ಸಹಾಯಕ ಹುದ್ದೆ, ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

Advertisements

ಮೈಸೂರಿನ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.

ಹುದ್ದೆ : ಸಹಾಯಕ ಆಯುಕ್ತರ ಕಚೇರಿಯಲ್ಲಿ ಲೆಕ್ಕಿಗರು, ಕಚೇರಿ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಈ ಪ್ರಕಟಣೆ ಹೊರಡಿಸಿದ 7 ದಿನದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ವಿದ್ಯಾರ್ಹತೆ : ಬಿ.ಕಾಂ, ಬಿಬಿಎಂ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಮತ್ತು ಬರೆಯುವ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ, ಟ್ಯಾಲಿ ತಂತ್ರಾಂಶ ಉಪಯೋಗಿಸುವ ಜ್ಞಾನ ಇತ್ಯಾದಿ ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ರೂ.16,000/- ಗೌರವಧನ ನಿಗದಿಪಡಿಸಲಾಗಿದೆ.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು. ಲೆಕ್ಕ ಪತ್ರಗಳನ್ನು ನಿರ್ವಹಿಸುವಲ್ಲಿ ಮತ್ತು ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕುವೆಂಪು ನಗರದ ಅಕ್ಷಯ ಭಂಡಾರ ವೃತ್ತದ ಬಳಿ ಇರುವ ಸಹಾಯಕ ಕಾರ್ಮಿಕರ ಆಯುಕ್ತರ ಕಚೇರಿ ಮತ್ತು ಬಾಲಕಾರ್ಮಿಕ ಯೋಜನಾ ಸೊಸೈಟಿ ಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಆಸಕ್ತರು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ : 0821-2541942

Leave a Comment