ರಾಯಚೂರು ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಅಂಗನವಾಡಿ ಕಾರ್ಯಕರ್ತೆ – 25
ಅಂಗನವಾಡಿ ಸಹಾಯಕಿ: 03
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 12-10-2021
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-11-2021
ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 12-10-2021
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-11-2021
ಚಿಕ್ಕಬಳ್ಳಾಪುರದಲ್ಲಿ ಖಾಲಿ ಇರುವ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 28.10.2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-11-2021
ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು.
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 4 ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು.
10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ