Author: Mallika

  • ಕೆಎಸ್ ಸಿಸಿಎಫ್ ನೇಮಕಾತಿ ಪ್ರಕಟಣೆ

    ಕೆಎಸ್ ಸಿಸಿಎಫ್ ನೇಮಕಾತಿ ಪ್ರಕಟಣೆ

    ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ನಿಯಮಿತ, ಬೆಂಗಳೂರು ಇದರಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು43 ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ: ಲೆಕ್ಕಿಗರು: 05
    ಪ್ರಥಮ ದರ್ಜೆ ಗುಮಾಸ್ತರು- 10
    ವಿಕ್ರಯ ಸಹಾಯಕರು- 10
    ಬೆರಳಚ್ಚು ಗಾರರು- 08
    ಜವಾನರು- 10

    ಒಟ್ಟು ಹುದ್ದೆ : 43

    ನೇನಕಾತಿಗಾಗಿ ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸುವುದು.

    ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 05-03-2021 ರಿಂದ ದಿನಾಂಕ 05-04-2021 ರವರೆಗೆ ಸಲ್ಲಿಸುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

    www.recruitapp.in/ksccf2021

  • ಬ್ಯಾಕ್ ಲಾಗ್ ನೇಮಕಾತಿ ಪ್ರಕಟಣೆ

    ಬ್ಯಾಕ್ ಲಾಗ್ ನೇಮಕಾತಿ ಪ್ರಕಟಣೆ

    ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ನಿಯಮಿತ, ಬೆಂಗಳೂರು ಇದರಲ್ಲಿನ ಖಾಲಿ ಇರುವ ಕಿರಿಯ ಫಾರ್ಮಾಸಿಸ್ಟ್ ಹುದ್ದೆಯ ವೇತನ ಶ್ರೇಣಿ ರೂ. 14,500/-ರೂ. 26,700/- ರಲ್ಲಿ ಪರಿಶಿಷ್ಟ ಜಾತಿಗೆ 01 ಮತ್ತು ಪರಿಶಿಷ್ಟ ಪಂಗಡಕ್ಕೆ 01ರಂತೆ ಮೀಸಲಿರಿಸಿದ ಒಟ್ಟು 2 ಬ್ಯಾಕ್ ಲಾಗ್ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ, ಅರ್ಜಿಯ ನಮೂನೆಗಳು, ಅರ್ಜಿ ಸಲ್ಲಿಸುವ ಹಾಗೂ ಆಯ್ಕೆಯ ವಿಧಾನ ಮತ್ತು ಇತರೆ ವಿವರಗಳು ಮಹಾಮಂಡಳದ ವೆಬ್‌ಸೈಟ್‌ www.recruitapp.in/kpscf2021 ನಲ್ಲಿ ಲಭ್ಯವಿದ್ದು ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 05-03-2021 ರಿಂದ ದಿನಾಂಕ 05-04-2021 ರವರೆಗೆ ಸಲ್ಲಿಸುವುದು. ಅಭ್ಯರ್ಥಿಗಳು ನೇಮಕಾತಿಗಾಗಿ ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸುವುದು. ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೋರಿಯರ್ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ.

  • ಕೆಪಿಎಸ್ ಸಿ ಕೀ ಉತ್ತರ ಪ್ರಕಟಣೆ

    ಕೆಪಿಎಸ್ ಸಿ ಕೀ ಉತ್ತರ ಪ್ರಕಟಣೆ

    ಆಯೋಗವು ದಿನಾಂಕ 28-02-2021 ರಂದು ನಡೆದ ವಿವಿಧ ಇಲಾಖೆಗಳಲ್ಲಿನ ಸಹಾಯಕರು/ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ(ವಿಷಯ ಸಂಕೇತ -385), ಸಾಮಾನ್ಯ ಕನ್ನಡ (ವಿಷಯ ಸಂಕೇತ-386) ಸಾಮಾನ್ಯ ಇಂಗ್ಲೀಷ್ ( ವಿಷಯ ಸಂಕೇತ – 387) ರ ಕೀ ಉತ್ತರಗಳನ್ನು ಆಯೋಗದ ಅಂತರ್ಜಾಲ https://kpsc.kar.nic.in ನಲ್ಲಿ ಪ್ರಕಟಿಸಿದೆ. ಮತ್ತು ಸದರಿ ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಆಯೋಗದ ಅಂತರ್ಜಾಲದ ದಿನಾಂಕ 04-03-2021ರ ಪ್ರಕಟಣೆಯಂತೆ ಆಕ್ಷೇಪಣೆಗಳನ್ನು ಸಲ್ಲಿಸಬಹುದೆಂದು ಅಭ್ಯರ್ಥಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಿದೆ.

  • 545 ಸಿವಿಲ್ ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷಾ ದಿನಾಂಕ ನಿಗದಿ

    545 ಸಿವಿಲ್ ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷಾ ದಿನಾಂಕ ನಿಗದಿ

    ಸಿವಿಲ್ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಾತಿಗೆ, ಸಹಿಷ್ಞುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪೊಲೀಸ್ ಇಲಾಖೆಯು ದಿನಾಂಕ ನಿಗದಿಪಡಿಸಿದೆ. ಈ ಪರೀಕ್ಷೆಗಳಿಗೆ ಕ್ರೀಡಾಂಗಣವನ್ನು ಮೀಸರಿಸಿಕೊಳ್ಳುವ ಬಗ್ಗೆಯೂ ಪೊಲೀಸ್ ಮಹಾ ನಿರೀಕ್ಷಕರು ಸೂಚಿಸಿದ್ದಾರೆ.

    ದಿನಾಂಕ 15-03-2021 ರಿಂದ 15-04-2021 ರವರೆಗೆ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಪಿಎಸ್‌ಐ ಹುದ್ದೆಗಳಿಗೆ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ನಡೆಯಲಿದೆ.

    545 ಪಿಎಸ್‌ಐ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆ ಇದಾಗಿದೆ. ಸದರಿ ಹುದ್ದೆಗಳಿಗೆ ಪೊಲೀಸ್ ಇಲಾಖೆಯು 2021 ರ ಜನವರಿ ತಿಂಗಳಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟಿಸಿತ್ತು.

    ವೇಳಾಪಟ್ಟಿಯನ್ನು ಅಧಿಕೃತವಾಗಿ ಅಂತಿಮಗೊಳಿಸಿದ ನಂತರ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಿದೆ. ನಂತರ ಅಭ್ಯರ್ಥಿಗಳು ಕೆಎಸ್‌ಪಿ ಅಫೀಶಿಯಲ್ ವೆಬ್‌ಸೈಟ್‌ನಲ್ಲಿ ಲಾಗಿನ್ ಆಗುವ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು,

    ಪ್ರವೇಶ ಪತ್ರದಲ್ಲಿ ನೀಡಲಾದ ದಿನಾಂಕದಂದು ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಸಹಿಷ್ಞುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗೆ ಹಾಜರಾಬೇಕು.

  • ಯುಪಿಎಸ್‌ಸಿ 822 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಯುಪಿಎಸ್‌ಸಿ 822 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಯುಪಿಎಸ್ ಸಿ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 04-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-03-2021
    ಅರ್ಜಿ ಶುಲ್ಕ: ಆನ್ಲೈನ್ ಮೂಲಕ

    ಅರ್ಜಿ ಸಲ್ಲಿಕೆ:
    ಯುಪಿಎಸ್ ಸಿ ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಯುಪಿಎಸ್ ಸಿ ನಲ್ಲಿ 822 ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌.

    ಹುದ್ದೆ – ಐಎಎಸ್/ಐಎಫ್ ಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

    ಹುದ್ದೆ ವಿವರ : ಐಎಎಸ್ -712,ಐಎಫ್ ಎಸ್ – 110

    ವಿದ್ಯಾರ್ಹತೆ : ಐಎಎಸ್ -ಡಿಗ್ರಿ
    ಐಎಫ್ ಎಸ್: ಡಿಗ್ರಿ, ಬಿಟೆಕ್,ಬಿಇ
    ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವಾಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 32 ವಯೋಮಿತಿ ಹೊಂದಿರಬೇಕು.

    ಅರ್ಜಿ ಶುಲ್ಕ : ಜನರಲ್ ಒಬಿಸಿ ಅಭ್ಯರ್ಥಿಗಳು – ರೂ.100/-
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ಅಭ್ಯರ್ಥಿಗಳು/ಪಿಡ್ಬ್ಯುಡಿ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ
    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳ ನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ
    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕನ್ನು ಕ್ಲಿಕ್ ಮಾಡಿ

    ಆನ್ಲೈನ್ ಮೂಲಕ ಅಪ್ಲೈ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ

  • ಸಿಎಸ್ ಜಿ ಕರ್ನಾಟಕ 85 ಹುದ್ದೆಗಳ ನೇಮಕ

    ಸಿಎಸ್ ಜಿ ಕರ್ನಾಟಕ 85 ಹುದ್ದೆಗಳ ನೇಮಕ

    ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆಸ್ ಕರ್ನಾಟಕ (ಸಿಎಸ್ ಜಿ ಕರ್ನಾಟಕ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 31, ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 04-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2021
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

    ಸಿಎಸ್ ಜಿ ಕರ್ನಾಟಕ ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಸಿಎಸ್ ಜಿ ನಲ್ಲಿರುವ ಹುದ್ದೆಗಳಿಗೆ ಸಾಫ್ಟ್‌ವೇರ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ ಸಂಖ್ಯೆ : 85

    ವಿದ್ಯಾರ್ಹತೆ : ಸಿಎಸ್ ಜಿ ಕರ್ನಾಟಕ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು.

    ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ಇ – ಮೈಲ್ ಗೆ ದಿನಾಂಕ 31-03-2021 ರೊಳಗೆ ಕಳುಹಿಸಬೇಕು.

    [email protected]