Author: Mallika

  • KPSC ಪ್ರವೇಶ ಪತ್ರ ದಿನಾಂಕ ಪ್ರಕಟ

    ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ ಫೆಬ್ರವರಿ 13,2021 ರಿಂದ 16ಫೆಬ್ರವರಿ,2021 ರವರೆಗೆ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಗ ಗ್ರೂಪ್ ಎ ಹಾಗೂ ಗ್ರೂಪ್ ಬಿ 106 ಹುದ್ದೆಗಳ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಇದರ ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಿದೆ.http://kpsc.kar.nic.in ನಲ್ಲಿ ಮಾಹಿತಿಗಳು ಇದೆ.
    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಯ್ಯೂಸರ್ ನೇಮ್ ಪಾಸ್ ವರ್ಡ್ ನ್ನು ಉಪಯೋಗಿಸಿಕೊಂಡು ಪ್ರವೇಶ ಪತ್ರವನ್ನು 06.02.2021 ರಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.

  • ಯಾದಗಿರಿ ಅಂಗನವಾಡಿ ಕಾರ್ಯಕರ್ತೆ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ


    ಯಾದಗಿರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ 4 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಸೇವೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಈ ಕೂಡಲೇ ಸಲ್ಲಿಸಬಹುದು.

    ಹುದ್ದೆಯ ಹೆಸರು/ಸಂಖ್ಯೆ

    ಅಂಗನವಾಡಿ ಕಾರ್ಯಕರ್ತೆ-13
    ಅಂಗನವಾಡಿ ಸಹಾಯಕಿ-34

    ಹುದ್ದೆಗಳು ಯಾದಗಿರಿಯಲ್ಲಿದ್ದು ಅಲ್ಲಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 7,ಮಾರ್ಚ್ 2021

    ಆಸಿಡ್ ದಾಳಿಗೊಳಗಾದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಮೊದಲು ಅವರಿಗೆ ಆದ್ಯತೆ ನೀಡಲಾಗುವುದು ಮತ್ತು ನೇರವಾಗಿ ಹುದ್ದೆಗೆ ಆಯ್ಕೆ ಮಾಡಲಾಗುವುದು.

    ವಿದ್ಯಾಭ್ಯಾಸ
    ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ಗರಿಷ್ಠ 9 ನೇ ತರಗತಿ ತೇರ್ಗಡೆಯಾಗಿರಬೇಕು.

    ವಯೋಮಿತಿ
    ವಿಕಲಚೇತನ ಅಭ್ಯರ್ಥಿಗಳಿಗೆ ಕನಿಷ್ಠ 10 ವರ್ಷ ಸಡಿಲಿಕೆ ಇರುತ್ತದೆ. ಉಳಿದವರಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವಯಸ್ಸಾಗಿರಬೇಕು.

    ಅರ್ಜಿ ಶುಲ್ಕ

    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.

    ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಮಾತ್ರ ಸಲ್ಲಿಸಲು ಅವಕಾಶವಿದ್ದು, ಅಂಚೆ ಅಥವಾ ಖುದ್ದಾಗಿ ಸಲ್ಲಿಸಲು ಅವಕಾಶವಿಲ್ಲ. ಅಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://anganawadirecruit.kar.nic.in ಹೋಗಿ ಅಧಿಸೂಚನೆಯನ್ನು ಓದಿ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ಕಿಸಿ

  • BEL ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    BEL ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 16 ಟ್ರೈ‌ನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 16,2021 ರ ಒಳಗೆ ಅರ್ಜಿ ಸಲ್ಲಿಸಬಹುದು. ಇದರ ಸಂಪೂರ್ಣ ವಿವರ ಈ ಕೆಳಗಿನಂತಿದೆ.

    ಹುದ್ದೆಯ ಹೆಸರು : ಟ್ರೈನಿ ಇಂಜಿನಿಯರ್

    ಹುದ್ದೆಯ ಸಂಖ್ಯೆ : 16

    ವಯೋಮಿತಿ : ಜನವರಿ 1,2021ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವ‍ರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವಿದ್ಯಾರ್ಹತೆ
    ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಇ/ ಬಿ.ಟೆಕ್ ವಿದ್ಯಾರ್ಹತೆ ಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಅರ್ಜಿ ಶುಲ್ಕ
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
    ಉಳಿದ ಅಭ್ಯರ್ಥಿಗಳು ರೂ.200 ನ್ನು ಆನ್ ಲೈನ್ ಮುಖಾಂತರ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.02.2021

    ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ https://bel-india.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
    ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ

  • ಸೂರ್ಯಮಿತ್ರ ತರಬೇತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

    ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಯಿಂದ ಸೂರ್ಯ ಮಿತ್ರ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ‌. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

    ಐಟಿಐ /ಡಿಪ್ಲೋಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ತರಬೇತಿಯ ಅವಧಿ 3 ತಿಂಗಳುಗಳಾಗಿದ್ದು, ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ.

    ಅರ್ಜಿ ಸಲ್ಲಿಸಲು ಕೊನೆ ದಿನಾಂಕ 08.02.2021

    ತರಬೇತಿಯು 10.02.2021 ರಂದು ಪ್ರಾರಂಭವಾಗಲಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕನ್ನು ಕ್ಲಿಕ್ಕಿಸಿ

    http://www.mgired.kar.nic.in

    ದೂರವಾಣಿ ಸಂಖ್ಯೆ : 23626359/23626493/9611757523

  • ಕರ್ನಾಟಕ ಲೋಕಸೇವಾ ಆಯೋಗವು 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

    ಕರ್ನಾಟಕ ಲೋಕಸೇವಾ ಆಯೋಗವು 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ.

    ಗೆಜೆಟೆಡ್ ಪ್ರೊಬೆಷನರಿಗೆ ನಡೆಸಲಾಗುವ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ.

    ಅರ್ಹತಾ ಪತ್ರಿಕೆಗಳಾದ ಕನ್ನಡ, ಇಂಗ್ಲೀಷ್ ಕ್ರಮವಾಗಿ ದಿನಾಂಕ 13-02-2021 ರಂದು ಬೆಳಗ್ಗೆ ಸಮಯ 10 ರಿಂದ 12 ಗಂಟೆಯವರೆಗೆ ಹಾಗೇ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ನಡೆಯಲಿದೆ. ಫೆಬ್ರವರಿ 14 ರಂದು ಬೆಳಿಗ್ಗೆ 9 ರಿಂದ 12 ಗಂಟೆವರೆಗೆ ಪತ್ರಿಕೆ-1 (ಪ್ರಬಂಧ) ನಡೆಯಲಿದೆ.
    ಉಳಿದ ಮಾಹಿತಿಗಾಗಿ ಈ ಕೆಳಗಿನ ಪಟ್ಟಿಯಲ್ಲಿ ಮಾಹಿತಿಯನ್ನು ಪಡೆಯಬಹುದು.

  • KSRP ಪರಿಷ್ಕೃತ ಆಯ್ಕೆ ಪಟ್ಟಿ ಪ್ರಕಟ

    ದಿನಾಂಕ 29-08-2019 ರಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಶೇಷ ರಿಸರ್ವ್ ಸಬ್ ಇನ್ಸ್ ಪೆಕ್ಟರ್ (KSRP) ಪುರುಷ ಹಾಗೂ ಸೇವಾ ನಿರತ ಹುದ್ದೆಗಳ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿ, ನೇಮಕಾತಿ ಪ್ರಕ್ರಿಯೆಯನ್ನು ವಿವಿಧ ಹಂತಗಳಲ್ಲಿ ಕೈಗೊಂಡಿತ್ತು.

    ಈಗ ಹುದ್ದೆಗಳ ತಾತ್ಕಾಲಿಕ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.

    ಒಟ್ಟು 5 ಅಭ್ಯರ್ಥಿಗಳು ಬೇರೆ ಹುದ್ದೆಗೆ ಆಯ್ಕೆಯಾಗಿದ್ದಾರೆ.ಈ 5 ಅಭ್ಯರ್ಥಿಗಳು ವಿಶೇಷ ರಿಸರ್ವ್ ಸಬ್ ಇನ್ಸ್ ಪೆಕ್ಟರ್ ಹುದ್ದೆಯನ್ನು ನಿರಾಕರಿಸಿದ್ದರಿಂದ, 5 ಹೊಸದಾಗಿ ಅಭ್ಯರ್ಥಿಗಳನ್ನು ಇಲಾಖೆಯು ಆಯ್ಕೆ ಮಾಡಿದ್ದು ಅಭ್ಯರ್ಥಿಗಳ ವಿವರಗಳನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ನೋಡಬಹುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ