ಜ್ಯೂನಿಯರ್ ಅಸಿಸ್ಟೆಂಟ್ ಕಂ ಮಾರಾಟ ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ

Advertisements

ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ., ಸರ್ಜಾಪುರ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆ : 5 ( ಐದು) ಕಿರಿಯ ಸಹಾಯಕ ‌ಕಂ ಮಾರಾಟ ಗುಮಾಸ್ತ ( junior assistant cum sales clerk) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ಕನ್ನಡ ಭಾಷೆಯನ್ನು ಕಲಿತಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್ ಸಿ/ ಎಸ್ ಟಿ / ಪ್ರವರ್ಗ -1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು : ಇತ್ತೀಚಿನ ಎರಡು ಭಾವಚಿತ್ರ, ಪಾಸ್ ಪೋರ್ಟ್/ ಆಧಾರ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್/ ವೋಟರ್ ಐಡಿ ಯಾವುದಾದರೂ ಒಂದು. ವಯಸ್ಸು ದೃಢೀಕರಣ ಪತ್ರ ಅಥವಾ ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಪದವಿ ಅಂಕಪಟಯ, ಕಂಪ್ಯೂಟರ್ ಪದವಿ ಹೊಂದಿರುವ ಬಗ್ಗೆ ಸರ್ಟಿಫಿಕೇಟ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

ಅರ್ಜಿ ಸಲ್ಲಿಸುವ ವಿಧಾನ : ಸಂಘದ ಕೇಂದ್ರ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ರೂ. 1000/- ಪಾವತಿ ಮಾಡಿ ಅರ್ಜಿಯನ್ನು ಪಡೆಯಬಹುದು. ಈ ಹಣವನ್ನು ಯಾವುದೇ ಸಂದರ್ಭದಲ್ಲಿ ಹಿಂದಿರಿಗಿಸಲಾಗುವುದಿಲ್ಲ. ಸಂಘದಿಂದ ಪೂರೈಸಿದ ಮೂಲ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಸರ್ಜಾಪುರ – 562125 ಆನೇಕಲ್ ತಾಲ್ಲೂಕು, ಬೆಂಗಳೂರು ‌ನಗರ ಜಿಲ್ಲೆ ಇಲ್ಲಿ ಸಲ್ಲಿಸತಕ್ಕದ್ದು

ಅರ್ಜಿ ಸಲ್ಲಿಸಲು ದಿನಾಂಕ 24-05-2021 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಕೋವಿಡ್ 19 ರಿಂದಾಗಿ ಸರಕಾರವು ಲಾಕ್ ಡೌನ್ ಆದೇಶಿಸಿದ್ದ ಕಾರಣ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿರುತ್ತದೆ. ಆದ ಕಾರಣ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-07-2021 ಸಂಜೆ 5.00 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.

Leave a Comment