Author: Mallika

  • IOCL : ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿ.27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

    ಭಾರತೀಯ ತೈಲ ನಿಗಮ ನಿಯಮಿತದಲ್ಲಿ ( IOCL) ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ : 300 ತಾಂತ್ರಿಕ ಹುದ್ದೆ.

    ಭಾರತದಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 10, 2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 27, 2021 ಸಂಜೆ 5 ಗಂಟೆಯೊಳಗೆ

    ಖಾಲಿ ಹುದ್ದೆಗಳ ವಿವರ :

    ತಾಂತ್ರಿಕೇತರ ಅಪ್ರೆಂಟಿಸ್ – 245 ಹುದ್ದೆಗಳು
    ತಾಂತ್ರಿಕ ಅಪ್ರೆಂಟಿಸ್ – 55 ಹುದ್ದೆಗಳು

    ಒಟ್ಟು ಹುದ್ದೆಗಳು – 300 ಹುದ್ದೆಗಳು

    ವಿದ್ಯಾರ್ಹತೆ : ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10 ನೇ ತರಗತಿ/ ಮೆಟ್ರಿಕ್ಯುಲೇಷನ್ ಅಥವಾ ಐಟಿಐ ವಿದ್ಯಾರ್ಹತೆ, 12 ನೇ ತರಗತಿ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ : ಕನಿಷ್ಠ 18 ರಿಂದ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಒಬಿಸಿಯ ಗರಿಷ್ಠ 27 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಗರಿಷ್ಠ 29 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

    ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಯಾದಗಿರಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಯಾದಗಿರಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 05 ಅಂಗನವಾಡಿ ಕಾರ್ಯಕರ್ತೆ ಮತ್ತು 12 ಅಂಗನವಾಡಿ ಸಹಾಯಕಿ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 10-12-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-01-2022

    ವಯೋಮಿತಿ : ಕನಿಷ್ಠ 18 ವರ್ಷದಿಂದ 35 ವರ್ಷಗಳ ವಯೋಮಿತಿಯೊಳಗಿರತಕ್ಕದ್ದು. ಅಂಗನವಾಡಿ ಕಾರ್ಯಕರ್ತೆ ನೇಮಕಾತಿಯಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಆದ್ದರಿಂದ ಅಂಗವಿಕಲರಿಗೆ 45 ವರ್ಷಗಳ ವಯೋಮಿತಿಯೊಳಗಿರತಕ್ಕದ್ದು.

    ಸ್ಥಳೀಯತೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸಂಬಂಧಿಸಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಕೇಂದ್ರದ ವ್ಯಾಪ್ತಿಯ ಕಂದಾಯ ಗ್ರಾಮವನ್ನು ಹಾಗೂ ನಗರ ಪ್ರದೇಶದಲ್ಲಿ ಕೇಂದ್ರದ ವ್ಯಾಪ್ತಿಯ ಕಂದಾಯ ವಾರ್ಡ್ ಗಳನ್ನು ಮಾತ್ರ ಪರಿಗಣಿಸಲಾಗುವುದು. ಚುನಾವಣಾ ವಾರ್ಡ್ ಗಳನ್ನು ಪರಿಗಣಿಸಲಾಗುವುದಿಲ್ಲ. ಸ್ಥಳೀಯತೆಯ ಬಗ್ಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಿಂದ 3 ವರ್ಷ ಅವಧಿಯೊಳಗಿನ ತಹಶಿಲ್ದಾರರು/ಉಪತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸುವುದು.

    ಅಂಗನವಾಡಿ ಕಾರ್ಯಕರ್ತೆ : ಕನಿಷ್ಠ ವಿದ್ಯಾರ್ಹತೆ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ.

    ಅಂಗನವಾಡಿ ಕಾರ್ಯಕರ್ತೆ : ಕನಿಷ್ಠ 04 ನೇ‌ ತರಗತಿ ಗರಿಷ್ಠ 09 ತರಗತಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆ ಪರಿಗಣಿಸಲಾಗುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ

    ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾ ಟೆಕ್ನಾಲಜಿ ( ಎ‌ನ್ಐಎಫ್ ಟಿ) ಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ತನ್ನ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಸಹಾಯಕ ಪ್ರಾಧ್ಯಾಪಕ

    ಹುದ್ದೆ ಸಂಖ್ಯೆ : 190

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-12-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022 ಸಂಜೆ‌ 5.30 ರೊಳಗೆ.

    ವಿದ್ಯಾರ್ಹತೆ : ನಿಫ್ಟ್ ನಲ್ಲಿ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ : ಜನವರಿ 31, 2022 ರ ಅನ್ವಯ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು‌. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರೂ. ವೇತನವನ್ನು ನಿಗದಿಪಡಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1,180/- ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.

    ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಅರ್ಜಿ ಸಲ್ಲಿಕೆ ಹೇಗೆ ?

    ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಮಾಹಿತಿಯನ್ನು ಭರ್ತಿ ಮಾಡಬೇಕು. ಆನ್ಲೈನ್ ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 15, 2022 ರೊಳಗೆ ಅರ್ಜಿಯನ್ನು ತಲುಪಿಸಬಹುದು.

    ಕಚೇರಿ ವಿಳಾಸ : Office of Registrar, Head Office, NIFT Campus, Hauz Khas, New Delhi – 110016

    ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ.

  • ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವಿವಿಧ ಹುದ್ದೆ, ಅಡ್ಮಿನಿಸ್ಟ್ರೇಟರ್, ಮ್ಯಾನೇಜರ್ ಹುದ್ದೆ

    ಮಾಹಿತಿ ತಂತ್ರಜ್ಞಾನ ( IT/ICT) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆಗಳ ವಿವರ ಈ ಕೆಳಗಿನಂತಿವೆ :

    ಪ್ರಾಜೆಕ್ಟ್ ಮ್ಯಾನೇಜರ್ – 03
    ಪ್ರಾಜೆಕ್ಟ್ ಲೀಡ್ – 02
    ಬಿಸಿನೆಸದ ಅನಾಲಿಸ್ಟ್ – 04
    ಸೊಲ್ಯೂಷನ್ ಆರ್ಕಿಟೆಕ್ಟ್- 02
    ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ – 06
    ಸಾಫ್ಟ್‌ವೇರ್ ಇಂಜಿನಿಯರ್ – 06
    ಡೇಟಾಬೇಸ್ ಡಿಸೈನರ್ – 05
    ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ – 04
    ಸಿಸ್ಟಯ ಅಡ್ಮಿನಿಸ್ಟ್ರೇಟರ್ – 02
    ಟೆಸ್ಟ್ ಲೀಡ್ – 02
    ಟೆಸ್ಟ್ ಇಂಜಿನಿಯರ್ – 05
    ಅಪರೇಷನ್ಸ್ ಮ್ಯಾನೇಜರ್ – 04

    ಆಸಕ್ತ ಅಭ್ಯರ್ಥಿಗಳು ತಮ್ಮ ಸಿವಿ ಗಳನ್ನು [email protected] ಗೆ ದಿನಾಂಕ 31-01-2022 ರೊಳಗೆ ಇ-ಮೇಲ್ ಮುಖಾಂತರ ಕಳುಹಿಸತಕ್ಕದ್ದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • SBI : 1226 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

    ಆನ್ಲೈನ್ ಮೂಲಕ ಡಿಸೆಂಬರ್ 09,2021 ರಿಂದ ಡಿಸೆಂಬರ್ 29,2021 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು.

    ಎಲ್ಲೆಲ್ಲಿ ಎಷ್ಟು ಹುದ್ದೆ :

    ಗುಜರಾತ್ – 354 ಹುದ್ದೆಗಳು
    ಕರ್ನಾಟಕ – 278 ಹುದ್ದೆಗಳು
    ಮಧ್ಯಪ್ರದೇಶ – 162 ಹುದ್ದೆಗಳು
    ಛತ್ತೀಸ್ ಗಢ – 52 ಹುದ್ದೆಗಳು
    ತಮಿಳುನಾಡು – 276 ಹುದ್ದೆಗಳು
    ರಾಜಸ್ತಾನ – 104 ಹುದ್ದೆಗಳು
    ಒಟ್ಟು – 1226 ಹುದ್ದೆಗಳು

    ವಿದ್ಯಾರ್ಹತೆ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ)ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದಲ್ಲದೆ ಅಭ್ಯರ್ಥಿಗಳು ನಿಗದಿತ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಬ್ಯಾಂಕಿನಲ್ಲಿ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

    ವಯೋಮಿತಿ : ಡಿ.1, 2021 ರ ಅನ್ವಯ ಕನಿಷ್ಠ 21 ರಿಂದ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/- ರೂ.ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್ ಆರ್ ಒ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.

    ಆಯ್ಕೆ ಪ್ರಕ್ರಿಯೆ : ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

    ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳು ರೂ. 750/- ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಅರ್ಜಿ ಸಲ್ಲಿಸುವುದು ಹೇಗೆ?

    ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಎಸ್ ಬಿಐ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ನಂತರ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ.

  • ಸರ್ಕಾರಿ ಇಲಾಖೆಗೆ ಕಾನೂನು ಸಲಹೆಗಾರರ ನೇಮಕಾತಿ, ಅರ್ಜಿ ಸಲ್ಲಿಸಲು ಈ ತಿಂಗಳ‌ 14 ನೇ ತಾರೀಖು ಕೊನೇ ದಿನಾಂಕ

    ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಕಾನೂನು ವಿಭಾಗದಲ್ಲಿ ಸೇವೆ ಸಲ್ಲಿಸಲು ಕಾನೂನು ಸಲಹೆಗಾರರನ್ನು ನೇಮಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ವಕೀಲರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ(KSMHA Karnataka)
    ಹುದ್ದೆಯ ಹೆಸರು: ಲೀಗಲ್ ಕನ್ಸಲ್ಟೆಂಟ್
    ವೇತನ: ಮಾಸಿಕ ರೂ. 50,000/-

    ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು ಮತ್ತು ಕನಿಷ್ಟ ಐದು ವರ್ಷಗಳ ಅನುಭವ ಇರಬೇಕು. ಅಥವಾ ವಕೀಲರಾಗಿ ಮೂರು ವರ್ಷದ ಅನುಭವ ಅಥವಾ ಆರೋಗ್ಯ/ಮಾನಸಿಕ ಆರೋಗ್ಯದಲ್ಲಿ ಅದಕ್ಕೂ ಹೆಚ್ಚಿನ ಅನುಭವ.

    ವಯೋಮಿತಿ: ಗರಿಷ್ಟ 45 ವರ್ಷ ವಯಸ್ಸು. ನಿಯಮಾವಳಿ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/12/2021.
    ಅಭ್ಯರ್ಥಿಗಳು ಅರ್ಜಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿ ಅರ್ಜಿಗಳನ್ನು ತುಂಬಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.
    Chief Executive Officer,
    Karnataka State Mental Health Authority and Commissioner,
    Health and Family Welfare Services,
    Arogya Soudha, Magadi Road,
    Bengaluru – 560023

    apply form