WCD Recruitment 2024: ಅಂಗನವಾಡಿ ಕೇಂದ್ರಗಳಲ್ಲಿ ಹುದ್ದೆ; 10th ಪಾಸಾದವರಿಗೆ ಆದ್ಯತೆ, ಈ ಕೂಡಲೇ ಅರ್ಜಿ ಸಲ್ಲಿಸಿ!!!

Advertisements

WCD Haveri Recruitment 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ (Women and Child Development Haveri) ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಒಟ್ಟು 152 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಫೆ.15, 2024 ಕೊನೆಯ ದಿನಾಂಕವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿಯಲ್ಲಿ ಕೆಲಸ ಮಾಡಬೇಕಾಗುತ್ತದೆ.

ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 16-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 15, 2024

ಹುದ್ದೆಗಳ ವಿವರ;
ಅಂಗನವಾಡಿ ಕಾರ್ಯಕರ್ತೆ-39 ಹುದ್ದೆಗಳು ಖಾಲಿ ಇದೆ.
ಅಂಗನವಾಡಿ ಸಹಾಯಕಿ-113 ಹುದ್ದೆಗಳು ಖಾಲಿ ಇದೆ.

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ಆಗಿರಬೇಕು. ಹಾಗೂ 35 ವರ್ಷ ಮೀರಿರಬಾರದು. ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ: ಈ ಹುದ್ದೆಗೆ ನೋಟಿಫಿಕೇಶನ್‌ ನಲ್ಲಿ ಯಾವುದೇ ವೇತನ ನಿಗದಿಪಡಿಸಿಲ್ಲ.

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ: ಕನಿಷ್ಟ ಪಿಯುಸಿ ತೇರ್ಗಡೆಯಾಗಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿ: ಕನಿಷ್ಟ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಆನ್‌ಲೈನ್‌ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು ಇಲ್ಲಿದೆ;
ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
ನಿಗದಿತ ವಿದ್ಯಾರ್ಹತೆ ಅಂಕಪಟ್ಟಿ
ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.
ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ
ಮಾಜಿ ದೇವದಾಸಿಯ ಮಕ್ಕಳಾಗಿದ್ದಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
ಯೋಜನಾ ನಿರಾಶ್ರಿತರ ಬಗ್ಗೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ https://karnemakaone.kar.nic.in/abcd/ApplicationForm_JA_org.aspx ಲಿಂಕ್‌ ಕ್ಲಿಕ್‌ ಮಾಡಿ
ನೇಮಕಾತಿ ಬಯಸುವ ಜಿಲ್ಲೆ ಆಯ್ಕೆ ಮಾಡಿ
ನಂತರ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿ
ಅಪ್ಲಿಕೇಶನ್‌ ಫಾರ್ಮ್‌ ತೆರೆಯುತ್ತದೆ.
ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.