Advertisements
ಕರ್ನಾಟಕ ಪೊಲೀಸ್ ಇಲಾಖೆಯು 45 ಸಶಸ್ತ್ರ ಮೀಸಲು ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಅಭ್ಯರ್ಥಿಗಳು ಕೆಎಸ್ ಪಿ ವೆಬ್‌ಸೈಟ್ ಗೆ ಭೇಟಿ ನೀಡಿ ಲಿಸ್ಟ್ ನ್ನು ಚೆಕ್ ಮಾಡಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜನವರಿ 03, 2021 ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು. ದೈಹಿಕ ಸಾಮಾರ್ಥ್ಯ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆಯನ್ನು ನಡೆಸಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಮೀಸಲಾತಿ ಗೆ ಅನುಗುಣವಾಗಿ ಸಿದ್ಧಪಡಿಸಿ ಪ್ರಸ್ತುತ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ. ತಾತ್ಕಾಲಿಕ ಪಟ್ಟಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಾನೂನಾತ್ಮಕವಾಗಿ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ. ಮೂಲ ದಾಖಲೆಗಳ ಪರಿಶೀಲನೆ ಹಾಗೂ ಮೆಡಿಕಲ್ ಟೆಸ್ಟ್ ಗೆ ಅಭ್ಯರ್ಥಿಗಳು ಹಾಜರಾಗಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ