AIATSL Jobs: ಏರ್‌ಇಂಡಿಯಾ ಏರ್‌ಟ್ರಾನ್ಸ್‌ಪೋರ್ಟ್‌ ಸರ್ವಿಸೆಸ್‌ನಿಂದ ಉದ್ಯೋಗಾವಕಾಶ, ನೇರಸಂದರ್ಶನಕ್ಕೆ ಅರ್ಜಿ ಆಹ್ವಾನ, ಉತ್ತಮ ವೇತನ

Advertisements

AIATSL Recruitment 2024: ಏರ್‌ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವಿಸಸ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 145 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಜೂನಿಯರ್‌ ಆಫಿಸರ್‌ ಟೆಕ್ನಿಕಲ್‌, ಕಸ್ಟಮರ್‌ ಸರ್ವೀಸ್‌ ಎಕ್ಸಿಕ್ಯೂಟಿವ್‌ ಹೀಗೆ ಹಲವು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಮುಖ ದಿನಾಂಕಗಳು;
ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ:
ನೇರ ಸಂದರ್ಶನಕ್ಕೆ ಹಾಜರಾಗಬೇಕಾದ ದಿನಾಂಕ:

ಹುದ್ದೆಗಳ ವಿವರ ಇಲ್ಲಿದೆ;
ಜೂನಿಯರ್ ಆಫೀಸರ್ – ಟೆಕ್ನಿಕಲ್ : 02
ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 21
ಜೂನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 21
ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್ : 18
ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ : 17
ಹ್ಯಾಂಡಿಮನ್ : 66

ವಿದ್ಯಾರ್ಹತೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳು ಬಿಇ/ಪದವಿ/ಐಟಿಐ (ಎನ್‌ಸಿವಿಟಿ/ಎಸ್‌ಸಿವಿಟಿ)/ಎಸ್‌ಎಸ್‌ಸಿ/ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 28 ವರ್ಷ ವಯಸ್ಸಾಗಿರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500, ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಅಭ್ಯರ್ಥಿಗಳು ಡಿಡಿ ಮೂಲಕ ಶುಲ್ಕವನ್ನು ಪಾವತಿ ಮಾಡಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳು ದಿನಾಂಕ 08-05-2024 ರಿಂದ 10-05-2024 ರವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ಈ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು;
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಂಕಪಟ್ಟಿ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಕಾರ್ಯಾನುಭವ ಇರುವ ದಾಖಲೆ, ಹಾಗೂ ಇತರೆ ದಾಖಲು ಅತ್ಯಗತ್ಯ

ಮೇಲ್ಕಂಡ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗುವ ಸಮಯದಲ್ಲಿ ಅಭ್ಯರ್ಥಿಗಳು ಮೇಲೆ ತಿಳಿಸಿದ ಎಲ್ಲಾ ದಾಖಲೆಗಳನ್ನು ತಮ್ಮಲ್ಲಿ ಇಟ್ಟುಕೊಂಡು ಹೋಗಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.