Author: Mallika

  • IOCL ನಲ್ಲಿ ಉದ್ಯೋಗ : ಆನ್ಲೈನ್ ಮೂಲಕ‌ 469 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಲು ಅ.25 ಕೊನೆಯ ದಿನಾಂಕ

    ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ( ಐಒಸಿಎಲ್) ಟ್ರೇಡ್ ಅಪ್ರೆಂಟಿಸ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್ ಮತ್ತು ಡಿಇಒ ಪೋಸ್ಟ್ ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆಯ ಹೆಸರು : ಐಟಿಐ, ಡಿಪ್ಲೊಮಾ ಅಪ್ರೆಂಟಿಸ್

    ಹುದ್ದೆಗಳ ಸಂಖ್ಯೆ : 469

    ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೊಮಾ ಪಾಸ್ ಮಾಡಿರಬೇಕು. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಯಾವುದೇ ಡಿಗ್ರಿ ಪಾಸ್ ಮಾಡಿರಬೇಕು. ಡಿಇಒ ಮತ್ತು ಡೊಮೆಸ್ಟಿಕ್ ಡಿಇಒ ಹುದ್ದೆಗಳಿಗೆ ಪಿಯುಸಿ ತೇರ್ಗಡೆ ಹೊಂದಿರಬೇಕು.

    ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

    ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 05-10-2021

    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-10-2021

    ಲಿಖಿತ ಪರೀಕ್ಷೆ ದಿನಾಂಕ : 21-11-2021

    ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ದಿನಾಂಕ : ನವೆಂಬರ್ 5 ರಿಂದ 21, 2021

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ ಶಿಕ್ಷಣದಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ, ಆಯ್ಕೆ ಮಾಡಲಾಗುತ್ತದೆ. ನಂತರ ಸಂದರ್ಶನ/ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

  • 3006 ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆ : ಅ.18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

    ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ( ಸಿಎಚ್ ಒ) ಪೋಸ್ಟ್ ಗಳನ್ನು ಭರ್ತಿ ಮಾಡಲು ಕಳೆದ ತಿಂಗಳು ಅಧಿಸೂಚನೆ ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.

    ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27-09-2021

    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-10-2021 ಸಂಜೆ 5 ಗಂಟೆವರೆಗೆ

    ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ : 23-10-2021

    ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭ ದಿನಾಂಕ : 26-10-2021

    ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸಿಎಚ್ ಒ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ.

    ಹುದ್ದೆಯ ಹೆಸರು : ಸಮುದಾಯ ಆರೋಗ್ಯ ಅಧಿಕಾರಿಗಳು ( ಸಿಹೆಚ್ ಒ)

    ಹುದ್ದೆಗಳ ಸಂಖ್ಯೆ : 3006

    ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್/ ಪೋಸ್ಟ್ ಬಿಎಸ್ಸಿ ನರ್ಸಿಂಗ್ ಜೊತರ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ ಎನ್ ಸಿ/ ಐಎನ್ ಸಿ ಅಲ್ಲಿ ನೋಂದಣಿ ಪಡೆದಿರಬೇಕು.

    ಮಾಸಿಕ ಸಂಭಾವನೆ : ರೂ.22,000 ಜೊತೆಗೆ ರೂ. 8000 ರವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಹೆಚ್ಚಿನ ಆಧ್ಯತೆಯುಳ್ಳ ಜಿಲ್ಲೆಗಳಲ್ಲಿ ಈ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ ರೂ. 24,200 ನೀಡಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

  • ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆ

    ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ‌ಮಹಾನಗರ ಪಾಲಿಕೆಯಲ್ಲಿ‌ ಖಾಲಿ‌ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ‌ ಆನ್ಲೈನ್ ಮೂಲಕ‌ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದ.ಕ.ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ ವೆಬ್ಸೈಟ್ ಹಾಗೂ ಮಂಗಳೂರು ಮಹಾನಗರಪಾಲಿಕೆಯ ವೆಬ್ಸೈಟ್ ಮೂಲಕ ಸಲ್ಲಿಸಬಹುದಾಗಿದೆ.

    ಹುದ್ದೆ : ಪೌರಕಾರ್ಮಿಕರು

    ಹುದ್ದೆ ಸಂಖ್ಯೆ : 190

    ವಿದ್ಯಾರ್ಹತೆ : ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

    ವಯೋಮಿತಿ : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 45 ವರ್ಷ‌ ಮೀರಿರಬಾರದು.

    ವೇತನ ಶ್ರೇಣಿ : 17,000- 28,950

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲರಿಗೆ ರೂ. 100/- , ಇತರರಿಗೆ ರೂ.200/-

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-10-2021 ರಿಂದ 23-11-2021

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ

  • ರಾಮನಗರ ಜಿಲ್ಲೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ಹುದ್ದೆಗಳು

    ರಾಮನಗರ ಜಿಲ್ಲೆಯಲ್ಲಿ 2021-22 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಈ ಕೆಳಕಂಡ ವಿವಿಧ ಹುದ್ದೆಗಳಿಗೆ ಎನ್.ಹೆಚ್.ಎಮ್ ಮಾರ್ಗಸೂಚಿಯನ್ವಯ ನಿಯಮಾನುಸಾರವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಹಾಗೂ ಸದರಿ ಪ್ರಕಟಣೆಯು ( Rolling Advertisement) ಆಗಿರುವುದರಿಂದ ಇದರ ಕಾಲಾವಧಿಯು 31-03-2022 ವರೆಗೆ ಇರುತ್ತದೆ. ಪ್ರತಿಯೊಂದು ಹುದ್ದೆಯ ಸಾಮಾನ್ಯ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

    ಹುದ್ದೆಯ ಹೆಸರು : ಶುಶ್ರೂಷಕಿ, ಮಕ್ಕಳ ತಜ್ಞರು, ವೈದ್ಯಾಧಿಕಾರಿಗಳು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ಡಯಟ್ ಕೌನ್ಸಿಲರ್, ಕಿ.ಮ.ಆ.ಸ, ಹಿ.ಮ.ಆ.ಸ, OT Technician, Maintenance engineer, DEIC manager, ಫಿಜಿಯೋಥೆರಪಿಸ್ಟ್, ತಜ್ಞ ವೈದ್ಯರುಗಳು

    ದಿನಾಂಕ 08-10-2021 ರಂದು ಅರ್ಹ ಅಭ್ಯರ್ಥಿಗಳು ಜಾಹಿರಾತಿನಲ್ಲಿ ಸೂಚಿಸಿದ ದಾಖಲಾತಿಗಳ ಪರಿಶೀಲನೆಗಾಗಿ ಅವಶ್ಯ ಪೂರಕ ದಾಖಲಾತಿಯೊಂದಿಗೆ ಬೆಳಗ್ಗೆ 10:00 ರಿಂದ 12 ಗಂಟೆಯೊಳಗೆ ನಿಗದಿತ ಅರ್ಜಿ ನಮೂನೆಯನ್ನು ಪಡೆದು ನೋಂದಣಿ ಮಾಡಿಕೊಳ್ಳಲು ಸೂಚಿಸಿದೆ. ನೋಂದಣಿಯಾದ ಅಭ್ಯರ್ಥಿಗಳನ್ನು ಮಾತ್ರ ದಾಖಲಾತಿ ಪರಿಶೀಲನೆಗೆ ಪರಿಗಣಿಸಲಾಗುವುದು.

    ನೇರ ಸಂದರ್ಶನವನ್ನು ಸದರಿ ದಿನದಂದೇ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು, ಜಿ.ಆ.ಕು.ಕ.ಕಛೇರಿ, ರಾಮನಗರ ( 9449843120) ಇಲ್ಲಿ ಸಂಪರ್ಕಿಸಬಹುದು.

  • KSBCL : ಉಪ ಪ್ರಧಾನ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ರಾಜ್ಯ ದಲ್ಲಿ ಮದ್ಯ/ಮದ್ಯಸಾರ ಪ್ರವಹನ ಚಟುವಟಿಕೆಗಳಲ್ಲಿ ತೊಡಗಿರುವ ರಾಜ್ಯದ ಪ್ರತಿಷ್ಠಿತ ನಿಗಮಗಳಲ್ಲಿ ಕರ್ನಾಟಕ ರಾಜ್ಯ ಪಾನೀಯ ನಿಗಮವು ಒಂದಾಗಿರುತ್ತದೆ.

    ನಿಗಮದಲ್ಲಿ ಉಪ ಪ್ರಧಾನ ವ್ಯವಸ್ಥಾಪಕರು ( ಅಡಿಟ್) ಹುದ್ದೆಗೆ, ನೇರ ಗುತ್ತಿಗೆ ಆಧಾರದ ಮೇಲೆ 02 ವರ್ಷಗಳ ಅವಧಿಗೆ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮಕ್ಕೆ ಅವಶ್ಯಕತೆ ಇದ್ದಲ್ಲಿ ಮತ್ತು ಅಭ್ಯರ್ಥಿಯ ಕೆಲಸ ನಿರ್ವಹಣೆಯನ್ನನುಸರಿಸಿ ಗುತ್ತಿಗೆ ಅವಧಿಯನ್ನು ಮತ್ತೊಂದು ಅವಧಿಗೆ ಮುಂದುವರೆಸಲಾಗುವುದು. ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ದಿನಾಂಕ 28-10-2021 ರ ಸಂಜೆ 5.00 ಗಂಟೆಯೊಳಗೆ ಮೇಲಿನ ವಿಳಾಸಕ್ಕೆ ಕಳುಹಿಸತಕ್ಕದ್ದು‌ ಅಭ್ಯರ್ಥಿಗಳು ಹುದ್ದೆ, ಅಗತ್ಯ ವಿದ್ಯಾಭ್ಯಾಸ, ವಯಸ್ಸು, ವೇತನ ಮುಂತಾದ ವಿವರಗಳನ್ನು ನಿಗಮದ ಅಂತರ್ಜಾಲ www.ksbcl.com ಗೆ ಭೇಟಿ ನೀಡಬಹುದು.

  • GPNL : ಪಶುಸಂಗೋಪನಾ ಕಾರ್ಯಕರ್ತ ಹುದ್ದೆಗೆ ಅರ್ಜಿ ಆಹ್ವಾನ, 10th ಪಾಸಾದವರಿಗೆ ಆದ್ಯತೆ

    ಗ್ರಾಮೀಣ ಪಶು ಸಂಗೋಪನಾ ನಿಗಮ ನಿಯಮಿತ, ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಪಶು ಸಂಗೋಪನಾ ಅಭಿವೃದ್ಧಿ ಮಿಷನ್ ಅಡಿಯಲ್ಲಿ ನಿಗಮವು ಉನ್ನತ ಗುಣಮಟ್ಟದ ಪ್ರಾಣಿ ಉತ್ಪನ್ನಗಳನ್ನು ಸಮಂಜಸವಾದ ಬೆಲೆಯಲ್ಲಿ ಮಾರಾಟ ಮಾಡಲು ಈ ಕೆಳಗಿನ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಹುದ್ದೆಯ ಹೆಸರು : ಪಶು ಸಂಗೋಪನಾ ಕಾರ್ಯಕರ್ತ

    ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ ‌40 ವರ್ಷ ವಯೋಮಿತಿ ಹೊಂದಿರಬೇಕು.

    ವಿದ್ಯಾರ್ಹತೆ : 10 ನೇ ತರಗತಿ ತೇರ್ಗಡೆ ಹೊಂದಿರಬೇಕು.

    ಮಾಸಿಕ ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.10,000/- ವೇತನ ನಿಗದಿಪಡಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-10-2021