ARIES Recruitment 2024: ಆರ್ಯಭಟ್ಟ ರೀಸರ್ಚ್ ಇನ್‌ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ (ARIES) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಸ್ಥೆ ಅರ್ಜಿಯನ್ನು ಆಹ್ವಾನಿಸಿದೆ. ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೈನಿತಾಲ್ – ಉತ್ತರಾಖಂಡ, ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಈ ಹುದ್ದೆಗಳಿಗೆ ಪೋಸ್ಟಿಂಗ್ ಆಗಲಿದೆ. ಹಾಗಾಗಿ ಆಸಕ್ತ ಅಭ್ಯರ್ಥಿಗಳು ದಿನಾಂಕ 04-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20-04-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-05-2024
ಹುದ್ದೆಯ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಆರ್ಯಭಟ್ಟ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ (ARIES) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಯ ಪೋಸ್ಟಿಂಗ್ ನೈನಿತಾಲ್ – ಉತ್ತರಾಖಂಡ, ಬೆಂಗಳೂರು – ಕರ್ನಾಟಕ ದಲ್ಲಿ ಆಗಲಿದೆ. ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಆಯ್ಕೆಯಾದರೆ ಮಾಸಿಕ ರೂ. 42,000/- ವೇತನ ದೊರಕಲಿದೆ
ವಿದ್ಯಾರ್ಹತೆ:ARIES ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, MCA, Ph.D ಮಾಡಿರುವ ಅಭ್ಯರ್ಥಿಗಳು ಈ ಮೇಲೆ ತಿಳಿಸಿದ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷ ಆಗಿರಬೇಕು. ಆರ್ಯಭಟ್ಟ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗುವುದು.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ