Author: Mallika

  • ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ನೇಮಕ: ಮಾರ್ಚ್ 30 ಕೊನೇ ದಿನ

    ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ನೇಮಕ: ಮಾರ್ಚ್ 30 ಕೊನೇ ದಿನ

    ಮಡಿಕೇರಿ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ ಮಡಿಕೇರಿ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 30,2021

    ವೇತನ : ರೂ.7000/-

    ಈ ಹುದ್ದೆಗಳಿಗೆ ಸಂಬಂಧ ಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

    ವಿರಾಜಪೇಟೆ ತಾಲೂಕಿನ ಹೊಸೂರು ಅಮ್ಮತ್ತಿ ಗ್ರಾ.ಪಂ.ಗ್ರಂಥಾಲಯ ಸಾಮಾನ್ಯ ಅಭ್ಯರ್ಥಿ(ಮಾ.ಸೈ) ಮತ್ತು ಆಲೂರು ಸಿದ್ಧಾಪುರ ಗ್ರಾ.ಪಂಚಾಯತ್ ಗ್ರಂಥಾಲಯ 2ಎ(ಸಾ.ಅ)ಸೋಮವಾರಪೇಟೆ ತಾಲೂಕು ಶಿರಂಗಾಲ ಗ್ರಾ.ಪಂ. ಗ್ರಂಥಾಲಯ (ಸಾ‌.ಅ) ಮತ್ತು ಚೆಂಬೆ ಬೆಳ್ಳೂರು ಗ್ರಾ‌ಪಂ ಗ್ರಂಥಾಲಯ ಪ್ರ.ವರ್ಗ-1 ( ಮಹಿಳಾ ಅಭ್ಯರ್ಥಿ)

    ಅರ್ಜಿಯ ಜೊತೆಗೆ ಇತರೆ ದಾಖಲೆಗಳನ್ನು ದೃಢೀಕರಿಸಿದ ಪ್ರತಿಯನ್ನು ಸಂಬಂಧ ಪಟ್ಟ ಗ್ರಾಮಪಂಚಾಯತ್ ಕಚೇರಿಗೆ ತಲುಪಿಸುವುದು.

    ಹೆಚ್ಚಿನ ವಿವರಗಳಿಗಾಗಿ
    ಮುಖ್ಯ ಗ್ರಂಥಾಲಯಾಧಿಕಾರಿಯವರ ಕಚೇರಿ,ಜಿಲ್ಲಾ ಕೇಂದ್ರ ಗ್ರಂಥಾಲಯ,ಮಡಿಕೇರಿ ಇವರನ್ನು ಸಂಪರ್ಕಿಸುವುದು.

    ದೂರವಾಣಿ ಸಂಖ್ಯೆ : 08272 225463

  • ಡಿಎಫ್ ಸಿಸಿಐಎಲ್ ನಲ್ಲಿ 1099 ಹುದ್ದೆ: ಕೂಡಲೇ ಅರ್ಜಿ ಸಲ್ಲಿಸಿ

    ಡಿಎಫ್ ಸಿಸಿಐಎಲ್ ನಲ್ಲಿ 1099 ಹುದ್ದೆ: ಕೂಡಲೇ ಅರ್ಜಿ ಸಲ್ಲಿಸಿ

    ಡೆಡಿಕೇಟೆಡ್ ಫ್ರೈಟ್ ಕೋರಿಡಾರ್ ಕಾರ್ಪೋರೇಷನ್ ಆಫ್ ಇಂಡಿಯಾ (ಡಿಎಫ್ ಸಿಸಿಐಎಲ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್, 15 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 02-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2021
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

    ವಯೋಮಿತಿ : ಅಭ್ಯರ್ಥಿಗಳ ವಯೋಮಿತಿ ಯು ಗರಿಷ್ಠ 55 ಕ್ಕಿಂತ ಮೀರಿರಬಾರದು.

    ಡಿಎಫ್ ಸಿಸಿಐಎಲ್ ನಲ್ಲಿ ಜ್ಯೂನಿಯರ್ ಮ್ಯಾನೇಜರ್ ಹಾಗೂ ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ : ಜ್ಯೂನಿಯರ್ ಮ್ಯಾನೇಜರ್ 124,ಎಕ್ಸಿಕ್ಯುಟಿವ್ 454,ಜ್ಯೂನಿಯರ್ ಎಕ್ಸಿಕ್ಯುಟಿವ್ 521 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಡಿಎಫ್ ಸಿಸಿಐಎಲ್ ನ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು.

    ವೇತನ: ಜ್ಯೂನಿಯರ್ ಮ್ಯಾನೇಜರ್ – ರೂ.50,000/- ರಿಂದ ರೂ. 1,60,000/-
    ಎಕ್ಸಿಕ್ಯುಟಿವ್ – ರೂ.30,000- ರಿಂದ ರೂ. 1,20,000/-
    ಜ್ಯೂನಿಯರ್ ಎಕ್ಸಿಕ್ಯುಟಿವ್ -ರೂ.25,000/- ರಿಂದ ರೂ.68,000/-

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಒಟ್ಟು ಹುದ್ದೆ : 1099

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ 15-04-2021 ರೊಳಗೆ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.

    Jt. General Manager/ HR, Dedicated Freight Corridor Corporation of India Ltd. (DFCCIL) , 5th Floor, Supreme Court Metro Station Building Complex, New Delhi-110001

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    https://dfccil.com/

  • ಅತಿಥಿ ಶಿಕ್ಷಕರು/ಅತಿಥಿ ಉಪನ್ಯಾಸಕರಾಗಿ ಅರ್ಜಿ ಆಹ್ವಾನ

    ಅತಿಥಿ ಶಿಕ್ಷಕರು/ಅತಿಥಿ ಉಪನ್ಯಾಸಕರಾಗಿ ಅರ್ಜಿ ಆಹ್ವಾನ

    ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ/ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರು/ಅತಿಥಿ ಉಪನ್ಯಾಸಕರುಗಳನ್ನು 2020-21 ನೇ ಸಾಲಿನಲ್ಲಿ ಗೌರವಧನದ ಆಧಾರದ ಮೇಲೆ ಜಿಲ್ಲಾ ಹಂತದಲ್ಲಿ ನಿಯಮಾವಳಿಗಳಿಗೆ ಒಳಪಟ್ಟು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆದ್ದರಿಂದ ಅರ್ಹ ಅಭ್ಯರ್ಥಿಗಳು (ನಿರುದ್ಯೋಗಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನಿವೃತ್ತ ಶಿಕ್ಷಕರು/ಉಪನ್ಯಾಸಕರು) ಆಯಾ ಜಿಲ್ಲಾ ಕೇಂದ್ರಗಳಲ್ಲಿರುವ ಸಂಬಂಧಿಸಿದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ/ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಜಿಲ್ಲಾ ಕಚೇರಿಗಳಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳನ್ನ/ವಸತಿ ಶಾಲೆ ಮತ್ತು ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಿ ಸಂಬಂಧಿಸಿದ ದಾಖಲಾತಿಗಳೊಂದಿಗೆ‌ ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಅಭ್ಯರ್ಥಿಯು ಹಲವು ಜಿಲ್ಲೆಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಸಂಘದ ಅಧಿಕೃತ ವೆಬ್‌ಸೈಟ್‌ www.kries.kar.nic.in ಗೆ ಭೇಟಿ ನೀಡಬಹುದು.

  • ಕೆಪಿಎಸ್ ಸಿ ಪ್ರಥಮ ದರ್ಜೆ ಸಹಾಯಕ ಆಯ್ಕೆ ಪಟ್ಟಿ ಪ್ರಕಟ

    ಕೆಪಿಎಸ್ ಸಿ ಪ್ರಥಮ ದರ್ಜೆ ಸಹಾಯಕ ಆಯ್ಕೆ ಪಟ್ಟಿ ಪ್ರಕಟ

    ಕರ್ನಾಟಕ ಲೋಕಸೇವಾ ಆಯೋಗವು ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಇದೀಗ ಪ್ರಕಟಿಸಿದೆ. ವಿವರಗಳು ಈ ಕೆಳಗಿನಂತಿವೆ,

    ತಾತ್ಕಾಲಿಕ ಆಯ್ಕೆ ಪಟ್ಟಿಗಳ ಮಾಹಿತಿ :
    2018 ಮತ್ತು 20-21 ನೇ ಸಾಲಿನ ತಿದ್ದುಪಡಿ ಅಧಿಸೂಚನೆಗೆ ಸಂಬಂಧಿಸಿದ ಹುದ್ದೆ ಇದಾಗಿದ್ದು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ 1 ಎಫ್‌ಡಿಎ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ.

    ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ 5 ಕ್ಷೇತ್ರ ಸಹಾಯಕರು-ಹೆಚ್ ಕೆ ವೃಂದ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ. 2018 ಮತ್ತು 20-21 ನೇ ಸಾಲಿನ ತಿದ್ದುಪಡಿ ಅಧಿಸೂಚನೆಗೆ ಸಂಬಂಧಿಸಿದ ಹುದ್ದೆ ಇದಾಗಿದೆ.

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪ ಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿನ 79 ವಿಜ್ಙಾನ ಶಿಕ್ಷಕರು-ಉಳಿಕೆ ಮೂಲ ವೃಂದ (ಗ್ರೂಪ್ ಸಿ) ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

    ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿನ 21 ವಿಜ್ಞಾನ ಶಿಕ್ಷಕರು

    ಹೈ.ಕ ವೃಂದ(ಗ್ರೂಪ್ ಸಿ) ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ.

    ಈ ಎಲ್ಲಾ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

    http://www.kpsc.kar.nic.in/

  • ಯುಎಎಸ್ ಧಾರವಾಡ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ

    ಯುಎಎಸ್ ಧಾರವಾಡ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ

    ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ಧಾರವಾಡ ( ಯುಎಎಸ್ ಧಾರವಾಡ) ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೋಟಿಫಿಕೇಶನ್ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, 10 ಮಾರ್ಚ್ 2021 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್
    ನೋಟಿಫಿಕೇಶನ್ ಆರಂಭವಾದ ದಿನಾಂಕ: 24-02-2021
    ನೇರ ಸಂದರ್ಶನದ ದಿನಾಂಕ: 10-03-2021(11am)

    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ಹುದ್ದೆ ವಿವರ :ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನಲ್ಲಿ ಧಾರವಾಡ ( ಯುಎಎಸ್ ಧಾರವಾಡ) ಪಾರ್ಟ್ ಟೈಮ್ ಟೀಚರ್ ಹುದ್ದೆಗೆ (1) ಅರ್ಜಿ ಆಹ್ವಾನಿಸಲಾಗಿದೆ.

    ವೇತನ: ರೂ.40,000/- ವೇತನ ತಿಂಗಳಿಗೆ ನಿಗದಿಪಡಿಸಲಾಗಿದೆ.

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಎಂಎ, ಪಿಎಚ್ಡಿ ಯನ್ನು ಹೊಂದಿರಬೇಕು.

    ವಯೋಮಿತಿ : ಯುಎಎಸ್ ಧಾರವಾಡ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಈ ಕೆಳಗಿನ ವಿಳಾಸಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು.

    ವಿಳಾಸ:
    Office of the Dean (Agriculture), Agricultural University, Dharwad – 580005, Karnataka on 10th March 2021 11:00 AM.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ವಿಜಯಪುರ ಡಿಸ್ಟ್ರಿಕ್ಟ್‌ ಕೋರ್ಟ್‌ ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 26 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27-02-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-03-2021 (11;59 pm)

    ವಿಜಯಪುರ ಡಿಸ್ಟ್ರಿಕ್ಟ್‌ ಕೋರ್ಟ್‌ ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

    ವಿಜಯಪುರ ಡಿಸ್ಟ್ರಿಕ್ಟ್‌ ಕೋರ್ಟ್‌ ನಲ್ಲಿರುವ ಟೈಪಿಸ್ಟ್- ಕಾಪಿಸ್ಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ: 2

    ವಿದ್ಯಾರ್ಹತೆ : ಅಭ್ಯರ್ಥಿಗಳು ಎಸ್‌ಎಸ್‌ಎಲ್‌ ಸಿ ಯನ್ನು ಯಾವುದೇ ಬೋರ್ಡ್ ಅಥವಾ ಯುನಿವರ್ಸಿಟಿಯಿಂದ ತೇರ್ಗಡೆ ಹೊಂದಿರಬೇಕು.

    ವಯೋಮಿತಿ : ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 35 ವಯೋಮಿತಿ ಹೊಂದಿರಬೇಕು. ( 26 ಮಾರ್ಚ್ 2021)
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಿಎಟಿ-1 ಅಭ್ಯರ್ಥಿಗಳಿಗ 5 ವರ್ಷ, ಸಿಎಟಿ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಿಎಟಿ-೧ , ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100/- , ಜನರಲ್, ಸಿಎಟಿ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ರೂ.2೦೦/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

    ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ( ಎಸ್‌ಬಿಐ ಚಲನ್)-30-03-2021

    ಆಯ್ಕೆ ಪ್ರಕ್ರಿಯೆ : ಟೈಪಿಂಗ್ ಟೆಸ್ಟ್‌, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಭರ್ತಿ ಮಾಡಿ ಓನ್‌ಲೈನ್ ಮೂಲಕ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಓನ್‌ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ