Author: Mallika

  • ಎಐಐಎಸ್ ಎಚ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಎಐಐಎಸ್ ಎಚ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ (ಎಐಐಎಸ್ ಎಚ್) ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :

    ಹುದ್ದೆ : ರಿಸರ್ಚ್ ಆಫೀಸರ್ ಮತ್ತು ಡಾಟಾ ಎಂಟ್ರಿ ಆಫೀಸರ್

    ಹುದ್ದೆ ಸಂಖ್ಯೆ – 07

    ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-03-2021(5.30pm)

    ಅರ್ಜಿ ಶುಲ್ಕ : ಸಾಮಾನ್ಯ , ಒಬಿಸಿ, ಇಡ್ಬ್ಯುಎಸ್ ಅಭ್ಯರ್ಥಿಗಳಿಗೆ ರೂ.100/-,
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.40/- ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ

    ವಯೋಮಿತಿ : ರಿಸರ್ಚ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ www.aiishmysore.in ಗೆ ಭೇಟಿ‌ ನೀಡಿ , ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 03-03-2021 ರ ಸಂಜೆ 5.30 ರೊಳಗೆ ಈ ಕೆಳಗಿನ ಕಚೇರಿ ವಿಳಾಸಕ್ಕೆ ಸಲ್ಲಿಸಬೇಕು.

    Office of the chief Administrative Officer,
    All India Institute of speech and hearing,
    Manasagangothri,
    Mysore -570006

  • ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ ಎ ಎಲ್ )ನಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

    ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ ಎ ಎಲ್ )ನಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

    ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೂಡಲೇ ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : ಟ್ರೇಡ್ ಅಪ್ರೆಂಟಿಸ್

    ಹುದ್ದೆ ಸಂಖ್ಯೆ :475

    ಹುದ್ದೆ ಸ್ಥಳ : ನಾಸಿಕ್ ( ಮಹಾರಾಷ್ಟ್ರ)

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13 ಮಾರ್ಚ್, 2021

    ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನ : 20 ಫೆಬ್ರವರಿ 2021

    ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಸಂಸ್ಥೆ/ಬೋರ್ಡ್ ನಿಂದ ಐಟಿಐ ಪಾಸಾಗಿರಬೇಕು.

    ವಯೋಮಿತಿ : ಎಚ್ ಎ ಎಲ್ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

    ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

    ಹುದ್ದೆಗಳ ವಿವರ

    ಫಿಟ್ಟರ್ -210
    ಟ್ಯೂನರ್ – 28
    ಮೆಶಿನಿಸ್ಟ್ -26
    ಕಾರ್ಪೆಂಟರ್ -03
    ಮೆಶಿನಿಸ್ಟ್ (ಗ್ರೈಂಡರ್)-06
    ಎಲೆಕ್ಟ್ರಿಶಿಯನ್ – 78
    ಡ್ರಾಫ್ಟ್ ಮ್ಯಾನ್ (ಮೆಕ್ಯಾನಿಕಲ್ )08
    ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ -08
    ಪೈಂಟರ್ ಜನರಲ್ -05
    ಶೀಟ್ ಮೆಟಲ್ ವರ್ಕರ್ -04
    ಮೆಕ್ಯಾನಿಕ್ -04
    ಕಂಪ್ಯೂಟರ್ ಒಪರೇಟರ್ ಆಂಡ್ ಪ್ರೊಗ್ರಾಮಿಂಗ್ ಅಸಿಸ್ಟೆಂಟ್ (ಸಿಒಪಿಎ)-77
    ವೆಲ್ಡರ್ (ಗ್ಯಾಸ್ ಮತ್ತು ಎಲೆಕ್ಟ್ರಿಕ್)-10
    ಸ್ಟೆನೋಗ್ರಾಫರ್ -08

    ಆನ್ ಲೈನ್ ಅಪ್ಲೈಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್  (ಐಐಎಸ್ ಸಿ) ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ

    ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ ಸಿ) ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ

    ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಫೆಸಿಲಿಟಿ (ಐಐಎಸ್ ಸಿ) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :

    ಹುದ್ದೆ : ಫೆಸಿಲಿಟಿ ಮ್ಯಾನೇಜರ್

    ಹುದ್ದೆ ಸಂಖ್ಯೆ :01

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 01, 2021

    ವಯೋಮಿತಿ : ಗರಿಷ್ಠ 40 ವರ್ಷ ವಯಸ್ಸಾಗಿರಬೇಕು. ( ಮಾರ್ಚ್ 01, 2021 ರ ಅನ್ವಯ) ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಅಂಗೀಕೃತ ಸಂಸ್ಥೆಯಿಂದ ಎಂ.ಇ/ ಪಿಎಚ್ ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.1,00,000/- ರಿಂದ ರೂ.2,00,00/- ರವರೆಗೆ ವೇತನವಿರುತ್ತದೆ.

    ಅರ್ಜಿದಾರರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, [email protected] ವಿಳಾಸಕ್ಕೆ ಮೇಲ್ ಮಾಡಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕನ್ನು ಕ್ಲಿಕ್ ಮಾಡಿ.

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಎಚ್ ಎ ಎಲ್ ನಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

    ಎಚ್ ಎ ಎಲ್ ನಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

    ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ ಎಎಲ್) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:

    ಹುದ್ದೆ : ಮುಖ್ಯ ವ್ಯವಸ್ಥಾಪಕ (ಕಾನೂನು)

    ಹುದ್ದೆ ಸಂಖ್ಯೆ : 01

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 12, 2021

    ವಯೋಮಿತಿ :ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 48 ವಯಸ್ಸಾಗಿರಬೇಕು. ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.80,000/- ರಿಂದ ರೂ.2,20,000/- ವೇತನ ನೀಡಲಾಗಯವುದು.

    ವಿದ್ಯಾರ್ಹತೆ : ಅಂಗೀಕೃತ ಸಂಸ್ಥೆಯಿಂದ / ಬೋರ್ಡ್ ನಿಂದ ಕಾನೂನು ಪದವಿಯನ್ನು ಹೊಂದಿರಬೇಕು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ.500/- ಶುಲ್ಕ ಪಾವತಿಸಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ ಮಾರ್ಚ್ 12, 2021 ರೊಳಗೆ ಸಲ್ಲಿಸಬೇಕು.

    ವಿಳಾಸ ಈ ಕೆಳಗಿನಂತಿವೆ
    Deputy Manager General (HR)
    Recruitment Section
    Hindustan Aeronautics limited, corporate office,15/1 cubbon road,
    Bengaluru- 56001

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕನ್ನು ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ರಾಣೇಬೆನ್ನೂರು ತಾಲೂಕಿನಲ್ಲಿ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಸರಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ

    ರಾಣೇಬೆನ್ನೂರು ತಾಲೂಕಿನಲ್ಲಿ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಸರಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ

    ರಾಣೇಬೆನ್ನೂರ ತಾಲೂಕಿ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ವಕೀಲ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಅಭ್ಯರ್ಥಿಗಳು ಕಾನೂನು ಪದವಿ/ಸ್ನಾತಕೋತ್ತರ ಪದವಿ ಹಾಗೂ 7 ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿರಬೇಕು.

    ಆಸಕ್ತರು ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 26-02-2021 ರೊಳಗೆ ಹಾವೇರಿ ಜಿಲ್ಲಾಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಬಿಬಿಎಂಪಿಯಲ್ಲಿ ನೇಮಕಾತಿ- ಆಸಕ್ತರಿಂದ ಅರ್ಜಿ ಆಹ್ವಾನ

    ಬಿಬಿಎಂಪಿಯಲ್ಲಿ ನೇಮಕಾತಿ- ಆಸಕ್ತರಿಂದ ಅರ್ಜಿ ಆಹ್ವಾನ

    ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾಬಗರ ಪಾಲಿಕೆ ) ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 120 ಹಿರಿಯ ವೈದ್ಯಾಧಿಕಾರಿ/ತಜ್ಞರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅವರ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡವಾರು ಅಂಕ, ಸೇವಾ ಕೃಪಾಂಕ ಮತ್ತು ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುತ್ತದೆ.

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿಯನ್ನು ನೀಡಲಾಗಿದೆ.
    ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.5೦೦/-, ಸಾಮಾನ್ಯ ಅಭ್ಯರ್ಥಿಗಳಿಗೆ ರೂ.1೦೦೦/-, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.1೦೦/- ಅರ್ಜಿ ಶುಲ್ಕವನ್ನು ಚಲನ್ ಮೂಲಕ ಮಾರ್ಚ್ 25, 2021 ರೊಳಗ ಪಾವತಿಸಬೇಕಾಗುತ್ತದೆ.

    ಅರ್ಜಿ ಸಲ್ಲಿಕೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಬಿಎಂಪಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ಮಾರ್ಚ್ 24, 2021 ರೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು.
    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ವಿದ್ಯಾರ್ಹತೆ : ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಪೋಸ್ಟ್ ಗ್ರಾಜ್ಯುಯೇಶನ್/ಡಿಪ್ಲೋಮಾ ಮತ್ತು ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ
    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದ ಅನ್ವಯ ಕನಿಷ್ಠ 26 ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 42 ವರ್ಷ ವಯಸ್ಸಾಗಿರಬೇಕು.
    2ಎ,2ಬಿ,2ಎ ಮತ್ತು 3ಬಿಯ ಅಭ್ಯರ್ಥಿಗಳಿಗೆ 45 ವರ್ಷ ಮತ್ತು ಪ.ಜಾ, ಪ.ಪಂ, ಪ್ರವರ್ಗ -1 ರ ಅಭ್ಯರ್ಥಿಗಳಿಗೆ ಗರಿಷ್ಠ 47 ವರ್ಷ ವಯೋಮಿತಿ ಆಗಿರಬೇಕು.

    ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

    ಹುದ್ದೆ ಸಂಖ್ಯೆ: 120

    ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 23-02-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-03-2021

    ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ : 25-03-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕನ್ನು ಕ್ಲಿಕ್ ಮಾಡಿ. www.bbmp.gov.in