ಅರೆವೈದ್ಯಕೀಯ ಹುದ್ದೆಗಳ ನೇಮಕ

Advertisements

ಜಿಲ್ಲಾ ಕೌಶಲ್ಯಾಭಿವೃದ್ಧಿ ಮಿಷನ್ ಹಾಗೂ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕೊರೊನಾ ನಿಯಂತ್ರಿಸಲು ಹೆಚ್ಚುವರಿ ಅರೆ ವೈದ್ಯಕೀಯ ಸಿಬ್ಬಂದಿ ಅಗತ್ಯವಿರುವ ಹಿನ್ನೆಲೆಯಲ್ಲಿ ಆಸಕ್ತರಿಗೆ ತರಬೇತಿಯನ್ನು ನೀಡಲಾಗುತ್ತದೆ. ಒಂದು ತಿಂಗಳ ತರಬೇತಿ ನೀಡಿ, ಜಿಲ್ಲಾ ಆಸ್ಪತ್ರೆಗಳಲ್ಲಿ ಅನ್ ಜಾಬ್ ತಾತ್ಕಾಲಿಕ ಸೇವೆಗೆ ನೇಮಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಿದೆ.

ತುರ್ತು ವೈದ್ಯಕೀಯ ಸೇವೆಗಳ ಬೇಸಿಕ್, ಸಾಮಾನ್ಯ ಸೇವೆಗಳ ಸಹಾಯಕರು, ತುರ್ತು ವಿಭಾಗದಲ್ಲಿ ಕೇರ್, ವೈದ್ಯಕೀಯ ಉಪಕರಣಗಳ ತಾಂತ್ರಿಕ ಸಹಾಯಕರು, ಫ್ಲೆಬೋಟೋಮಿಸ್ಟ್, ವೈದ್ಯಕೀಯ ದಾಖಲೆಗಳ ನಿರ್ವಹಣೆ ಕುರಿತಂತೆ ತರಬೇತಿಯನ್ನು ನೀಡಲಾಗುತ್ತದೆ.
ತರಬೇತಿ ಬಳಿಕ ಅಭ್ಯರ್ಥಿಗಳಿಗೆ ತಾತ್ಕಾಲಿಕ ಉದ್ಯೋಗ ನೀಡಲಾಗುವುದು.

ಆಸಕ್ತರು ರಾಯಾಪುರದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಅಥವಾ [email protected] ವಿಳಾಸಕ್ಕೆ ವಿವರ ಕಳುಹಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರಾಯಾಪುರದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಮೊಬೈಲ್ ಸಂಖ್ಯೆ 9845437056 ಗೆ ಸಂಪರ್ಕಿಸಬಹುದು.

ಅಭ್ಯರ್ಥಿಗಳು ಈ ಲಿಂಕ್ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

Leave a Comment