Author: Mallika

  • ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ

    ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ( ಜೆಎಸ್ ಸಿಬಿ) ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ ( ಡಿಬಿಎ)- 2 ಹುದ್ದೆಗಳು ಹಾಗೂ ಜ್ಯೂನಿಯರ್ ಅಸಿಸ್ಟೆಂಟ್ – 10 ಹುದ್ದೆಗಳು

    ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

    ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅಭ್ಯರ್ಥಿಗಳು ಅರ್ಜಿಯ ಜೊತೆಗೆ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ನವೆಂಬರ್ 30 ರೊಳಗೆ ಸಲ್ಲಿಸಬೇಕು.

    ವಿಳಾಸ : Janatha Seva Cooperative Bank, Post Box no.3, Hampinagara, Bangalore-560104

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಡಿಗ್ರಿಯನ್ನು ಪಡೆದಿರಬೇಕು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-11-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-11-2021

    ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ನೋಡಿ

  • ಬೆಂಗಳೂರು ನಗರ ವಿಶ್ವವಿದ್ಯಾನಿಲಯ : ಪೂರ್ಣ/ ಅರೆಕಾಲಿಕ ಅತಿಥಿ ಉಪನ್ಯಾಸಕ ಹುದ್ದೆ

    2021-22 ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕಲಾ ಮತ್ತು ವಿಜ್ಞಾನ ವಿಭಾಗಗಳ ಅಡಿಯಲ್ಲಿ ಈ ಕೆಳಗಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಬೋಧಿಸಲು ಪೂರ್ಣ/ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಯುಜಿಸಿ ನಿಯಮಗಳ ಪ್ರಕಾರ ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ಜಾಲತಾಣ www.bcu.ac.in ದಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಸಂಬಂಧಿತ ದಾಖಲೆಯ‌ ಪ್ರತಿಗಳೊಂದಿಗೆ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು – 560001 ಇವರಿಗೆ ಕಚೇರಿ ಸಮಯದಲ್ಲಿ ದಿನಾಂಕ : 30-11-2021 ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.

    ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಲತಾಣಕ್ಕೆ ಭೇಟಿ ನೀಡಿ.

  • ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯಲ್ಲಿ ನರೇಗಾ ಯೋಜನೆಯಡಿ ಉದ್ಯೋಗ : 25,000 ರೂ. ತಿಂಗಳ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

    ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇರನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಜಿಲ್ಲಾ ಐ ಇ ಸಿ ಸಂಯೋಜಕ – 1ಹುದ್ದೆ

    ತಾಲ್ಲೂಕು ಐಇಸಿ ಸಂಯೋಜಕ – 1 ಹುದ್ದೆ

    ತಾಂತ್ರಿಕ ಸಹಾಯಕ ( ಕೃಷಿ ತೋಟಗಾರಿಕೆ )- 3 ಹುದ್ದೆಗಳು

    ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ – 7 ಹುದ್ದೆಗಳು

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-11-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :18-11-2021

    ಅಭ್ಯರ್ಥಿಗಳು ಅರ್ಜಿಗಳನ್ನು https://chikkamagaluru.nic.in ವೆಬ್ಸೈಟ್ ಮುಖಾಂತರ ಅರ್ಜಿ ಸಲ್ಲಿಸುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ನೋಟಿಫಿಕೇಶನ್ ನೋಡಿ.

  • ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ನ.15 ಕೊನೆಯ ದಿನಾಂಕ

    ಭಾರತ ಸರಕಾರದ ಅಧೀನದ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಹರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು‌

    ಹುದ್ದೆಗಳ ವಿವರ : ಇನ್ ಕಮ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ ಟ್ಯಾಕ್ಸ್ ಅಸಿಸ್ಟೆಂಟ್ ( tax assistant) – 11, ಸ್ಟೆನೋಗ್ರಾಫರ್ ಗ್ರೇಡ್ – 2- 5, ಮಲ್ಟಿ ಟಾಸ್ಕಿಂಗ್ ಸ್ಟಾಫ್- 5 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

    ವಿದ್ಯಾರ್ಹತೆ : ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳು ಪದವಿ ಪಾಸ್ ಮಾಡಿರಬೇಕು. ಸ್ಟೆನೋಗ್ರಾಫರ್ ಹುದ್ದೆಗೆ ದ್ವಿತೀಯ ಪಿಯುಸಿ ತೇರ್ಗಡೆ ಮಾಡಿರಬೇಕು. ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ ಎಸ್ ಎಸ್ ಎಲ್ ಸಿ / 10 ನೇ ತರಗತಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ : ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ಯನ್ನು ನೀಡಲಾಗುತ್ತದೆ.

    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳಾದ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಗ್ರಿ ಅಂಕಪಟ್ಟಿಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರಗಳ ಜೆರಾಕ್ಸ್ ಕಾಪಿಗೆ ಸೇತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

    ವಿಳಾಸ : ಡೆಪ್ಯೂಟಿ ಕಮಿಷನರ್, ಆದಾಯ ತೆರಿಗೆ ಇಲಾಖೆ, 3 ನೇ ಮಹಡಿ, ರೂಮ್ ನಂಬರಗ 388A, ಸೆಂಟ್ರಲ್ ರೆವಿನ್ಯೂ ಬಿಲ್ಡಿಂಗ್, ಐ ಪಿ ಎಸ್ಟೇಟ್, ನವದೆಹಲಿ – 110002

    ಈ ಮೇಲಿನ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 15 ರ ವರೆಗೆ ಅವಕಾಶ ಇದೆ‌.

    ಜಮ್ಮು ಕಾಶ್ಮೀರ, ಕೇರಳ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ಅಭ್ಯರ್ಥಿಗಳು ನವೆಂಬರ್ 30 ರವರೆಗೆ ಅರ್ಜಿ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಬೆಂಗಳೂರು : ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗವಕಾಶ

    ಬೆಂಗಳೂರಲ್ಲಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಟ್ರೈನರ್ ಮತ್ತು ಟ್ರೈನಿಂಗ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ‌ ಹಾಜರಾಗಬಹುದು.

    ಹುದ್ದೆ : ಟ್ರೈನರ್ – 30
    ಟ್ರೈನಿಂಗ್ ಅಸಿಸ್ಟೆಂಟ್ – 30

    ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಮೇಲಿನ ಹುದ್ದೆಗಳನ್ನು ‘ Scheme For Capacity Building in Textile Sector Smarth’ ಎಂಬ ಯೋಜನೆಯಡಿ ನೇಮಕ ಮಾಡಿಕೊಳ್ಳಲಾಗುವುದು.

    ವಿದ್ಯಾರ್ಹತೆ : 10th , 12th, ITI, ಡಿಪ್ಲೋಮಾ, ಇಂಜಿನಿಯರಿಂಗ್ ಪದವಿ ಯಾವುದೇ ವಿದ್ಯಾರ್ಹತೆ ಪಡೆದವರು ಅರ್ಜಿ ಸಲ್ಲಿಸಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.

    ವಯೋಮಿತಿ : ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. ಎಸ್ ಸಿ/ ಎಸ್ ಟಿ, ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-11-2021 ಸಂಜೆ 6 ಗಂಟೆಗೆ

    ಈ ಹುದ್ದೆಗಳನ್ನು ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

  • ವಿಜಯಪುರ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ

    ವಿಜಯಪುರ ಹಾಗೂ ವಿಜಯಪುರ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಶೀಘ್ರಲಿಪಿಗಾರರು ( stenographer) – 5 ಹುದ್ದೆ

    ವಿದ್ಯಾರ್ಹತೆ : ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ನಡೆಸುವ ದ್ವಿತೀಯ ಪಿಯುಸಿ, ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ