Author: Mallika

  • ಸಾರಸ್ವತ್ ಕೋಅಪರೇಟಿವ್ ಬ್ಯಾಂಕ್ ನಲ್ಲಿ 150 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಸಾರಸ್ವತ್ ಕೋಅಪರೇಟಿವ್ ಬ್ಯಾಂಕ್ ನಲ್ಲಿ 150 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಸಾರಸ್ವತ್ ಕೋ-ಅಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್, 19 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 05-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-03-2021
    ಅರ್ಜಿ ಶುಲ್ಕ: ರೂ.750/-

    ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಸಾರಸ್ವತ ಬ್ಯಾಂಕ್ ನಲ್ಲಿ 150 ಜ್ಯೂನಿಯರ್ ಆಫೀಸರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವೇತನ : ರೂ. 21,620 ರಿಂದ ರೂ. 23,300 ರವರೆಗೆ

    ಹುದ್ದೆ ಸ್ಥಳ: ಮಹಾರಾಷ್ಟ್ರ, ಗೋವಾ,ಕರ್ನಾಟಕ, ಗುಜರಾತ್

    ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು 750/ ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

    ವಿದ್ಯಾರ್ಹತೆ: ಸಾರಸ್ವತ ಬ್ಯಾಂಕ್ ನಲ್ಲಿ ಗ್ರಾಜ್ಯುಯೇಶನ್, ಪೋಸ್ಟ್ ಗ್ರಾಜ್ಯುಯೇಶನ್ ಪದವಿಯನ್ನು ಯಾವುದಾದರೂ ಸಂಸ್ಥೆ/ಬೋರ್ಡ್ ನಿಂದ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 27 ವಯೋಮಿತಿ ಹೊಂದಿರಬೇಕು.

  • GIMS ಗದಗ್ ನಲ್ಲಿ ವಿವಿಧ ಹುದ್ದೆ.

    GIMS ಗದಗ್ ನಲ್ಲಿ ವಿವಿಧ ಹುದ್ದೆ.

    ಗದಗ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಆಫ್ ಮೆಡಿಕಲ್ ಸೈನ್ಸ್ (GIMS) ಗದಗ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 15,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-03-2021(4pm)

    ಗದಗ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಆಫಯ ಮೆಡಿಕಲ್ ಸೈನ್ಸ್ (GIMS) ನಲ್ಲಿ ಜ್ಯೂನಿಯರ್ ರೆಸಿಡೆಂಟ್, ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ : ಒಟ್ಟು 69 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ: ಪ್ರೊಫೆಸರ್ – 4, ಅಸೋಸಿಯೇಟ್ ಪ್ರೊಫೆಸರ್ -8, ಅಸಿಸ್ಟೆಂಟ್ ಪ್ರೊಫೆಸರ್ -6, ಎಲ್ ಎಂಒ-8, ಸಿಎಂಒ-8,ಜ್ಯೂನಿಯರ್ ರೆಸಿಡೆಂಟ್-42, ಟ್ಯೂಟರ್-5

    ವೇತನ: ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.37,400/- ರಿಂದ ರೂ.67,000/- ರವರೆಗೆ ವೇತನ ವಿರುತ್ತದೆ.

    ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.15,600/- ರಿಂದ ರೂ.39,100/- ವೇತನವಿರುತ್ತದೆ

    ವಯೋಮಿತಿ: ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 50, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 45,ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ 38,ಉಳಿದ ಹುದ್ದೆಗೆ ಎನ್ ಎಂಸಿ/ಎಂಸಿಐ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ವಿದ್ಯಾರ್ಹತೆ: ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಗೆ ಪೋಸ್ಟ್ ಗ್ರಾಜುಯೇಟ್, ಎಂಡಿ,ಎಂಎಸ್

    ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಎಂಬಿಬಿಎಸ್,ಪೋಸ್ಟ್ ಗ್ರಾಜ್ಯುಯೇಟ್,ಎಂಡಿ,ಎಂಎಸ್

    ಉಳಿದ ಹುದ್ದೆಗಳಿಗೆ ಎನ್ ಎಂಸಿ/ಎಂಸಿಐ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು.

    ಅಭ್ಯರ್ಥಿಗಳು GIMS ಗದಗ್ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 15-03-2021 ( 4 pm)ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.

    The Director, Gadag Institute of Medical Sciences, Mallasamudra, Gadag – 582103

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಹೆಚ್ ಪಿಸಿಎಲ್ ನಲ್ಲಿ  200 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಹೆಚ್ ಪಿಸಿಎಲ್ ನಲ್ಲಿ 200 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಹಿಂದುಸ್ತಾನ್ ಪೆಟ್ರೊಲಿಯಂ ಕಾರ್ಪೋರೇಷನ್ ಲಿಮಿಟೆಡ್(HPCL)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 15 ಎಪ್ರಿಲ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 03-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2021

    ಹಿಂದುಸ್ತಾನ್ ಪೆಟ್ರೊಲಿಯಂ ಕಾರ್ಪೋರೇಷನ್ ಲಿಮಿಟೆಡ್(HPCL) ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

    ಯುಆರ್,ಒಬಿಸಿಎನ್ ಸಿ ಮತ್ತು ಇಡ್ಬ್ಯುಎಸ್ ಅಭ್ಯರ್ಥಿಗಳು ರೂ.1180/- ಅರ್ಜಿ ಶುಲ್ಕವನ್ನು ಪಾವತಿಸಬೇಕು.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು , ಪಿಡ್ಬ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಗ್ರೂಪ್ ಟಾಸ್ಕ್, ಪರ್ಸನಲ್ ಇಂಟರ್ವ್ಯೂ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಹಿಂದುಸ್ತಾನ್ ಪೆಟ್ರೊಲಿಯಂ ಕಾರ್ಪೋರೇಷನ್ ಲಿಮಿಟೆಡ್(HPCL) ನಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಹಾಗೂ ಸಿವಿಲ್ ಇಂಜಿನಿಯರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಒಟ್ಟು ಹುದ್ದೆಗಳ ಸಂಖ್ಯೆ : 200

    ಹುದ್ದೆ ಸ್ಥಳ: ಆಲ್ ಇಂಡಿಯಾ

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ‌.50000/- ರಿಂದ1,60,000/- ರವರೆಗೆ ವೇತನವಿರುತ್ತದೆ.

    ವಿದ್ಯಾರ್ಹತೆ : ಡಿಪ್ಲೋಮಾ, ಬಿಇ/ಬಿಟೆಕ್ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯ/ ಬೋರ್ಡ್ ನಿಂದ ಪಡೆದಿರಬೇಕು.

    ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ ಯು 25 ಕ್ಕಿಂತ ಹೆಚ್ಚಿರಬಾರದು.

    ಒಬಿಸಿ,2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 3 ವರ್ಷ,ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಪಿಡ್ಬ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ ಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಹುದ್ದೆಗಳ ವಿವರ :ಮೆಕ್ಯಾನಿಕಲ್ ಇಂಜಿನಿಯರ್ -120,ಸಿವಿಲ್ ಇಂಜಿನಿಯರ್-30,ಎಲೆಕ್ಟ್ರಿಕಲ್ ಇಂಜಿನಿಯರ್-25,ಇಂಸ್ಟ್ರುಮೆಂಟೇಶನ್ ಇಂಜಿನಿಯರ್ -25

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

    https://www.hindustanpetroleum.com/

  • ವರುಣಮಿತ್ರ ತರಬೇತಿಗೆ ಅರ್ಜಿ ಆಹ್ವಾನ

    ವರುಣಮಿತ್ರ ತರಬೇತಿಗೆ ಅರ್ಜಿ ಆಹ್ವಾನ

    ಕೇಂದ್ರ ಸರಕಾರದ ಪ್ರಾಯೋಜಿತ 21 ದಿನಗಳ ವರುಣಮಿತ್ರ – ಸೋಲಾರ್ ನೀರಿನ ಪಂಪ್ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವು ದಿನಾಂಕ 10.03.2021 ರಿಂದ ಪ್ರಾರಂಭವಾಗಲಿದ್ದು, ಡಿಪ್ಲೋಮಾ (ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್/ಮೆಕ್ಯಾನಿಕಲ್/ಸಿವಿಲ್) ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು.

    ತರಬೇತಿಯಲ್ಲಿ ಪಾಲ್ಗೊಳ್ಳಲು ತಮ್ಮ ಸ್ವವಿವರಗಳುಳ್ಳ ಬಯೋಡೇಟಾ, ಆಧಾರ್ ಕಾರ್ಡ್, ಮತ್ತು ಒಂದು ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು [email protected] ಗೆ ಇ- ಮೈಲ್ ಮಾಡಬೇಕು. 21 ದಿನಗಳು ಉಚಿತ ಊಟ ಮತ್ತು ವಸತಿ ಸೌಲಭ್ಯ ವಿರುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-03-2021
    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ : 080-23626359/23626493/9611757523/9886949922

    ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    https://mgired.kar.nic.in/index.html

  • ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

    ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಬ್ರಾಹ್ಮಣ ಮಂಡಳಿಯಿಂದ 2020-21 ನೇ ಸಾಲಿಗೆ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (state scholarship portal) ಮೂಲಜ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು , ಆಸಕ್ತ ವಿದ್ಯಾರ್ಥಿಗಳು ಕೂಡಲೇ https://ssp.postmatric.karnataka.gov.in/2021 ನ ಮೂಲಕ ಮಾಹಿತಿ ಪಡೆದು online ಮೂಲಕ ಅರ್ಜಿ ಸಲ್ಲಿಸಬಹುದು.

  • ಎನ್ ಸಿಡಿಐಆರ್ ನಲ್ಲಿ ನೇಮಕ

    ಎನ್ ಸಿಡಿಐಆರ್ ನಲ್ಲಿ ನೇಮಕ

    ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೆಟಿಕ್ಸ್ ಅಂಡ್ ರಿಸರ್ಚ್ (ಎನ್ ಸಿಡಿಐಆರ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಈಗಾಗಲೇ ಆರಂಭವಾಗಿದ್ದು, ದಿನಾಂಕ ಮಾರ್ಚ್ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿದೆ.


    ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 04-03-2021

    ಹುದ್ದೆ ವಿವರ : ಎನ್ ಸಿಡಿಐಆರ್ ನಲ್ಲಿ ರಿಸರ್ಚ್ ಫೆಲೋ-1 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಎಂ.ಡಿ,ಎಂ.ಎಸ್,ಡಿಎನ್ ಬಿ, ಎಂ.ಎಸ್ಸಿ, ಪಿಹೆಚ್ ಡಿ ಮತ್ತು ಪೋಸ್ಟ್ ಗ್ರಾಜ್ಯುಯೇಟ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ವೇತನ : ರಿಸರ್ಚ್ ಅಸೋಸಿಯೇಟ್ -1 ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.46,9೦೦/- ವೇತವನ್ನು ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ವಯೋಮಿತಿ : ಗರಿಷ್ಠ 4೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮಹಿಳಾ ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಸಲ್ಲಿಕೆ : ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಭರ್ತಿ ಮಾಡಿ ಈ ಕೆಳಗಿನ ಈ-ಮೈಲ್ ವಿಳಾಸಕ್ಕೆ ಮಾರ್ಚ್ 4, 2021 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.

    ಈ-ಮೈಲ್ ಐಡಿ : [email protected]

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಅಧಿಕೃತ ವೆಬ್ ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ