Advertisements
ಭಾರತೀಯ ಸೇನೆಯು ನಡೆಸುವ ಸಾಮಾನ್ಯ ಪರೀಕ್ಷೆಯು ( ಸಿಇಇ) ಜುಲೈ 25 ರಂದು ರಾಜ್ಯದ ಮೂರು ಕೇಂದ್ರಗಳಲ್ಲಿ ನಡೆಯಲಿದೆ.
ವೈದ್ಯಕೀಯ ಸಾಮರ್ಥ್ಯ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಲಿಖಿತ ಪರೀಕ್ಷೆಗೆ ಹಾಜರಾಗಬಹುದು.
ಈ ಮೊದಲು ಎಪ್ರಿಲ್ 25 ರಂದು ಸಿಇಇ ನಿಗದಿ ಪಡಿಸಲಾಗಿತ್ತು. ಆದರೆ ಕೋವಿಡ್ ಕಾರಣದಿಂದ ಮುಂದೂಡಲಾಗಿತ್ತು.
ಬೆಂಗಳೂರಿನ ಕಾಮರಾಜ ರಸ್ತೆಯಲ್ಲಿರುವ ಸೇನಾ ಶಾಲೆ, ಮಂಗಳೂರಿನ ಮೂಡುಬಿದಿರೆಯಲ್ಲಿರುವ ಆಳ್ವಾಸ್ ಸಂಸ್ಥೆ, ಬೆಳಗಾವಿಯ ಕೆಎಲ್ ಇ ಸೊಸೈಟಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಸೇನಾ ಪ್ರಕಟಣೆ ತಿಳಿಸಿದೆ.