AAI Recruitment 2024: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಖಿಲ ಭಾರತ ಸರಕಾರದಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಅರ್ಜಿ ಸಲ್ಲಿಕೆ ಆರಂಭವು ಎಪ್ರಿಲ್, 02, 2024 ರಂದು ನಡೆಯಲಿದ್ದು, ಮೇ 01, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಕೇಂದ್ರ ಸರಕಾರದ ಉದ್ಯೋಗ ಬಯಸುವವರಿಗೆ ಇದೊಂದು ಸದಾವಕಾಶ.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 02-04-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 01-05-2024
ಹುದ್ದೆಗಳ ವಿವರ ಇಲ್ಲಿದೆ;
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) -3 ಹುದ್ದೆಗಳು ಖಾಲಿ ಇದೆ
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಇಂಜಿನಿಯರಿಂಗ್-ಸಿವಿಲ್) – 90 ಹುದ್ದೆಗಳು
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಇಂಜಿನಿಯರಿಂಗ್ ಎಲೆಕ್ಟ್ರಿಕಲ್) – 106 ಹುದ್ದೆಗಳು
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರೋನಿಕ್ಸ್) – 278 ಹುದ್ದೆಗಳು
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಇನ್‌ಫಾರ್ಮೇಶನ್ ಟೆಕ್ನಾಲಜಿ) – 13 ಹುದ್ದೆಗಳು
ಒಟ್ಟು 490 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ:
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆರ್ಕಿಟೆಕ್ಚರ್‌ನಲ್ಲಿ ಡಿಗ್ರಿ ಮಾಡಿರಬೇಕು.
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಇಂಜಿನಿಯರಿಂಗ್-ಸಿವಿಲ್) – ಈ ಹುದ್ದೆಗೆ ಸಿವಿಲ್ ಇಂಜಿನಿಯರಿಂಗ್/ಟೆಕ್ನಾಲಜಿ ಯಲ್ಲಿ ಡಿಗ್ರಿ ಮಾಡಿರುವವರು ಅರ್ಜಿ ಸಲ್ಲಿಸಬಹುದು.
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಇಂಜಿನಿಯರಿಂಗ್ ಎಲೆಕ್ಟ್ರಿಕಲ್) – ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಷನ್ಸ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ ಟೆಕ್ನಾಲಜಿ ಯಲ್ಲಿ ಡಿಗ್ರಿ ಪಡೆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರೋನಿಕ್ಸ್) – ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಷನ್ಸ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ ಟೆಕ್ನಾಲಜಿ ಯಲ್ಲಿ ಡಿಗ್ರಿ ಮಾಡಿ ತೇರ್ಗಡೆ ಹೊಂದಿದವರು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು.
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಇನ್‌ಫಾರ್ಮೇಶನ್ ಟೆಕ್ನಾಲಜಿ) – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಎಲೆಕ್ಟ್ರಾನಿಕ್ಸ್, ಎಂಸಿಎ ಮಾಡಿದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ನಿಯಮಗಳ ಪ್ರಕಾರ, ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 27 ವರ್ಷ ಮೀರಿರಬಾರದು. ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: ಎಸ್/ಎಸ್‌ಟಿ/PwBD/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಉಳಿದ ಅಭ್ಯರ್ಥಿಗಳು ರೂ.300 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಲು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.
ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40,000-1,40,000ರೂ. ವರೆಗೆ ವೇತನ ಸಿಗಲಿದೆ.
ಆಯ್ಕೆ ಪ್ರಕ್ರಿಯೆ: ಗೇಟ್ ಅಂಕಗಳು, ಅರ್ಜಿ ಪರಿಶೀಲನೆಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ