತ್ತು.
ವೇಳಾಪಟ್ಟಿಯನ್ನು ಅಧಿಕೃತವಾಗಿ ಅಂತಿಮಗೊಳಿಸಿದ ನಂತರ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಿದೆ. ನಂತರ ಅಭ್ಯರ್ಥಿಗಳು ಕೆಎಸ್‌ಪಿ ಅಫೀಶಿಯಲ್ ವೆಬ್‌ಸೈಟ್‌ನಲ್ಲಿ ಲಾಗಿನ್ ಆಗುವ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು,
ಪ್ರವೇಶ ಪತ್ರದಲ್ಲಿ ನೀಡಲಾದ ದಿನಾಂಕದಂದು ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಸಹಿಷ್ಞುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗೆ ಹಾಜರಾಬೇಕು.