Author: Mallika

  • ಬೆಂಗಳೂರು ರೂರಲ್ ಜಿಲ್ಲಾ ಪಂಚಾಯತ್ ನಲ್ಲಿ ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

    ಬೆಂಗಳೂರು ರೂರಲ್ ಜಿಲ್ಲಾ ಪಂಚಾಯತ್ ನಲ್ಲಿ ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

    ಬೆಂಗಳೂರು ರೂರಲ್ ಜಿಲ್ಲಾ‌ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 26, ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-03-2021(5pm)
    ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ಬೆಂಗಳೂರು ರೂರಲ್ ಜಿಲ್ಲಾ‌ಪಂಚಾಯತ್ ನಲ್ಲಿ ಟೆಕ್ನಿಕಲ್ ಸ್ಟಾಫ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ :09

    ವಯೋಮಿತಿ : ಟೆಕ್ನಿಕಲ್ ಸ್ಟಾಫ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 40 ವಯೋಮಿತಿ ಹೊಂದಿರಬೇಕು.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಹುದ್ದೆಗಳ ವಿವರ : ಟೆಕ್ನಿಕಲ್ ಕೋರ್ಡಿನೇಟರ್ – 03
    ತಾಲೂಕು ಐ.ಇ.ಸಿ ಕೋರ್ಡಿನೇಟರ್- 04
    ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- 01
    ಟೆಕ್ನಿಕಲ್ ಅಸಿಸ್ಟೆಂಟ್ (ಹೋರಿಕಲ್ಚರ್ ) -01

    ವಿದ್ಯಾರ್ಹತೆ : ಟೆಕ್ನಿಕಲ್ ಕೋರ್ಡಿನೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ, ಎಂ.ಟೆಕ್ ತೇರ್ಗಡೆ ಹೊಂದಿರಬೇಕು.

    ತಾಲೂಕು ಐ.ಇ.ಸಿ ಕೋರ್ಡಿನೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜ್ಯುಯೇಟ್ ಪೋಸ್ಟ್, ಗ್ರಾಜ್ಯುಯೇಟ್ ಎಂ.ಎಸ್.ಡಬ್ಲ್ಯೂ‌ ಹೊಂದಿರಬೇಕು.

    ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್) ಹಾಗೂ ಟೆಕ್ನಿಕಲ್ ಅಸಿಸ್ಟೆಂಟ್ ( ಹೋರಿಕಲ್ಚರ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ, ಎಂ.ಎಸ್ಸಿ ಪದವಿ ಹೊಂದಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಈ ಕೆಳಗಿನ ವಿಳಾಸಕ್ಕೆ ದಿನಾಂಕ 26-03-2021(5pm) ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

    Chief Executive Officers, Bangalore Rural Zilla Panchayat, District Administrative House, Beerasandra (Chapparadakallu), Kundan Hobli, Devanahalli Taluk – 562110, Bengaluru – 562110

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ: https://bangalorerural.nic.in/en/

  • ಐಟಿಐನಲ್ಲಿ 40 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಐಟಿಐನಲ್ಲಿ 40 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 18 ಮಾರ್ಚ್ , 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-03-2021
    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಸಲ್ಲಿಸುವಂತಿಲ್ಲ.

    ಐಟಿಐ ನಲ್ಲಿ ಇಂಜಿನಿಯರಿಂಗ್ ಡಿಪ್ಲೋಮಾ ಹೋಲ್ಡರ್ಸ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 40

    ಐಟಿಐ ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ಯುನಿವರ್ಸಿಟಿ ಯಿಂದ 12th, ಡಿಪ್ಲೋಮಾ ತೇರ್ಗಡೆ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗಳು ವಯಸ್ಸು 30 ಕ್ಕಿಂತ ಹೆಚ್ಚಿರಬಾರದು.

    ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ,ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡ್ಬ್ಯುಡಿ/ಎಕ್ಸ್ ಸರ್ವಿಸ್ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 19,029 ತಿಂಗಳ‌ ವೇತನ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ: https://www.itiltd.in/

  • ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕ

    ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕ

    ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಖಾಲಿ ಇರುವ ತಾಂತ್ರಿಕ‌ ಸಹಾಯಕರು (ಅರಣ್ಯ,ಕೃಷಿ, ತೋಟಗಾರಿಕೆ) ಹುದ್ದೆಗಳ ನ್ನು ಹೊರಗುತ್ತಿಗೆ ಆಧಾರದಲ್ಲಿ ಸೇವೆಗೆ ಪಡೆಯಲು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅನುಮತಿ ನೀಡಿದೆ.

    ತಾಂತ್ರಿಕ ಸಹಾಯಕರ ನೇಮಕ ಅತೀ ಶೀಘ್ರದಲ್ಲಿ

    ಈ ಹುದ್ದೆಗಳಿಗೆ ಮಾರ್ಚ್ ತಿಂಗಳ ಕೊನೆ ವಾರದೊಳಗೆ ಅರ್ಜಿ ಸಲ್ಲಿಸಿ ಎಪ್ರಿಲ್ 6 ,2021 ರೊಳಗೆ ನೇಮಕ ಪ್ರಕ್ರಿಯೆ ಅಂತ್ಯಗೊಳಿಸಲಾಗುತ್ತದೆ.

    ವಿದ್ಯಾರ್ಹತೆ : ತಾಂತ್ರಿಕ ಸಹಾಯಕ : (ಅರಣ್ಯ) ಈ ಹುದ್ದೆಗೆ ಕನಿಷ್ಠ ಬಿಎಸ್ಸಿ (ಫಾರೆಸ್ಟ್ರಿ) ಉತ್ತೀರ್ಣಗೊಂಡಿರಬೇಕು.ಎಂ.ಎಸ್ಸಿ ಫಾರೆಸ್ಟ್ರಿ ಅಪೇಕ್ಷಣೀಯ.

    ತಾಂತ್ರಿಕ‌ ಸಹಾಯಕ: (ತೋಟಗಾರಿಕೆ,ಕೃಷಿ) ಬಿಎಸ್ಸಿ‌ ಅಗ್ರಿಕಲ್ಚರ್ ಅಥವಾ ಹಾರ್ಟಿಕಲ್ಚರ್ ಉತ್ತೀರ್ಣಗೊಂಡಿರಬೇಕು.ಎಂ.ಎಸ್ಸಿ ಇನ್ ಅಗ್ರಿಕಲ್ಚರ್ /ಹಾರ್ಟಿಕಲ್ಚರ್ ಅಪೇಕ್ಷಣೀಯ.

    ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21, ಹಾಗೂ ಗರಿಷ್ಠ 40 ವಯೋಮಿತಿ ಮೀರಿರಬಾರದು.

    ವೇತನ : ಈ‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.24,000/- ತಿಂಗಳ ವೇತನ‌ ನೀಡಲಾಗುತ್ತದೆ.

    ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಜಿಲ್ಲಾ ಹಂತದಲ್ಲಿಯೇ ನೇಮಕಾತಿ‌ ಪ್ರಕ್ರಿಯೆ ನಡೆಯಲಿದೆ.

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿ,ನಂತರ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ನೇಮಕಾತಿಯಾದ ಅಭ್ಯರ್ಥಿಗಳು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ನೇಮಿಸಿದ ಸ್ಥಳದಲ್ಲಿ ಕಾರ್ಯ ನಿರ್ವಹಿಸಬೇಕು.

    ಅಭ್ಯರ್ಥಿಗಳು ಕಡ್ಡಾಯವಾಗಿ ಕನ್ನಡ ಜ್ಞಾನ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು

  • ಐಎಫ್ ಎಸ್ ನಲ್ಲಿ 110 ಹುದ್ದೆಗೆ ಅರ್ಜಿ ಆಹ್ವಾನ

    ಐಎಫ್ ಎಸ್ ನಲ್ಲಿ 110 ಹುದ್ದೆಗೆ ಅರ್ಜಿ ಆಹ್ವಾನ

    ಕೇಂದ್ರ ಲೋಕಸೇವಾ ಆಯೋಗದಿಂದ ಪ್ರತಿವರ್ಷ ಕರೆಯಲಾಗುತ್ತಿರುವ ಐಎಫ್ ಎಸ್ (ಇಂಡಿಯನ್ ಫಾರೆಸ್ಟ್ ಸರ್ವಿಸಸ್ ) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆಗಳ ಸಂಖ್ಯೆ : ಒಟ್ಟು 110 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಆನ್ ಲೈನ್ ಅರ್ಜಿ ಈಗಾಗಲೇ ಪ್ರಾಭವಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಮುಖ್ಯ ದಿನಾಂಕ

    ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 04-03-2021

    ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24-03-2021

    ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 24-03-2021

    ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಎಸ್ಸಿ ಪದವಿಯನ್ನು ಪಾಸಾಗಿರಬೇಕು.

    ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 21ಹಾಗೂ ಗರಿಷ್ಠ ವಯೋಮಿತಿ 32 ಹೊಂದಿರಬೇಕು.

    ಅರ್ಜಿ ಶುಲ್ಕ :ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ರೂ.100/- ಹಾಗೂ ಎಸ್.ಟಿ, ಎಸ್.ಸಿ, ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

    ಆಯ್ಕೆ ವಿಧಾ‌ನ : ಅಭ್ಯರ್ಥಿಗಳಿಗೆ ಎರಡು ಹಂತದಲ್ಲಿ ಲಿಖಿತ ಪರೀಕ್ಷೆ ಗಳನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    https://upsconline.nic.in/mainmenu2.php

  • ಕರ್ನಾಟಕ ಯುನಿವರ್ಸಿಟಿ ಧಾರವಾಡದಲ್ಲಿ ನೇಮಕ

    ಕರ್ನಾಟಕ ಯುನಿವರ್ಸಿಟಿ ಧಾರವಾಡದಲ್ಲಿ ನೇಮಕ

    ಕರ್ನಾಟಕ ಯುನಿವರ್ಸಿಟಿ ಧಾರವಾಡ (ಕೆಯುಡಿ) ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 15 ಮಾರ್ಚ್, 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-03-2021
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸುವಂತಿಲ್ಲ.

    ಕೆಯುಡಿ ನಲ್ಲಿ ರಿಸರ್ಚ್ ಅಸಿಸ್ಟೆಂಟ್ -1 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಯೋಮಿತಿ : ಕೆಯುಡಿ ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳು ವಯೋಮಿತಿಯನ್ನು ಹೊಂದಿರಬೇಕು.

    ವಿದ್ಯಾರ್ಹತೆ :ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ಯುನಿವರ್ಸಿಟಿ ಯಿಂದ ಎಂ.ಫಿಲ್, ಪೋಸ್ಟ್ ಗ್ರಾಜ್ಯುಯೇಶನ್ ಹೊಂದಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ 15-03-2021 ರೊಳಗೆ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.

    Dr. Tanushri N. Anchan, Project Director, Department of Criminology & Forensic Science, Karnataka University, Dharwad

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಲ್ಲಿ 170 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಲ್ಲಿ 170 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 05 ಎಪ್ರಿಲ್ 2021 (5.30pm) ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?:ಆನ್ಲಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-04-2021(5.30)
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ ‌35 ವಯೋಮಿತಿ ಹೊಂದಿರಬೇಕು.
    ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4th,9th ಪಾಸಾಗಿರಬೇಕು.

    ಹುದ್ದೆಗಳ ಸಂಖ್ಯೆ : ಅಂಗನವಾಡಿ ಕಾರ್ಯಕರ್ತೆಯ ಒಟ್ಟು ಹುದ್ದೆ-36

    ಅಂಗನವಾಡಿ ಸಹಾಯಕಿ ಒಟ್ಟು ಹುದ್ದೆ -134

    ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4th,9th ಪಾಸಾಗಿರಬೇಕು.

    ಹುದ್ದೆಗಳ ಸಂಖ್ಯೆ : ಅಂಗನವಾಡಿ ಕಾರ್ಯಕರ್ತೆ ಯ ಒಟ್ಟು ಹುದ್ದೆ-36

    ಅಂಗನವಾಡಿ ಸಹಾಯಕಿ ಒಟ್ಟು ಹುದ್ದೆ -134

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ