Author: Mallika

  • KSCDRC ನಲ್ಲಿ ವಿವಿಧ ಹುದ್ದೆ

    KSCDRC ನಲ್ಲಿ ವಿವಿಧ ಹುದ್ದೆ

    ಕರ್ನಾಟಕ ರಾಜ್ಯದ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿನ ಅಧ್ಯಕ್ಷರು, ಸದಸ್ಯರು ಹಾಗೂ ಮಹಿಳಾ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ, ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ್ಕೆ ಅರ್ಹರಿರುವಂತಹ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ದಿನಾಂಕ 31-04-2021 ರಾತ್ರಿ 11.59 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಗಿರುತ್ತದೆ.

    ಹುದ್ದೆಗಳ ವಿವರ : ಅಧ್ಯಕ್ಷರು, ಸದಸ್ಯರು, ಮಹಿಳಾ ಸದಸ್ಯರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ನೇಮಕಾತಿ ವಿಧಾನ : ಗ್ರಾಹಕ ಸಂರಕ್ಷಣಾ ( ರಾಜ್ಯ ಆಯೋಗಗಳ ಹಾಗೂ ಜಿಲ್ಲಾ ಆಯೋಗಗಳ ಅಧ್ಯಕ್ಷರ ಹಾಗೂ ಸದಸ್ಯರ ನೇಮಕಾತಿಗೆ ವಿದ್ಯಾರ್ಹತೆ, ನೇಮಕಾತಿ ಕ್ರಮ, ನೇಮಕಾತಿ ವಿಧಾನ, ಕಛೇರಿ ಸೇವಾವಧಿ, ರಾಜೀನಾಮೆ ಹಾಗೂ ವಜಾಗೊಳಿಸುವಿಕೆ ) ನಿಯಮಗಳು , 2020 ಅನುಸಾರ ಅಧ್ಯಕ್ಷರ ಹಾಗೂ ಸದಸ್ಯರುಗಳ ಆಯ್ಕೆಯನ್ನು ಮಾಡಲಾಗುವುದು.

    ಸೇವಾವಧಿ : 4 ವರ್ಷಗಳು ಅಥವಾ 65 ವರ್ಷಗಳ ವಯೋಮಾನದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ.250/-ಗಳ ಅರ್ಜಿ ಶುಲ್ಕವನ್ನು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಕಲ್ಪಿಸಿರುವಂತಹ ವಿಧಾನದಲ್ಲಿ ಪಾವತಿಸತಕ್ಕದ್ದು.

    ಅರ್ಜಿ ಸಲ್ಲಿಸುವ ವಿಧಾನ : ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಈ ಕೆಳಕಂಡ ಜಾಲತಾಣಗಳ ಮೂಲಕ ಸಲ್ಲಿಸಬಹುದಾಗಿರುತ್ತದೆ. https://aaharasachivalaya.karnataka.gov.in/
    https://kscdrc.karnataka.gov.in
    https://sevasindhu.karnataka.gov.in

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಸಂಶೋಧನಾ ಸಹಾಯಕರ ನೇಮಕಾತಿಗಾಗಿ ಪ್ರಕಟಣೆ

    ಸಂಶೋಧನಾ ಸಹಾಯಕರ ನೇಮಕಾತಿಗಾಗಿ ಪ್ರಕಟಣೆ

    ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ನವನಗರ, ಹುಬ್ಬಳ್ಳಿ ಇಲ್ಲಿನ ವಿಜ್ಞಾನೇಶ್ವರ ಅಧ್ಯಯನ ಪೀಠಕ್ಕೆ ಮಾಸಿಕ ಸಂಚಿತ ವೇತನದ ಆಧಾರದ ಮೇಲೆ ಸಂಶೋಧನಾ ‌ಸಹಾಯಕ ಹುದ್ದೆಯ ನೇಮಕಾತಿಗಾಗಿ ‌ಅರ್ಜಿಯನ್ನು ಆಹ್ವಾನಿದ್ದು, ವಿವರಗಳು ಈ ಕೆಳಗಿನಂತಿವೆ.

    ಹುದ್ದೆ : ಸಂಶೋಧನಾ ಸಹಾಯಕ – 01

    ಮಾಸಿಕ ವೇತನ : ರೂ. 20,000/-

    ವಿದ್ಯಾರ್ಹತೆ : ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ.
    ಸಂಶೋಧನಾ ಪ್ರಾಜೆಕ್ಟ್ ಗ/ ಸಂಶೋಧನಾ ಲೇಖನಗಳ ಪ್ರಕಟಣೆಯ ಮೂಲಕ ಗುರುತಿಸಬಹುದಾದ ಸಂಶೋಧನಾ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ ಆದ್ಯತೆ.

    ಆಸಕ್ತಿಯುಳ್ಳ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಜಾಲತಾಣದಲ್ಲಿ (www.kslu.karnataka.gov.in) ಲಭ್ಯವಿರುವ ಅರ್ಜಿ ನಮೂನೆಗಳನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಲಾದ ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಕುಲಸಚಿವರು,‌ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ನವನಗರ, ಹುಬ್ಬಳ್ಳಿ- 580025.

    ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾಲಯದ ಜಾಲತಾಣವನ್ನು ವೀಕ್ಷಿಸಬಹುದು.

  • SAI : 21 ಯಂಗ್ ಪ್ರೊಫೆಷನಲ್ ಹುದ್ದೆಗೆ ನೇಮಕ

    SAI : 21 ಯಂಗ್ ಪ್ರೊಫೆಷನಲ್ ಹುದ್ದೆಗೆ ನೇಮಕ

    ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ( ಎಸ್ಎಐ)ದಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 16,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 06-04-2021( 5.00pm)
    ಆನ್ಲೈನ್ ಅರ್ಜಿ ಸಲ್ಲಿಸಲು ಕೊ‌ನೆಯ ದಿನಾಂಕ 16-04-2021 (5.00 pm ವರೆಗೆ)

    ಹುದ್ದೆ : ಯಂಗ್ ಪ್ರೊಫೆಷನಲ್ (ಎಆರ್ ಎಂ) (ಅಥ್ಲೇಟ್ ರಿಲೇಷನ್ ಮ್ಯಾನೇಜರ್ ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಈ ಮೇಲ್ಕಂಡ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಒಟ್ಟು ಹುದ್ದೆ : 21

    ವಿದ್ಯಾರ್ಹತೆ : ಅಭ್ಯರ್ಥಿಗಳು ಪದವಿ, ಎಂಬಿಎ/ಪಿಜಿಡಿಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

    ವಯೋಮಿತಿ : ಗರಿಷ್ಠ 35 ವರ್ಷದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವೇತನ : ಯಂಗ್ ಪ್ರೊಫೆಷನಲ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40,000 ರಿಂದ ರೂ.60,000/- ವರೆಗೆ ವೇತನವಿರುತ್ತದೆ.

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 16, 2011 ಸಂಜೆ 5 ರೊಳಗಾಗಿ ಸಲ್ಲಿಸಬೇಕು.

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

    ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

    ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹೊಸಕೋಟೆ, ನೆಲಮಂಗಲ ಹಾಗೂ ದೇವನಹಳ್ಳಿ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಮಾಡಲಾಗುತ್ತಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸವಿರುವ ಆಸಕ್ತರು ಏಪ್ರಿಲ್ 23 ರೊಳಗೆ ಅರ್ಜಿ ಸಲ್ಲಿಸಬಹುದು.

    ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಗೌರವಧನ – ಮಾಸಿಕ ರೂ.6000/- ವೇತನವಿರುತ್ತದೆ.

    ಶೇ.40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

    ಎಸ್ ಎಸ್ ಎಲ್ ಸಿ ಉತ್ತೀರ್ಣರಾದವರಿಗೆ ಹೆಚ್ಚು ಆದ್ಯತೆ. ಒಂದು ವೇಳೆ ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಸಿಗದಿದ್ದರೆ ಅನುತ್ತೀರ್ಣರಾದವರನ್ನು ಪರಿಗಣಿಸಲಾಗುವುದು.

    ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 45 ವಯೋಮಿತಿ ಹೊಂದಿರಬೇಕು. ಅಭ್ಯರ್ಥಿಗಳು ಆರೋಗ್ಯವಂತರಾಗಿರಬೇಕು. ಗ್ರಾಮ ಪಂಚಾಯತಿ/ ವ್ಯಾಪ್ತಿಯಲ್ಲಿ ಮಾಹಿತಿ / ಸೌಲಭ್ಯ ಕಲ್ಪಿಸುವ ಸಾಮರ್ಥ್ಯ ಹೊಂದಿರಬೇಕು. ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್ ಪರಿಶೀಲನೆಗೆ ಒಳಪಟ್ಟಿರುತ್ತದೆ.

    ಪ್ರವಾಸ, ಲೇಖನ, ಸಾಮಾಗ್ರಿ ಮತ್ತು ಆಡಳಿತ ವೆಚ್ಚಕ್ಕಾಗಿ ರೂ.150/- ನೀಡಲಾಗುವುದು.

    ದೇವನಹಳ್ಳಿ ತಾಲೂಕಿನ ಕೊಯಿರಾ, ಮಂಡಿಬೆಲೆ, ಜಾಲಿಗೆ, ಕೋರಮಂಗಲ ನೆಲಮಂಗಲ ತಾಲೂಕಿನ ಅರೆಬೊಮ್ಮನಹಳ್ಳಿ, ದೊಡ್ಡಬೆಲೆ, ಅಗಲುಕುಪ್ಪೆ, ಹೊಸಕೋಟೆ ತಾಲೂಕಿನ ದೇವನಗುಂದಿ, ಅನುಗೊಂಡನಹಳ್ಳಿ ಗ್ರಾಮ‌ ಪಂಚಾಯತಿಯಲ್ಲಿ ನೇಮಕಾತಿ ನಡೆಯಲಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ 3, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ : 080-29787442

  • ಮೈಸೂರು ಜಿಲ್ಲಾ ಪಂಚಾಯತ್ : “ಗ್ರಾಮ ಕಾಯಕ ಮಿತ್ರ” ಹುದ್ದೆಗೆ ಅರ್ಜಿ ಆಹ್ವಾನ

    ಮೈಸೂರು ಜಿಲ್ಲಾ ಪಂಚಾಯತ್ : “ಗ್ರಾಮ ಕಾಯಕ ಮಿತ್ರ” ಹುದ್ದೆಗೆ ಅರ್ಜಿ ಆಹ್ವಾನ

    ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೈಸೂರು ಜಿಲ್ಲೆಗೆ ಒಟ್ಟು 57 ಗ್ರಾಮ ಪಂಚಾಯತಿಗಳಿಗೆ ” ಗ್ರಾಮ ಕಾಯಕ ಮಿತ್ರ” ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಗೆ ಅರ್ಜಿಗಳನ್ನು ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ 08 ತಾಲ್ಲೂಕು ವ್ಯಾಪ್ತಿಯಲ್ಲಿರುವ ಆಯಾ ಗ್ರಾಮ ಪಂಚಾಯಿತಿಗಳನ್ನು ಸಂಪರ್ಕಿಸುವುದು.

    ಅರ್ಹತೆಗಳು : 1. “ಗ್ರಾಮ ಕಾಯಕ ಮಿತ್ರ” ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

    1. ಕನಿಷ್ಠ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
    2. ಅಭ್ಯರ್ಥಿಯು ದಿ.01.01.2021 ಕ್ಕೆ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಗ್ರಾ.ಪಂ.ಯಲ್ಲಿ ನರೇಗಾ ಯೋಜನೆಯಡಿ ಕ್ರಿಯಾ ಶೀಲ ಜಾಬ್‌ ಕಾರ್ಡ್ ಹೊಂದಿರಬೇಕು.
    3. ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ ( 2018-19, 2019-20, 2020-21) ಕನಿಷ್ಠ ಎರಡು ವರ್ಷಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಬೇಕು.
    4. ವಯೋಮಿತಿ ದಿ. 01.01.2021 ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಬಾರದು.
    5. ಓದು ಮತ್ತು ಬರಹ ಚೆನ್ನಾಗಿ ತಿಳಿದಿರಬೇಕು.
    6. ಹುದ್ದೆಗೆ ಅರ್ಜಿ ಸಲ್ಲಿಸುವವರು ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
    7. ಅಭ್ಯರ್ಥಿಯು ಪರಿಣಾಮಕಾತಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣಗಳನ್ನುಹೊಂದಿರಬೇಕು.
    8. ಗ್ರಾಮ ರೋಜ್‌ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು ಇದಕ್ಕೆ ಗ್ರಾಮ ರೋಜ್‌ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

    ಗೌರವಧನ : ಗ್ರಾಮ ಕಾಯಕ ಮಿತ್ರರಿಗೆ ಮಾಸಿಕ ರೂ. 6೦೦೦/- ನಿಗದಿತ ಗೌರವಧನ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-04-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್ ಮಾಡಿ

  • BECIL : 1679 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    BECIL : 1679 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್( BECIL)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 2021, ಎಪ್ರಿಲ್, 20 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಹುದ್ದೆ : ಸ್ಕಿಲ್ಡ್/ಸೆಮಿ ಸ್ಕಿಲ್ಡ್‌/ ಅನ್‌ಸ್ಕಿಲ್ಡ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01-04-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-04-2021

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.6000/- ರಿಂದ ರೂ.15,000/- ವೇತನವಿರುತ್ತದೆ.

    ಒಟ್ಟು ಹುದ್ದೆ : 1679

    ಹುದ್ದೆ ಸ್ಥಳ : ನೊಯಿಡಾ-ಉತ್ತರಪ್ರದೇಶ

    ವಿದ್ಯಾಭ್ಯಾಸ : ಅಭ್ಯರ್ಥಿಗಳು ಸಂಸ್ಥೆಯ ನೇಮಕಾತಿ ನಿಯಮಾನುಸಾರ 8th, 10th, 12th, ಐಟಿಐ ಯನ್ನು ಅಂಗೀಕೃತ ಬೋರ್ಡ್‌/ ಯುನಿವರ್ಸಿಟಿಯಿಂದ ಪಡೆದುಕೊಂಡಿರಬೇಕು.

    ವಯೋಮಿತಿ : ಸಂಸ್ಥೆಯ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ಅರ್ಜಿ ಶುಲ್ಕ : ಜನರಲ್/ ಒಬಿಡಿ ಅಭ್ಯರ್ಥಿಗಳು ರೂ.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ.
    ಅರ್ಜಿ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಾಗುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ