Author: Mallika

  • HAL ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    HAL ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದಾರೆ‌ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:

    ಹುದ್ದೆ : ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್

    ಹುದ್ದೆಯ ಸಂಖ್ಯೆ : 165

    ಹುದ್ದೆಗಳ ವಿವರ:ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಅಪ್ರೆಂಟಿಸ್-87 ಹುದ್ದೆ

    ಟೆಕ್ನಿಶಿಯನ್ ಅಪ್ರೆಂಟಿಸ್- 78ಹುದ್ದೆ

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :25-02-2021

    ಈ ಹುದ್ದೆಗಳಿಗೆ ಅಭ್ಯರ್ಥಿಗಳ ನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ:
    ಅರ್ಜಿದಾರರು ಯಾವುದೇ ಶುಲ್ಕ ಪಾವತಿಸುವಂತಿಲ್ಲ

    ವಯೋಮಿತಿ : ಹೆಚ್ ಎ ಎಲ್ ನೇಮಕಾತಿ ನಿಯಮದ ಪ್ರಕಾರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಿದ್ಯಾರ್ಹತೆ:
    ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಲ್ಲಿ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ/ಗ್ರಾಜ್ಯುಯೇಟ್ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು.

    ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/- ಹಾಗೂ ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ವರಿಗೆ ತಿಂಗಳಿಗೆ 9,000/- ಸ್ಟೈಫೆಂಡ್ ನಿಗದಿ ಪಡಿಸಿರುತ್ತಾರೆ.

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿhttps://hal-india.co.in/Index.aspx


  • ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL)ನಲ್ಲಿ ಅಪ್ರೆಂಟಿಸಿಸ್ ಹುದ್ದೆಗೆ ಅರ್ಜಿ ಆಹ್ವಾನ

    ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL)ನಲ್ಲಿ ಅಪ್ರೆಂಟಿಸಿಸ್ ಹುದ್ದೆಗೆ ಅರ್ಜಿ ಆಹ್ವಾನ

    ಸ್ಟೀಲ್ ಅಥಾರಟಿ ಆಫ್ ಇಂಡಿಯಾ ಲಿಮಿಟೆಡ್(SAIL) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಹಾಕಬಹುದು. ವಿವರಗಳು ಈ ಕೆಳಗಿನಂತಿವೆ:

    ಹುದ್ದೆ: ಟೆಕ್ನೀಶಿಯನ್ ಅಪ್ರೆಂಟಿಸಸ್

    ಹುದ್ದೆಯ ಸಂಖ್ಯೆ : 100
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19, ಫೆಬ್ರವರಿ 2021

    ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

    ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಯು
    ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆ ಯಿಂದ ಬಿ.ಇ/ಬಿ.ಟೆಕ್ ವಿದ್ಯಾರ್ಹತೆ ಯನ್ನು ಪಡೆದಿರಬೇಕು.

    ವಯೋಮಿತಿ
    ಕನಿಷ್ಠ 18 ಹಾಗೂ ಗರಿಷ್ಠ 28 ವಯಸ್ಸಾಗಿರಬೇಕು ( ಫೆಬ್ರವರಿ 28,2021 ರ ಅನ್ವಯ)

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಲಿಂಕ್ ಗೆ ಭೇಟಿ ನೀಡಬಹುದು. https://www.sail.co.in/en/home

  • ECIL ನಲ್ಲಿ ತಾಂತ್ರಿಕ ಹುದ್ದೆಗೆ ಅರ್ಜಿ ಆಹ್ವಾನ

    ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ತಾಂತ್ರಿಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಆಸಕ್ತರು ಕೆಳಗಿನ ವಿವರಗಳನ್ನು ಓದಿ ಅರ್ಜಿಯನ್ನು ಹಾಕಬಹುದು.

    ಹುದ್ದೆ : ತಾಂತ್ರಿಕ ಅಧಿಕಾರಿ

    ಹುದ್ದೆಯ ಸಂಖ್ಯೆ : 2

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ ,19 2021

    ವೇತನ :ತಾಂತ್ರಿಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 23,000ರೂ. ವೇತನ ನಿಗದಿಯಾಗಿರುತ್ತದೆ.

    ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ : ಅರ್ಜಿದಾರರು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.

    ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರ್ ಪದವೀಧರರಾಗಿರಬೇಕು.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಜನವರಿ 31, 2021, ರ ಅನ್ವಯ ಗರಿಷ್ಠ 30 ವರ್ಷ ವಯಸ್ಸಾಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ 10 ವರ್ಷಗಳ ಸಡಿಲಿಕೆ ನೀಡಲಾಗಿದೆ.

    ಅಭ್ಯರ್ಥಿಗಳು ಆನ್ ಲೈನ್ ವೆಬ್‌ಸೈಟ್‌ http:/www.ecil.co.in/home.html ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ , ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಫೆ.19, 2021 ಬೆಳಗ್ಗೆ 10 ಕ್ಕೆ ಕಚೇರಿಗೆ ನೇರ ಸಂದರ್ಶನಕ್ಕೆ ಭಾಗಿಯಾಗಬಹುದು.

    ECIL Zonal Office,
    D-15, DDA Local Shopping Complex
    A – Block Ring Road,
    Naraina, New Delhi -110028

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

  • NBCC (ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟಕ್ಷನ್ಸ್ ಕಾರ್ಪೋರೇಷನ್) ಸಂಸ್ಥೆಯಲ್ಲಿ ಹುದ್ದೆಗೆ ಅರ್ಜಿ ಆಹ್ವಾನ

    ನ್ಯಾಷನಲ್ ಬಿಲ್ಡಿಂಗ್ಸ್ ಕನ್ಟ್ರಕ್ಷನ್ಸ್ ಕಾರ್ಪೋರೇಷನ್ (NBCC) ತನ್ನಲ್ಲಿರುವ ಖಾಲಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಈ ಕೆಳಗೆ ನೀಡಲಾಗಿರುವ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :

    ಹುದ್ದೆ : ಮಾರ್ಕೆಟಿಂಗ್ ಎಕ್ಸಿಕ್ಯುಟಿವ್

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.42,500/- ವೇತನವನ್ನು ತಿಂಗಳಿಗೆ ನೀಡಲಾಗುವುದು

    ಹುದ್ದೆಯ ಒಟ್ಟು ಸಂಖ್ಯೆ : 20

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 1, ಮಾರ್ಚ್ 2021.

    ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಆಗಿರಬೇಕು.

    ವಿದ್ಯಾಭ್ಯಾಸ : ಅಂಗೀಕೃತ ವಿಶ್ವವಿದ್ಯಾಲಯಯದಿಂದ ಮಾನ್ಯತೆ ಪಡೆದ ಎಂ.ಬಿ.ಎ, ಡಿಪ್ಲೋಮಾ, ಪೋಸ್ಟ್ ಗ್ರಾಜ್ಯುಯೇಟ್ ವಿದ್ಯಾರ್ಹತೆ ಯನ್ನು ಹೊಂದಿರಬೇಕು.

    ಅರ್ಜಿ ಶುಲ್ಕ : ಪ.ಜಾತಿ/ಪ‌.ಪಂಗಡ , ಅಂಗವಿಕಲ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ನೀಡುವಂತಿಲ್ಲ. ಉಳಿದ ಅಭ್ಯರ್ಥಿಗಳು ರೂ.500/- ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.

    ಆಯ್ಕೆ ಪ್ರಕ್ರಿಯೆ : ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಕಂಪನಿಯ ಅಧಿಕೃತ ವೆಬ್‌ಸೈಟ್‌ https://nbccindia.com/ ಗೆ ಭೇಟಿ ನೀಡಿ , ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಕಳುಹಿಸಬೇಕು.

    ಕಚೇರಿ ವಿಳಾಸ:
    General Manager(HRM)
    NBCC(I)ltd,
    NBCC Bhavan,2nd floor,
    Corporate Office,
    Near Lodhi Hotel,
    Lodhi Road,
    New Delhi-110003

  • BHEL ನಲ್ಲಿ 124 ಹುದ್ದೆಗಳಿಗೆ ಅರ್ಜಿ ಆಹ್ವಾನ : ಈ ಕೂಡಲೇ ಅರ್ಜಿ ಸಲ್ಲಿಸಿ

    BHEL ನಲ್ಲಿ 124 ಹುದ್ದೆಗಳಿಗೆ ಅರ್ಜಿ ಆಹ್ವಾನ : ಈ ಕೂಡಲೇ ಅರ್ಜಿ ಸಲ್ಲಿಸಿ

    ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ : ಫಿಟ್ಟರ್ ಮತ್ತು ವೆಲ್ಡರ್

    ಹುದ್ದೆಯ ಸಂಖ್ಯೆ :
    ಫಿಟ್ಟರ್ : 89
    ವೆಲ್ಡರ್ : 35

    ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 28, ಫೆಬ್ರವರಿ, 2021.

    ವಿದ್ಯಾರ್ಹತೆ

    10 ಮತ್ತು 8 ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವೇತನ: ಫಿಟ್ಟರ್ ಮತ್ತು ವೆಲ್ಡರ್ ಹುದ್ದೆಗಳಿಗೆ ತಿಂಗಳಿಗೆ ರೂ‌.8050/- ವೇತನ ನಿಗದಿಪಡಿಸಲಾಗಿದೆ.

    ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.

    ಹೆಚ್ಚಿನ ಮಾಹಿತಿಗಾಗಿ https://bhel.com/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.

  • ಭೂಮಾಪಕರ ನೇಮಕಾತಿಯ ಕೀ ಉತ್ತರಗಳು ಪ್ರಕಟ

    ಪರವನಿಗಾಗಿ ಭೂಮಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯನ್ನು 2021, ಫೆಬ್ರವರಿ 01 ಮತ್ತು 02 ರಂದು ನಡೆಸಲಾಗಿತ್ತು. ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳ ಕೀ ಉತ್ತರಗಳನ್ನು ಇಲಾಖೆ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.


    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

    ಸೂಚನೆಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ