ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರಿನ ಅಡಿಯಲ್ಲಿ ಬರುವ ಮಹಾವಿದ್ಯಾಲಯಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರವರು ನಡೆಸಿದ ಕೆ.ಸಿ.ಇ.ಟಿ ( KCET-2020)ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭರ್ತಿ ಆಗದೆ ಉಳಿದಿರುವ ಸ್ನಾತಕ ಸೀಟುಗಳನ್ನು ಮುಕ್ತ ಕೌನ್ಸಲಿಂಗ್ ಆಯ್ಕೆ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಈ ಮೊದಲು ಅರ್ಜಿ ಆಹ್ವಾನಿಸಲಾಗಿತ್ತು. ಮತ್ತು ಸದರಿ ಕೌನ್ಸಲಿಂಗನ್ನು ಪಶುವೈದ್ಯಕೀಯ ಮಹಾವಿದ್ಯಾಲಯ, ಹೆಬ್ಬಾಳ ಬೆಂಗಳೂರು ಇಲ್ಲಿ ದಿನಾಂಕ 01-03-2021 ರಂದು ನಡೆಸಲು ತೀರ್ಮಾನಿಸಿರುವುದನ್ನು ರದ್ದುಪಡಿಸಿ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನಂದಿನಗರ ಬೀದರ್ ಇಲ್ಲಿ ದಿನಾಂಕ 05-03-2021ರಂದು ಬೆಳಗ್ಗೆ 10.30 ರಿಂದ ಮುಕ್ತ ಕೌನ್ಸಲಿಂಗ್ ಮತ್ತು ಅಂತಿಮ ಮಾಪಪ್ ಸುತ್ತಿನಲ್ಲಿ (final mop up round) ನಡೆಸಲಾಗುತ್ತದೆ. ಈ ಮುಕ್ತ ಕೌನ್ಸಲಿಂಗ್ ಸಂಬಂಧಪಟ್ಟಂತೆ ಹೆಚ್ಚಿನ ವಿವರಣೆಗಾಗಿ ವಿಶ್ವವಿದ್ಯಾಲಯದ ಅಧಿಕೃತ ಅಂತರ್ಜಾಲ www.kvafsu.edu.in ರಲ್ಲಿ ನೋಡಬಹುದು.
Author: Mallika
-

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಕೌನ್ಸಲಿಂಗ್ ದಿನಾಂಕ ಮುಂದೂಡಿಕೆ- ಪ್ರಕಟಣೆ
-

ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ದಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನ
ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ದಲ್ಲಿ ಗುತ್ತಿಗೆ ಆಧಾರದಲ್ಲಿ ಈ ಕೆಳಕಂಡ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ : ಟೆಕ್ನಿಕಲ್ ಕನ್ಸಲ್ಟೆಂಟ್ -01
ವೇತನ : ತಿಂಗಳಿಗೆ 30,000 ವೇತನ ನಿಗದಿಯಾಗಿರುತ್ತದೆ.
ವಿದ್ಯಾರ್ಹತೆ : ಎಂ.ಎಸ್ಸಿ ಇನ್ ಎನ್ವಿರಾನ್ಮೆಂಟಲ್ ಸೈನ್ಸಸ್/ಅಪ್ಲೈಡ್ ಬಾಟನಿ/ನ್ಯಾಚುರಲ್ ರಿಸೋರ್ಸ್ ಕಂಸರ್ವೇಶನ್ ಆಂಡ್ ಮ್ಯಾನೇಜ್ಮೆಂಟ್
ಆಸಕ್ತ ಅಭ್ಯರ್ಥಿಗಳು ದಿನಾಂಕ 10-03-2021 ರ ಬೆಳಗ್ಗೆ 11.30 ಗೆ ಪ್ರಾಧಿಕಾರದ ಕಚೇರಿಯಲ್ಲಿ ಸಂದರ್ಶನವು ನಿಗದಿಯಾಗಿರುತ್ತದೆ.
ವೈಯಕ್ತಿಕ ಮಾಹಿತಿಯನ್ನು ಒಳಗೊಂಡ ಮತ್ತು ವಿದ್ಯಾರ್ಹತೆ ಗೆ ಸಂಬಂಧಿಸಿದ ಪ್ರಮಾಣ ಪತ್ರಗಳ ಮೂಲ ಮತ್ತು ಛಾಯಾಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗತಕ್ಕದ್ದು. ಇದು ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆ ಆಗಿರುತ್ತದೆ. ಮತ್ತು ಯಾವುದೇ ಮಂಜೂರಾದ ಹುದ್ದೆ ಅಲ್ಲ. ಗುತ್ತಿಗೆ ಅವಧಿಯು 11 ತಿಂಗಳಿಗೆ ಮಾತ್ರ ಮತ್ತು ಅಭ್ಯರ್ಥಿಯ ಕಾರ್ಯನಿರ್ವಹಣೆಯನ್ನು ಅವಲಂಭಿಸಿ ಗುತ್ತಿಗೆ ಆಧಾರದಲ್ಲಿ ವಿಸ್ತರಿಸಲಾಗುವುದು.
ಕಚೇರಿ ವಿಳಾಸ : ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ,4 ನೇ ಮಹಡಿ, ವನವಿಕಾಸ,18 ನೇ ಅಡ್ಡ ರಸ್ತೆ, ಮಲ್ಲೇಶ್ವರಂ,ಬೆಂಗಳೂರು-03
ದೂರವಾಣಿ ಸಂಖ್ಯೆ : 23464089
-

ಎನ್ ಟಿಪಿಎಸ್ ನಲ್ಲಿ 230 ಹುದ್ದೆಗಳಿಗೆ ಅರ್ಜಿ ಆಹ್ವಾನ
ನ್ಯಾಷನಲ್ ಥರ್ಮಲ್ ಪವರ್ ಕೋರ್ಪರೇಷನ್ ಲಿಮಿಟೆಡ್ ( ಎನ್ ಟಿಪಿಸಿ) ನಲ್ಲಿ 230 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ 24-02-2021 ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು 10 ಮಾರ್ಚ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-03-2021ಎನ್ ಟಿಪಿಸಿನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.ಹುದ್ದೆಗಳ ವಿವರ : ಅಸಿಸ್ಟೆಂಟ್ ಇಂಜಿನಿಯರ್ – 200
ಅಸಿಸ್ಟೆಂಟ್ ಕೆಮಿಸ್ಟ್ – 30ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು ಸಾಮಾನ್ಯ,ಇತರೆ ಹಿಂದುಳಿದ ವರ್ಗ, ಇಡ್ಬ್ಯುಎಸ್ ಅಭ್ಯರ್ಥಿಗಳಿಗೆ 300ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪಿಡ್ಬ್ಯು ಬಿಡಿ, ಎಕ್ಸ್ ಸರ್ವಿಸ್ ಮ್ಯಾನ್ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.
ವಯೋಮಿತಿ: ಅಭ್ಯರ್ಥಿಗಳಿಗೆ ಗರಿಷ್ಠ 30 ವಯೋಮಿತಿ ಉಳ್ಳವರಾಗಿರಬೇಕು. ಇತರೆ ಹಿಂದುಳಿದ ವರ್ಗ,2A,2B,3A,3B ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ, ಪಿಡ್ಬ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-

ವಾಯುಪಡೆಯಲ್ಲಿ ಅವಕಾಶ : ಎಸ್ ಎಸ್ ಎಲ್ ಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ವಾಯುಪಡೆ (ಇಂಡಿಯನ್ ಏರ್ ಫೋರ್ಸ್) ನಲ್ಲಿ ಖಾಲಿ ಇರುವ 257 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು 26 ಫೆಬ್ರವರಿ 2021 ರಂದು ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು 26 ಮಾರ್ಚ್ 2021 ಕೊನೆಯ ದಿನಾಂಕವಾಗಿರುತ್ತದೆ.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೆಯೇ ಗರಿಷ್ಠ 25 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ ಈ ಕೆಳಗಿನಂತಿವೆ :
ಮಲ್ಟಿ ಟಾಸ್ಕಿಂಗ್ ಸ್ಟಾಫ್ -70
ಹೌಸ್ ಕೀಪಿಂಗ್ ಸ್ಟಾಫ್ – 43
ಮೆಸ್ ಸ್ಟಾಫ್ – 49
ಈ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಲೋವರ್ ಡಿವಿಶನ್ ಕ್ಲರ್ಕ್ -12
ಕ್ಲರ್ಕ್ ಹಿಂದಿ ಟೈಪಿಸ್ಟ್ -02
ಸ್ಟೆನೋಗ್ರಾಫರ್ ಗ್ರೇಡ್ (02)-03
ಈ ಹುದ್ದೆಗಳಿಗೆ 12 ನೇ ತರಗತಿ ಪಾಸಾದ ಅಭ್ಯರ್ಥಿಗಳು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರೋ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಸ್ಟೋರ್ ಸೂಪರಿಂಟೆಂಡೆಂಟ್ -03 ಹುದ್ದೆಗಳಿಗೆ ಪದವಿಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಸ್ಟೋರ್ ಕೀಪರ್ -03 ಹುದ್ದೆಗಳಿಗೆ 12 ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಲಾಂಡ್ರಿ ಮ್ಯಾನ್ – 07 ಹುದ್ದೆಗಳಿದ್ದು ಇದಕ್ಕೆ ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಕಾರ್ಪೆಂಟರ್ – 02 ಪೈಂಟರ್ -04 . ಈ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು ಜೊತೆಗೆ ಐಟಿಐ ಸರ್ಟಿಫಿಕೇಟ್ ನ್ನು ಕೇಳಿದ್ದಾರೆ.
ಸಿವಿಲಿಯನ್ ಮೆಕ್ಯಾನಿಕ್ ಟ್ರಾನ್ಸ್‌ಪೋರ್ಟ್ ಡ್ರೈವರ್ -09
ಈ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪಾಸಾಗಿದ್ದು, ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರು ಅರ್ಜಿ ಸಲ್ಲಿಸಬಹುದು.ಕುಕ್ (ಆರ್ಡಿನರಿ ಗ್ರೇಡ್) -41 ಹುದ್ದೆಗಳು ಇದ್ದು ಮೆಟ್ರಿಕ್ಯುಲೇಶನ್ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದು. ಜೊತೆಗೆ ಸಂಬಂಧಪಟ್ಟ ಹುದ್ದೆಯಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಕೊನೆಯದಾಗಿ ಫಯರ್ ಮ್ಯಾನ್ – 08 ಹುದ್ದೆಗಳಿದ್ದು ಅಭ್ಯರ್ಥಿಗಳು ಮೆಟ್ರಿಕ್ಯುಲೇಶನ್ ಪಾಸಾಗಿರಬೇಕು ಹಾಗೂ ಸಂಬಂಧ ಪಟ್ಡ ಟ್ರೇಡ್ ನಲ್ಲಿ ಅನುಭವ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ: ಮೇಲೆ ಹೇಳಿರುವ ಎಲ್ಲಾ
ಹುದ್ದೆಗಳಿಗೆ ಆಫ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಫ್ ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಾಯುಸೇನೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.
-

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ ) ನಿಯಮಿತ ಹುದ್ದೆಗಳಿಗೆ ಅರ್ಜಿ ಆಹ್ವಾನ
ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ( ಕರ್ನಾಟಕ ) ನಿಯಮಿತ (ಕೆಆರ್ ಐಡಿಯು) ನಲ್ಲಿ ಖಾಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 19 ಮಾರ್ಚ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 19-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-03-2021
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.(ಕೆಆರ್ ಐಡಿ)ಯು –
ಜನರಲ್ ಮ್ಯಾನೇಜರ್ (ಎಲೆಕ್ಟ್ರಿಕಲ್ ಒಎಚ್ ಇ) -01
ಜನರಲ್ ಮ್ಯಾನೇಜರ್ (ರೋಲಿಂಗ್ ಸ್ಟಾಕ್)-01
ಸೀನಿಯರ್ ಡಿಜಿಎಂ/ಜೆಜಿಎಂ-01 ಹುದ್ದೆಗಳಿಗೆ ಅರ್ಜಿ ಯನ್ನು ಆಹ್ವಾನಿಸಿದೆ.ವಿದ್ಯಾರ್ಹತೆ :
ಜನರಲ್ ಮ್ಯಾನೇಜರ್ (ಎಲೆಕ್ಟ್ರಿಕಲ್ ಒಎಚ್ ಇ)ಜನರಲ್ ಮ್ಯಾನೇಜರ್ (ರೋಲಿಂಗ್ ಸ್ಟಾಕ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಚುಲರ್ ಡಿಗ್ರಿ ಹೊಂದಿರಬೇಕು. ಸೀನಿಯರ್ ಡಿಜಿಎಂ/ಜೆಜಿಎಂ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜ್ಯುಯೇಟ್ ಇನ್ ಲಾ ಪಡೆದಿರಬೇಕು.ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 57 ವಯಸ್ಸು ಹೊಂದಿರಬೇಕು.
ವೇತನ : ಜನರಲ್ ಮ್ಯಾನೇಜರ್ ( ಎಲೆಕ್ಟ್ರಿಕಲ್ ಒಎಚ್ ಇ) ಹಾಗೂ ಜನರಲ್ ಮ್ಯಾನೇಜರ್ (ರೋಲಿಂಗ್ ಸ್ಟಾಕ್) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ರೂ. 161250 /- ತಿಂಗಳ ವೇತನ ನಿಗದಿಪಡಿಸಲಾಗಿದೆ.
ಮತ್ತು ಸೀನಿಯರ್ ಡಿಜಿಎಂ/ಜೆಜಿಎಂ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ರೂ. 147250/- ಹಾಗೂ ರೂ.14250/- ವೇತನ ಪಡೆಯಲು ಅರ್ಹರಾಗಿರುತ್ತಾರೆ.ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 19-03-2021 ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ವಿಳಾಸ : Managing Director, Rail Infrastructure development company Karnataka limited, Samparkha Soudha,1 st Floor, Survey No.8(BEP Premises)Opp.Orion Mall, Dr.Rajkumar Road, Rajajinagar, 1st block, Bangalore-560052,Karnataka, India
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
-

ಹೆಚ್ ಎಎಲ್ 475 ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ ಎ ಎಲ್ )ನಲ್ಲಿ ಖಾಲಿ ಇರುವ 475 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 13 ಮಾರ್ಚ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20 ಫೆಬ್ರವರಿ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 ಮಾರ್ಚ್ 2021
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ವಿಲ್ಲ.ಅರ್ಜಿ ಸಲ್ಲಿಕೆ: ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.
ಹುದ್ದೆಗಳ ವಿವರ :ಫಿಟ್ಟರ್ – 210, ಟರ್ನರ್ 28,ಮೆಶಿನಿಸ್ಟ್ – 26, ಕಾರ್ಪೆಂಟರ್ – 03, ಮೆಶಿನಿಸ್ಟ್ ( ಗ್ರೈಂಡರ್) 06, ಎಲೆಕ್ಟ್ರಿಶಿಯನ್ – 78, ಡ್ರಾಫ್ಟ್ ಮ್ಯಾನ್ -08, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ -08,ಪೈಂಟರ್ ಜನರಲ್ -05, ಶೀಟ್ ಮೆಟಲ್ ವರ್ಕರ್ – 04, ಮೆಕ್ಯಾನಿಕ್ -04,ಕಂಪ್ಯೂಟರ್ ಅಪರೇಟರ್ ಆಂಡ್ ಪ್ರೊಗ್ರಾಮಿಂಗ್ ಅಸಿಸ್ಟೆಂಟ್ – 77, ವೆಲ್ಡರ್ (ಗ್ಯಾಸ್ ಮತ್ತು ಎಲೆಕ್ಟ್ರಿಕ್) -10, ಸ್ಟೆನೋಗ್ರಾಫರ್ -08
ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಬೋರ್ಡ್ / ಸಂಸ್ಥೆ ಯಿಂದ ಐಟಿಐ ತೇರ್ಗಡೆ ಹೊಂದಿರಬೇಕು.
ವಯೋಮಿತಿ : ಹೆಚ್ ಎಎಲ್ ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳು ವಯೋಮಿತಿ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ