Author: Mallika

  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಚಿತ ಉದ್ಯೋಗ ಕೌಶಲ್ಯ ತರಬೇತಿ

    ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವ ಹಿನ್ನೆಲೆಯಲ್ಲಿ ಕೆಲವು ನಿರ್ದಿಷ್ಟ ಕೌಶಲ್ಯ ಹೊಂದಿದ 6 ವಿಭಾಗದ ಹುದ್ದೆಗಳಿಗೆ ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯದ ಮುಖಾಂತರ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ (NSDC)ದಿಂದ ಅಲ್ಪಾವಧಿ ಕೌಶಲ ತರಬೇತಿ ನೀಡಿ, ನಂತರ ಉದ್ಯೋಗವನ್ನೂ ನೀಡಲಾಗುತ್ತಿದೆ.

    ಹುದ್ದೆಗಳ ವಿವರ:

    1. ಎಮೆರ್ಜೆನ್ಸಿ ಮೆಡಿಕಲ್ ಟೆಕ್ನೀಷಿಯನ್ (Emergency Medical Technician)
    2. ಮೆಡಿಕಲ್ ಎಕ್ವಿಪ್‍ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್ (Medical Equipment Technology Assistant)
    3. ಜನರಲ್ ಡ್ಯೂಟಿ ಅಸಿಸ್ಟೆಂಟ್ (General Duty Assistant)
    4. ಜನರಲ್ ಡ್ಯೂಟಿ ಅಸಿಸ್ಟೆಂಟ್ ಕ್ರಿಟಿಕಲ್ (General Duty Assistant Critical)
    5. ಹೋಮ್ ಹೆಲ್ತ್ ಏಡ್ (Home Health Aide)
    6. ಫ್ಲೆಬೆಟೋಮಿಸ್ಟ್ (Phlebotomist)

    ಈ ಮೇಲಿನ ತಂತ್ರಜ್ಞ ಹುದ್ದೆಗಳನ್ನು ಬಯಸುವ ಆಸಕ್ತರಲ್ಲಿ ಆಯ್ದ ಅಭ್ಯರ್ಥಿಗಳಿಗೆ ಆರೋಗ್ಯ ಇಲಾಖೆಯ ಅಧೀನದ ಜಿಲ್ಲಾ ತರಬೇತಿ ಸಂಸ್ಥೆ ಮತ್ತು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ 4 ತಿಂಗಳ ಕಾಲ ತರಬೇತಿ ನೀಡಲಾಗುತ್ತದೆ. ಯಶಸ್ವಿಯಾಗಿ ತರಬೇತಿ ಪೂರೈಸಿದ ಅಭ್ಯರ್ಥಿಗಳನ್ನು ಬೇಡಿಕೆಗೆ ತಕ್ಕಂತೆ ಜಿಲ್ಲಾ ಅಥವಾ ತಾಲೂಕು ಆಸ್ಪತ್ರೆಗಳಲ್ಲಿ ಉದ್ಯೋಗಕ್ಕೆ ಆಯ್ಕೆ ಮಾಡಲಾಗುವುದು.

    ವಯೋಮಿತಿ: 18ರಿಂದ 45 ವರ್ಷ

    ಮಾಸಿಕ ವೇತನವನ್ನು ವಿದ್ಯಾರ್ಹತೆ ಮತ್ತು ತರಬೇತಿಯನ್ನು ಆಧರಿಸಿ ನಿಗದಿ ಮಾಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸುವ ಕುರಿತು ಒಪ್ಪಿಗೆ ಪತ್ರ ನೀಡಬೇಕಾಗುತ್ತದೆ. ತರಬೇತಿ ಬಳಿಕ ಉದ್ಯೋಗಕ್ಕಾಗಿ ಜಿಲ್ಲಾಸ್ಪತ್ರೆ ಅಥವಾ ತಾಲೂಕು ಆಸ್ಪತ್ರೆಗಳಲ್ಲಿ ನಿಯೋಜಿಸಲಾಗುತ್ತದೆ.

    ಆಸಕ್ತರು ಈ ಕೆಳಗಿನ ಗೂಗಲ್ ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಬಹುದು.
    https://forms.gle/7bVf5WffDSZsqAgv8

    ಕೊನೆಯ ದಿನಾಂಕ ಜೂನ್ 15 ಎಂದು ತಿಳಿಸಲಾಗಿದ್ದರೂ, ಅರ್ಜಿ ಸಲ್ಲಿಸಲು ಅವಕಾಶವಿದೆ.

    ಹೆಚ್ಚಿನ ಮಾಹಿತಿಗೆ 9480324002 ಸಂಪರ್ಕಿಸಿ.

  • ವೆನ್ಲಾಕ್ ಆಸ್ಪತ್ರೆ : ಶುಶ್ರೂಷಕರ ಹುದ್ದೆಗೆ ಅರ್ಜಿ ಆಹ್ವಾನ

    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ DCH (Dedicated Covid Hospital) ಆಗಿ ಕಾರ್ಯ ನಿರ್ವಹಿಸುತ್ತಿರುವ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರ ಹುದ್ದೆಗೆ ಅರ್ಜಿ ಕರೆಯಲಾಗಿದೆ.

    ಒಟ್ಟು ಹುದ್ದೆಯ ಸಂಖ್ಯೆ – 08

    ವಿದ್ಯಾರ್ಹತೆ- ನರ್ಸಿಂಗ್ ಕೌನ್ಸಿಲ್‍ನಲ್ಲಿ ನೋಂದಣಿ

    ಜೂನ್ 19ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಕಚೇರಿಯಲ್ಲಿ ನೇರ ಸಂದರ್ಶನ ಕರೆಯಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ಗುತ್ತಿಗೆ ಆಧಾರದಲ್ಲಿ ಸೆಪ್ಟೆಂಬರ್ 30ರವರೆಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು)

  • ಗ್ರಾಮ ಕಾಯಕ ಮಿತ್ರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 04 ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 04 ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಗೌರವ ಧನದ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮ ಪಂಚಾಯತಿ ಹಾಗೂ ನೆಲಮಂಗಲ ತಾಲ್ಲೂಕಿನ ಕೋಡಿಗೆಹಳ್ಳಿ, ಯಂಟಗಾನಹಳ್ಳಿ ಮತ್ತು ನರಸೀಪುರ ಗ್ರಾಮ ಪಂಚಾಯತಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 17-06-2021 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-06-2021 ರ ಸಂಜೆ 05.00 ಗಂಟೆಯವರೆಗೆ. ಹೆಚ್ಚಿನ ವಿವರಗಳಿಗಾಗಿ ಗ್ರಾಮ ಪಂಚಾಯತಿ/ ತಾಲ್ಲೂಕು ಪಂಚಾಯಿತಿಗಳನ್ನು ಸಂಪರ್ಕಿಸಬಹುದಾಗಿದೆ.

    ಅರ್ಹತೆಗಳು : ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
    ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು.
    ದಿನಾಂಕ 01-01-2021ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ‌ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು.
    ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ (2018-19, 2019-20, 2020-21) ಕನಿಷ್ಠ ಎರಡು ವರ್ಚಯ ಯೋಜನೆಯಡಿ ಅಕುಶಲ ಕೂಲಿಕಾರ್ಮಿಕರಾಗಿ ಕೆಲಸ ನಿರ್ವಹಿಸಬೇಕು.
    ದಿನಾಂಕ 01-01-2021 ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಿರಬಾರದು.
    ಓದು ಬರಹ ಚೆನ್ನಾಗಿ ತಿಳಿದಿರಬೇಕು.
    ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
    ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ರೋಜ್ ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮ ರೋಜ್ ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

  • KSP : 402 ಸಿವಿಲ್ ಪಿಎಸ್ಐ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್) ( ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ( ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಯ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ 22.06.2021 ಸಂಜೆ 06.00 ಗಂಟೆಯವರೆಗೆ ಮತ್ತು ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ : 24.06.2021 ಕ್ಕೆ ನಿಗದಿಪಡಿಸಲಾಗಿತ್ತು.

    ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಪರಿಗಣನೆಗೆ ತೆಗೆದುಕೊಂಡು ಆಡಳಿತಾತ್ಮಕ ಕಾರಣಗಳಿಂದ ಹಾಗೂ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲು ತೀರ್ಮಾನಿಸಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 22-06-2021 ರಿಂದ 07-07-2021 ರವರೆಗೆ ವಿಸ್ತರಿಸಲಾಗಿದೆ.

    ಅಧಿಸೂಚನೆ ದಿನಾಂಕ : 03.03.2021 ರಲ್ಲಿ ಈಗಾಗಲೇ ನಿಗದಿಪಡಿಸಿರುವಂತೆ ದಿನಾಂಕ 03.05.2021 ನ್ನೇ ವಯೋಮಿತಿಯ ಕೊನೆಯ ದಿನಾಂಕವನ್ನಾಗಿ ಪರಿಗಣಿಸಲಾಗುವುದು. ಆದರೆ ಜಾತಿ ಮತ್ತು ಆದಾಯ ಮೀಸಲಾತಿ ಹಾಗೂ ಇತರೆ ದಾಖಲೆಗಳಿಗೆ ವಿಸ್ತರಿಸಿದ ದಿನಾಂಕವಾದ 07.07.2021 ನ್ನು ಕೊನೆಯ ದಿನಾಂಕವಾಗಿ ಪರಿಗಣಿಸಲಾಗುವುದು. ಉಳಿದಂತೆ ಸದರಿ ಅಧಿಸೂಚನೆಯಲ್ಲಿ ನೀಡಲಾಗಿರುವ ಇತರೆ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

  • KIOCL ಲಿಮಿಟೆಡ್: ಎಂಬಿಎ / ಎಂ.ಕಾಂ ಪದವೀಧರರಿಂದ ಅರ್ಜಿ ಆಹ್ವಾನ

    KIOCL ಲಿಮಿಟೆಡ್‌ ನಲ್ಲಿ ಖಾಲಿ ( ಕುದುರೆಮುಖ ಕಬ್ಬಿಣ ಅದಿರು ಕಂಪೆನಿ) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಎಂ.ಕಾಂ/ ಎಂಬಿಎ ಪದವೀಧರರಿಂದ ವಿವಿಧ ಹುದ್ದೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ ಸಂಖ್ಯೆ : 18

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-07-2021

    ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.kioclltd.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

  • ಜುಲೈ 5 ರಿಂದ ಪಿಎಸ್ ಐ ಹುದ್ದೆಗಳಿಗೆ ET, PST ಪರೀಕ್ಷೆ

    ಕರ್ನಾಟಕ ಸಿವಿಲ್ ಪಿಎಸ್ ಐ (ಪುರುಷ ಮತ್ತು ಮಹಿಳಾ ) ಹಾಗೂ ( ಸೇವಾನಿರತ) ಹುದ್ದೆಗಳ ನೇಮಕಾತಿ ಸಲುವಾಗಿ ಜುಲೈ 05 ರಿಂದ ಸಹಿಷ್ಣುತೆ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ತಾತ್ಕಾಲಿಕವಾಗಿ ‌ನಡೆಸಲು ನಿರ್ಧರಿಸಲಾಗಿದೆ.

    402 ಹುದ್ದೆಗಳಿಗೆ ನೇಮಕ ಪ್ರಕ್ರಿಯೆಗಳನ್ನು ಕರ್ನಾಟಕ ಪೊಲೀಸ್ ಇಲಾಖೆಯು ಪ್ರಾರಂಭಿಸಿದೆ. ಸದರಿ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ನಿಯಮಾನುಸಾರ ದೈಹಿಕ ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಜುಲೈ 05 ರಿಂದ ಪ್ರಾರಂಭಿಸಲು ನಿರ್ಧಾರ ಮಾಡಿದೆ.

    ಇದಕ್ಕಾಗಿ ಅಧಿಕಾರಿಗಳು ಅಗತ್ಯ ಮೈದಾನ ಮತ್ತು ಇತರೆ ಸಿದ್ಧತೆಗಳನ್ನು ಮಾಡಿಕೊಳ್ಳಲು ಪೊಲೀಸ್ ಮಹಾ ನಿರೀಕ್ಷಕರವರ ಕಚೇರಿ ಪ್ರಕಟಣೆ ಹೊರಡಿಸಿದೆ.