Author: Mallika

  • SAI : ಹುದ್ದೆಗೆ ಅರ್ಜಿ ಆಹ್ವಾನ

    SAI : ಹುದ್ದೆಗೆ ಅರ್ಜಿ ಆಹ್ವಾನ

    ಭಾರತೀಯ ಕ್ರೀಡಾ ಪ್ರಾಧಿಕಾರ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ : ಯಂಗ್ ಪ್ರೊಫೆಷನಲ್ (ಅಥ್ಲೆಟ್ ರಿಲೇಷನ್ ಮ್ಯಾನೇಜರ್ ) ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ಸಂಖ್ಯೆ : 5+2*

    ನೇಮಕಾತಿಯ ಬಗ್ಗೆ ವಿವರಗಳ ನಮೂನೆಗಾಗಿ SAI ವೆಬ್‌ಸೈಟ್‌ ಗೆ ಭೇಟಿ ನೋಡಬಹುದು.

  • ವೈದ್ಯಕೀಯ ಕ್ಷೇತ್ರದಲ್ಲಿ ಹುದ್ದೆ

    ವೈದ್ಯಕೀಯ ಕ್ಷೇತ್ರದಲ್ಲಿ ಹುದ್ದೆ

    ಬಿಬಿಎಂಪಿ ವೈದ್ಯಕೀಯ ಸಿಬ್ಬಂದಿ ರಜೆ ಸೌಲಭ್ಯವಿಲ್ಲದೆ ಕೆಲಸ ಮಾಡುವುದರಿಂದ ಗುತ್ತಿಗೆ ಆಧಾರದಲ್ಲಿ 45 ವೈದ್ಯರು ಜೊತೆಗೆ 600 ಸಿಬ್ಬಂದಿ ಕೋವಿಡ್ ನಿರ್ವಹಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಎನ್‌ಜಿಒ ಜೊತೆಗೂಡಿ ಹೋಂ ಐಸೊಲೇಷನ್ ಇರುವ ಸೋಕಿಂತರ ಶುಶ್ರೂಷೆ ಮಾಡಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿರುವ ವೈದ್ಯಕೀಯ ಕ್ಷೇತ್ರದ ಅನುಭವ ಇರುವವರು ಪಾಲಿಕೆಯೊಂದಿಗೆ ಸೇವೆ ಮಾಡಲು ಮುಂದೆ ಬಂದಲ್ಲಿಅವರಿಂದ ಸೇವೆ ಪಡೆಯಲಾಗುವುದು ಎಂದು ಗೌರವ್‌ಗುಪ್ತ ತಿಳಿಸಿದ್ದಾರೆ.

  • ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣದಲ್ಲಿ ಉದ್ಯೋಗ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣದಲ್ಲಿ ಉದ್ಯೋಗ

    ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಎಂ.ಬಿ.ಬಿ.ಎಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವೈದ್ಯಾಧಿಕಾರಿಗಳು ( ಎನ್‌ಸಿಡಿ) : ಒಟ್ಟು 07 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 45,000/- ರೂ.ವೇತನವಿರುತ್ತದೆ. 40 ವರ್ಷಕ್ಕಿಂತ ಕಡಿಮೆ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವೈದ್ಯಾಧಿಕಾರಿಗಳು ( ಆರ್‌.ಎನ್‌.ಟಿ.ಸಿ.ಪಿ) : ಒಟ್ಟು ಎರಡು ಹುದ್ದೆಗಳಿದ್ದು, ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿದ್ದು, ಮಾಸಿಕ 45,000/-ರೂ.ವೇತನವಿರುತ್ತದೆ. 40 ವರ್ಷಕ್ಕಿಂತ ಕಡಿಮೆ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವೈದ್ಯಾಧಿಕಾರಿಗಳು (ರಾಜ್ಯ ರಕ್ತ ವಾಹಿನಿ ವಿಭಾಗ) : ಒಂದು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ರೂ. 36,750/- ಮಾಸಿಕ ವೇತನವಿರುತ್ತದೆ. 40 ವರ್ಷಕ್ಕಿಂತ ಕಡಿಮೆ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಹ ಅಭ್ಯರ್ಥಿಗಳು ಎಲ್ಲಾ ದಾಖಲಾತಿಗಳೊಂದಿಗೆ ದಿನಾಂಕ : 29-04-2021 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎನ್‌ಹೆಚ್‌ಎಂ ವಿಭಾಗದ ವಿಷಯ ನಿರ್ವಾಹಕರಾದ ಶ್ರೀ.ಎಮ್‌.ಎಸ್‌.ಮಕಾನದಾರ (ಪ್ರ.ದ.ಸ) ಮೊ. 9606345997 ಇವರಲ್ಲಿ ಅರ್ಜಿ ಪಡೆದು ಬೆಳಿಗ್ಗೆ ಹತ್ತುಗಂಟೆಯಿಂದ ಸಾಯಂಕಾಲ ಐದು ಗಂಟವರೆಗೆ ದಾಖಲಾತಿ ಸಲ್ಲಿಸಲು ಸೂಚಿಸಲಾಗಿದೆ.

  • ಶ್ರೀ ಪ್ರಭುಲಿಂಗೇಶ್ವರ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್ ವಿವಿಧ ಹುದ್ದೆ

    ಶ್ರೀ ಪ್ರಭುಲಿಂಗೇಶ್ವರ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್ ವಿವಿಧ ಹುದ್ದೆ

    ಶ್ರೀ ಪ್ರಭುಲಿಂಗೇಶ್ವರ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್.,ಸಿದ್ದಾಪುರ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಪ್ರಧಾನ ವ್ಯವಸ್ಥಾಪಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಎಂಬಿಎ(ಹಣಕಾಸು ) ಅಥವಾ ಎಂ.ಕಾಂ. ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 15 ವರ್ಷಗಳ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ,ವಿದ್ಯಾರ್ಹತೆಯ ದೃಢೀಕರಣ ಪತ್ರ , ಅನುಭವ ಪತ್ರದೊಂದಿಗೆ ಪ್ರಕಟಣೆ ದಿನಾಂಕದಿಂದ 15 ದಿನದೊಳಗೆ ನಾಡೋಜ ಜಗದೀಶ ಎಸ್ ಗುಡಗುಂಟಿ , ಅಧ್ಯಕ್ಷರು, ಶ್ರೀ ಪ್ರಭುಲಿಂಗೇಶ್ವರ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್.,ಸಾಕ್ಷಾತ್ಕಾರ ನಿಲಯ, ರಾಮತೀರ್ಥ ಅರಮನೆ ರಸ್ತೆ, ಕಿತ್ತೂರು ಚೆನ್ನಮ್ಮ ಸರ್ಕಲ್, ಜಮಖಂಡಿ – 587301 ಜಿಲ್ಲೆ : ಬಾಗಲಕೋಟ ಹಾಗೂ ಇ -ಮೇಲ್ ,ಮೂಲಕ ಅರ್ಜಿ ಸಲ್ಲಿಸುವವರು [email protected] ಹಾಗೂ [email protected] ಎರಡು ಇ-ಮೇಲ್ ವಿಳಾಸಗಳಿಗೆ ರವಾನಿಸಿಲು ತಿಳಿಸಲಾಗಿದೆ.

  • SBI : ಭರ್ಜರಿ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

    SBI : ಭರ್ಜರಿ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

    ಭಾರತೀಯ ಸ್ಟೇಟ್ ಬ್ಯಾಂಕ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ.

    ಹುದ್ದೆ : ಕ್ಲರ್ಕ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ ಸಂಖ್ಯೆ : 5237

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಎಪ್ರಿಲ್ 27, 2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 17, 2021

    ಕರ್ನಾಟಕದಲ್ಲಿ 509 ಕ್ಲರ್ಕ್ ಹುದ್ದೆಗಳನ್ನು ನೇಮಕ ಮಾಡಲಾಗುವುದು.

    ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿವಿಯಿಂದ ಯಾವುದೇ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

    ವಿದ್ಯಾಭ್ಯಾಸ : ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪಾಸ್ ಮಾಡಿರಬೇಕು.

    ವಯೋಮಿತಿ : ಈ ಹುದ್ದೆಗೆ ಕನಿಷ್ಠ 20 ಹಾಗೂ ಗರಿಷ್ಠ 28 ವಯೋಮಿತಿ ಮೀರದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗೆ ರೂ. 750/- ಹಿಂದುಳಿದ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ.750/- ಎಸ್‌ಸಿ/ಎಸ್‌ಟಿ/ಪಿಡಬ್ಲೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

    ರಿಜಿಸ್ಟ್ರೇಷನ್ ಪಡೆದ ಅಭ್ಯರ್ಥಿಗಳಿಗೆ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಜೂನ್ 31, 2021 ರಂದು ಮಾಡಲಾಗುತ್ತದೆ. ಕೊರೊನಾ ಹಿನ್ನೆಲೆಯಲ್ಲಿ ದಿನಾಂಕಗಳಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳು ಇರಬಹುದು. ಆನ್‌ಲೈನ್ ಪೂರ್ವಭಾವಿ ಪರೀಕ್ಷೆಯಲ್ಲಿಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಮತ್ತು ಆಯಾ ರಾಜ್ಯಕ್ಕೆ ಸಂಬಂಧಪಟ್ಟ ಅಧಿಕೃತ ಭಾಷೆಗಳ ಕುರಿತು ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಅಂತಿಮವಾಗಿ ಕ್ಲರ್ಕ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮೂಲ ವೇತನ ರೂ. 13,075 ನೀಡಲಾಗುತ್ತದೆ. ಜತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಸಹಾಯಕ ಕಂ ಮಾರಾಟ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಸಹಾಯಕ ಕಂ ಮಾರಾಟ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಹುದ್ದೆ : ಐದು ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ (Junior Assistant cum sales clerk) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
    ಸಾಮಾನ್ಯ ಅಭ್ಯರ್ಥಿ : 3
    ಪರಿಶಿಷ್ಟ ಜಾತಿ : 2
    ಪ್ರವರ್ಗ – 1-1

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸಂಘವು ಪೂರೈಸುವ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ, ದಿನಾಂಕ : 24-05-2021 ರಂದು ಸಂಜೆ 5.00 ಘಂಟೆ ಒಳಗಾಗಿ ಸಂಘಕ್ಕೆ ತಲುಪುವಂತೆ ಸಲ್ಲಿಸತಕ್ಕದ್ದು.

    ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಕಲಿತಿರಬೇಕು. ಹಾಗೂ ಭಾಷಾ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಕಂಪ್ಯೂಟರ್ ಅಪರೇಟ್ ಮತ್ತು ಅಪ್ಲಿಕೇಶನ್ ತರಬೇತಿ ಮತ್ತು ಜ್ಞಾನ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ ಹದಿನೆಂಟು ವರ್ಷ ತುಂಬಿರಬೇಕು. ಹಾಗೂ ಈ ಕೆಳಕಂಡಂತೆ ಗರಿಷ್ಠ ವಯೋಮಿತಿಗೊಳಪಟ್ಟಿರಬೇಕು.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ – 1 ಅಭ್ಯರ್ಥಿಗಳಿಗೆ 40 ವರ್ಷ, 2a, 2b,3a, 3b ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿ ಹೊಂದಿರಬೇಕು.

    ಅರ್ಜಿ ಸಲ್ಲಿಸುವ ವಿಧಾನ : ಸಂಘದ ಕೇಂದ್ರ ಕಚೇರಿಯಲ್ಲಿ ಅರ್ಜಿಯನ್ನು ವಿತರಿಸಲಾಗುವುದು. ರೂ.2000 ಪಾವತಿ ಮಾಡಿ ಅರ್ಜಿಯನ್ನು ಪಡೆಯಬಹುದು.

    ಸಂಘದಿಂದ ಪೂರೈಸಿದ ಮೂಲ ಅರ್ಜಿಯನ್ನು ಭರ್ತಿ ಮಾಡಿ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಸರ್ಜಾಪುರ -562125 ಇಲ್ಲಿಗೆ ಸಲ್ಲಿಸಬೇಕು.