Author: Mallika

  • ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ: ನೇಮಕ ಪ್ರಕಟಣೆ

    ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ: ನೇಮಕ ಪ್ರಕಟಣೆ

    ಮಹಾತ್ಮಾ ಗಾಂಧಿ‌ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ ಖಾತರಿ ಯೋಜನೆಯಡಿ ಬೆಂಗಳೂರು ನಗರ ಪಂಚಾಯಿತಿ ವ್ಯಾಪ್ತಿಯಲ್ಲಿಈ ಕೆಳಕಂಡ ಹುದ್ದೆಗಳಿಗೆ 11 ತಿಂಗಳ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ: ತಾಂತ್ರಿಕ ಸಹಾಯಕರು (ಅರಣ್ಯ)-01, ತಾಂತ್ರಿಕ ಸಹಾಯಕರು ( ತೋಟಗಾರಿಕೆ) -01

    ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ (ಫಾರೆಸ್ಟ್ರಿ) , ಎಂಎಸ್ಸಿ (ಫಾರೆಸ್ಟ್ರಿ) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.24,000/- ಮಾಸಿಕ ವೇತನ ( ಪ್ರಯಾಣ ಭತ್ಯೆ ಪ್ರತಿ ಕಿ.ಮೀ.ಗೆ 5 ರೂ.ನಂತೆ ಗರಿಷ್ಠ ಮಾಸಿಕ ರೂ.1,500). ಈ ಹುದ್ದೆಗೆ 21ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ತಾಂತ್ರಿಕ ಸಹಾಯಕರು (ತೋಟಗಾರಿಕೆ) ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛೆ ಪಡುವ ಅಭ್ಯರ್ಥಿಗಳು ಬಿಎಸ್ಸಿ ( ಹೋರಿಕಲ್ಚರ್), ಎಂ.ಎಸ್ಸಿ ( ಹೋರಿಕಲ್ಚರ್) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಇರಬೇಕು. ಈ ಹುದ್ದೆಗೆ ಅರ್ಜಿ‌ ಸಲ್ಲಿಸುವ ಅಭ್ಯರ್ಥಿಗಳು 21 ರಿಂದ 41 ರೊಳಗೆ ವಯೋಮಿತಿ ಇರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 24,000/- ಮಾಸಿಕ ವೇತನ ( ಪ್ರಯಾಣ ಭತ್ಯೆ ಪ್ರತಿ ಕಿ.ಮೀ.ಗೆ 5 ರೂ.ನಂತೆ ಗರಿಷ್ಠ ಮಾಸಿಕ ರೂ.1,500).ಇರುತ್ತದೆ.

    ಭರ್ತಿ ಮಾಡಿ‌ದ ಅರ್ಜಿಯನ್ನು ದಿನಾಂಕ 15-05-2021 ರ ಸಂಜೆ 5.30 ರೊಳಗೆ ಖುದ್ದಾಗಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಟಪಾಲು ಶಾಖೆಗೆ ಸಲ್ಲಿಸುವುದು.

    ಅರ್ಜಿ ಸಲ್ಲಿಸುವ ವಿಳಾಸ : ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬನಶಂಕರಿ ದೇವಸ್ಥಾನದ ಹತ್ತಿರ, ಎಸ್.ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು- 70

  • BEL : 268 ಉದ್ಯೋಗವಕಾಶ

    BEL : 268 ಉದ್ಯೋಗವಕಾಶ

    ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮೇ 5, 2021 ದಿನಾಂಕವಾಗಿದೆ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ :

    ಹುದ್ದೆ : ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಎಪ್ರಿಲ್ 21 , 2021
    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :ಮೇ 05, 2021

    ಒಟ್ಟು ಹುದ್ದೆ : 268

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000/- ರೂ.50,000/- ವರೆಗೆ ವೇತನವಿರುತ್ತದೆ.

    ಹುದ್ದೆ ಸ್ಥಳ : ಭಾರತದೆಲ್ಲೆಡೆ

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ಅಥವ ಯುನಿವರ್ಸಿಟಿಯಿಂದ ಬಿಇ/ಬಿ.ಟೆಕ್ ತೇರ್ಗಡೆ ಹೊಂದಿರಬೆಕು.

    ವಯೋಮಿತಿ : ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 32 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ. ಪಿಡ್ಬ್ಲುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು. ಜನರಲ್/ಒಬಿಸಿ ಅಭ್ಯರ್ಥಿಗಳಿಗೆ ರೂ.500/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡಬ್ಲ್ಯುಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • RDPR : ವಿವಿಧ ಹುದ್ದೆ: ಮೇ 01 ಕಡೇ ದಿನಾಂಕ

    RDPR : ವಿವಿಧ ಹುದ್ದೆ: ಮೇ 01 ಕಡೇ ದಿನಾಂಕ

    ಕರ್ನಾಟಕ ರಾಜ್ಯಪಾಲರ ಪರವಾಗಿ 2021-22 ನೇ ಸಾಲಿನಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬಾಗಲಕೋಟೆ ಹಾಗೂ ಇದರ ಅಡಿಯಲ್ಲಿ ಬರುವ ಉಪ-ವಿಭಾಗ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಹಿರಿಯ/ಕಿರಿಯ ಮಾದರಿ ವಿಶ್ಲೇಷಗಾರರು ಮತ್ತು ಮಾದರಿ ಸಂಗ್ರಹಗಾರರ ಹುದ್ದೆಗಳಿಗೆ ಷರತ್ತುನ್ವಯ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-04-2021ರಿಂದ 01-05-2021 ಸಾಯಂಕಾಲ 04.00 ಗಂಟೆಯವರೆಗೆ ( ಪ್ರಕಟಣೆಯನ್ನು ಬದಲಾವಣೆ/ಮುಂದೂಡುವ/ರದ್ದುಪಡಿಸುವ ಹಕ್ಕನ್ನು ಕಾಯ್ದಿರಿಸಲಾಗಿದೆ)

    ನೈರ್ಮಲ್ಯ ಯೋಜನೆಯಲ್ಲಿ ಕೆಲಸ ನಿರ್ವಹಿಸಿದ ಅನುಭವವುಳ್ಳವರಿಗೆ ಮಾತ್ರ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಬಾಗಲಕೋಟೆಯವರಿಂದ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹಿರಿಯ ವಿಶ್ಲೇಷಣಾಗಾರರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/-, ಕಿರಿಯ ವಿಶ್ಲೇಷಣೆಗಾರರು ಹುದ್ದೆಗೆ ಮಾಸಿಕ ರೂ.15,000/-, ನೀರಿನ ಮಾದರಿ ಸಂಗ್ರಹಗಾರರು ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.13,000+2000/- ವೇತನ ವಿರುತ್ತದೆ.

    ವಯೋಮಿತಿ : ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು.
    ವಯೋಮಿತಿ ದೃಢೀಕರಿಸಲು ಎಸ್ಎಸ್‌ಎಲ್‌ಸಿ ಅಂಕಪಟ್ಟಿ ಹಾಜರುಪಡಿಸುವುದು.

    ಆಯ್ಕೆಯಾದ ಅಭ್ಯರ್ಥಿಗಳು ಈ ಜಿಲ್ಲೆಯಲ್ಲಿ ಪ್ರಯೋಗಾಲಯದ ಯಾವುದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಲು ಮೇಲಾಧಿಕಾರಿಗಳೂ ಸೂಚಿಸಿದ್ದಲ್ಲಿ ನಿರ್ವಹಿಸಲು ಬದ್ಧನಾಗಿರಬೇಕು.

    ಹುದ್ದೆಗಳು ಗುತ್ತಿಗೆಯ ತಾತ್ಕಾಲಿಕ ಖಾಲಿ ಇರುವ ಅವಧಿಗಾಗಿ ಮಾತ್ರ ಇರುತ್ತದೆ.

    ಸ್ವ ವಿವರಗಳೊಂದಿಗೆ ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯನಿರ್ವಾಹಕ ಇಂಜಿನಿಯರವರ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ , ಹಳೇ ತಹಶೀಲ್ದಾರ ಕಚೇರಿ ಕಟ್ಟಡ, ಬಾಗಲಕೋಟೆ

  • 62 ಆರೋಗ್ಯ ಸಹಾಯಕಿ ಹುದ್ದೆಗೆ ನೇಮಕ

    62 ಆರೋಗ್ಯ ಸಹಾಯಕಿ ಹುದ್ದೆಗೆ ನೇಮಕ

    ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ : ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-04-2021 ರೊಳಗೆ ಕಚೇರಿಗೆ ನೇರವಾಗಿ ಮೂಲ ದಾಖಲೆಗಳೊಂದಿಗೆ ಹಾಜರಾಗತಕ್ಕದ್ದು.

    ನೇಮಕ‌‌‌ ಮಾಡಿಕೊಳ್ಳಬೇಕಾದ ಸಂಖ್ಯೆ : 62

    ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

    ಅನುಭವ: ಗಣಕಯಂತ್ರ ತರಬೇತಿ ಹೊಂದಿರಬೇಕು.

    ವಿದ್ಯಾರ್ಹತೆ : ಎಎನ್ ಎಂ ತರಬೇತಿಯಲ್ಲಿ ತೇರ್ಗಡೆ/ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಸದರಿ ಹುದ್ದೆಯು 6 ತಿಂಗಳ ‌ಮಟ್ಟಿಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು. ಯಾವ ಅಭ್ಯರ್ಥಿ ನೇಮಕಾತಿಗಾಗಿ ಅತೀ ಜರೂರು ಇರುವುದರಿಂದ ಮೊದಲಿಗೆ ಮೂಲ ದಾಖಲೆಗಳನ್ನು ಸಲ್ಲಿಸುತ್ತಾರೋ ಅಂತಹ ಅಭ್ಯರ್ಥಿಗಳಿಗೆ ಆಧ್ಯತೆ ನೀಡಿ ನೇಮಕ ಮಾಡಿಕೊಳ್ಳುವುದು.

  • KSP : ಭರ್ಜರಿ ಅವಕಾಶ : 4000 ಹುದ್ದೆಗಳಿಗೆ ಅರ್ಜಿ ಆಹ್ವಾನ

    KSP : ಭರ್ಜರಿ ಅವಕಾಶ : 4000 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 31 ಮೇ 2021 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಆನ್ಲೈನ್ ಅರ್ಜಿಸಲ್ಲಿಸಲು ಆರಂಭಿಕ ದಿನಾಂಕ : 22 ಎಪ್ರಿಲ್2021
    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಮೇ 2021

    ಹುದ್ದೆ : ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ : 4000

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23,500/- ರಿಂದ ರೂ.47,650/- ವರೆಗೆ ವೇತನವಿರುತ್ತದೆ.

    ವಿದ್ಯಾರ್ಹತೆ : ಅಭ್ಯರ್ಥಿಗಳು 10th ಹಾಗೂ 12th ನ್ನು ತೇರ್ಗಡೆ ಹೊಂದಿರಬೇಕು.

    ವಯೋಮಿತಿ : ಕನಿಷ್ಠ 18 ಹಾಗೂ ಗರಿಷ್ಠ 30 ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಒಬಿಸಿ, 2A, 2B, 3A ಹಾಗೂ 3B ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಜನರಲ್ ಅಭ್ಯರ್ಥಿಗಳಿಗೆ ರೂ.250, 2A,2B, 3A ಹಾಗೂ 3B ಅಭ್ಯರ್ಥಿಗಳಿಗೆ ರೂ.250/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಇಟಿ, ಪಿಎಸ್‌ಟಿ ಮೂಲಕ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

  • ಬಿಪಿಸಿಎಲ್: ಹುದ್ದೆಗಳಿಗೆ ನೇಮಕ

    ಬಿಪಿಸಿಎಲ್: ಹುದ್ದೆಗಳಿಗೆ ನೇಮಕ

    ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ( ಬಿಪಿಸಿಎಲ್‌) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಜೂನ್ 15 , 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಹುದ್ದೆ: ನಿರ್ದೇಶಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಎಂಬಿಎ/ಪಿಜಿಡಿಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

    ವಯೋಮಿತಿ : ಕನಿಷ್ಠ 45 ರಿಂದ ಗರಿಷ್ಠ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವೇತನ : ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.1,80,000/- ರಿಂದ ರೂ. 3,40,000/- ವೇತನವನ್ನು ನೀಡಲಾಗುವುದು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ‌ ನೀಡಿ, ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೂನ್.15, ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ