ಶ್ರೀ ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘ ( ರಿ) ಬಗಲೂರ ವಿಜಯಪುರ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ವಿವರಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ : ಸಹಶಿಕ್ಷಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ – 01
ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎ.ಬಿಎಡ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.33,450/- ರಿಂದ ರೂ.62,600/- ಗಳವರೆಗೆ ವೇತನವಿರುತ್ತದೆ.
ಅರ್ಹ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರ ಸ್ವಂತ ಕೈ ಬರಹದ ಅರ್ಜಿಯೊಂದಿಗೆ ತಮ್ಮ ಶೈಕ್ಷಣಿಕ ವಿದ್ಯಾರ್ಹತೆ ಜನ್ಮದಾಖಲೆ ಮತ್ತು ಇತರ ಸಂಬಂಧಿಸಿದ ಪ್ರಮಾಣ ಪತ್ರಗಳ ದೃಢೀಕರಿಸಿದ ನಕಲುಗಳೊಂದಿಗೆ ಅಭ್ಯರ್ಥಿಗಳು ರೂ.500/- ನ್ಯಾಷನಲ್ ಬ್ಯಾಂಕ್ ಡಿಡಿಯನ್ನು ಅಧ್ಯಕ್ಷರು ಶ್ರೀ ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘ (ರಿ) ಬಗಲೂರ ಇವರ ಹೆಸರಿಗೆ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಿ ಈ ಪ್ರಕಟಣೆ ಪ್ರಕಟಗೊಂಡ 21 ದಿನದೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಮತ್ತು ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲೆಗಳ ಸಹಿತವಾಗಿ ಮಾನ್ಯ ಉಪನಿರ್ದೇಶಕರು ಸಾ.ಶಿ. ಇಲಾಖೆ ವಿಜಯಪುರ ಇವರಿಗೆ ನಿಗದಿತ ಸಮಯದೊಳಗಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಅಧ್ಯಕ್ಷರು, ಶ್ರೀ ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘ (ರಿ) ಬಗಲೂರ ತಾ.ಸಿಂದಗಿ. ಜಿ: ವಿಜಯಪುರ.