ಜಿಲ್ಲಾ ಆಡಳಿತ, ಬಳ್ಳಾರಿಯಿಂದ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್ ರೋಗಿಗಳಿಗೆ ಉತ್ತಮ ಮತ್ತು ಪರಿಣಾಮಕಾರಿ ಚಿಕಿತ್ಸೆಯನ್ನು ನೀಡುವ ಹಿನ್ನೆಲೆಯಲ್ಲಿ ಸಂಡೂರು ತಾಲೂಕಿನ ತೋರಣಗಲ್ಲು ಇಲ್ಲಿ 1000 ಹಾಸಿಗೆ ಕೋವಿಡ್ ಆಸ್ಪತ್ರೆ ಆರಂಭಿಸಲಾಗಿದ್ದು, ಸದರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು ವೈದ್ಯರು/ ತಜ್ಞ ವೈದ್ಯರು ಅಗತ್ಯವಿದ್ದು ಈ ಹಿನ್ನೆಲೆಯಲ್ಲಿ1000 ಹಾಸಿಗೆ ಕೋವಿಡ್ ಆಸ್ಪತ್ರೆ ತೋರಣಗಲ್ಲು ಇಲ್ಲಿ ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ11-05-2021 ರಿಂದ 20-05-2021 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳ ಕಛೇರಿ ಬಳ್ಳಾರಿ ಇವರ ಕಚೇರಿ ವೇಳೆಯಲ್ಲಿ ಮುದ್ದಾಂ ಸಲ್ಲಿಸಲು ಹಾಗೂ ಮೂಲ ದಾಖಲಾತಿಗಳನ್ನು ಪರಿಶೀಲನೆಗೆ ಹಾಜರುಪಡಿಸಲು ಸೂಚಿಸುತ್ತಾ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08392-276250ಅಥವಾ ಕಚೇರಿಯ ಸಹಾಯಕ ಆಡಳಿತಾಧಿಕಾರಿಗಳು ಇವರ ದೂರವಾಣಿ ಸಂಖ್ಯೆ 8951656265 ಸಂಪರ್ಕಿಸಬಹುದು. ಮತ್ತು ನೇಮಕಾತಿ ಹೊಂದಿ ಕರ್ತವ್ಯ ನಿರ್ವಹಿಸುವವರಿಗೆ ವಸಯಿ ಮತ್ತು ಊಟದ ವ್ಯವಸ್ಥೆ ಯನ್ನು ಕಲ್ಪಿಸಲಾಗುತ್ತದೆ.
ಹುದ್ದೆ : ಫಿಸಿಶಿಯನ್/ ಶ್ವಾಸಕೋಶ ತಜ್ಞರು- 20
ಅರವಳಿಕೆ ತಜ್ಞರು -15
ವೈದ್ಯರು – 30
ಈ ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ಮಾತ್ರ ನೇಮಕಾತಿ ಆಗಿದ್ದು ಯಾವುದೇ ಕಾರಣಕ್ಕೂ ಖಾಯಂಗೊಳಿಸಲಾಗುವುದಿಲ್ಲ.
ಗುತ್ತಿಗೆ ಅವಧಿಯು 11 ತಿಂಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಅಥವಾ ಜಿಲ್ಲಾ ಆಡಳಿತ ಒಪ್ಪಿದ್ದಲ್ಲಿ ಮುಂದುವರಿಸಲಾಗುವುದು. ರಾಜ್ಯದ ಯಾವುದೇ ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ/ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ / ಗುತ್ತಿಗೆ ವೈದ್ಯರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ನೇಮಕಾತಿ ಹೊಂದಿದ ವೈದ್ಯರುಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ.