Author: Mallika

  • NTRO : 45 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

    NTRO : 45 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ( ಎನ್‌ಟಿಆರ್‌ಓ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಎಪ್ರಿಲ್ 12, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

    ಹುದ್ದೆ : ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ಯು ತಾಂತ್ರಿಕ ಸಹಾಯಕ (ಟೆಕ್ನಿಷಿಯನ್) ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ ಸಂಖ್ಯೆ : 45

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 27, ಮಾರ್ಚ್ 2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12, ಎಪ್ರಿಲ್ 2021

    ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ನೇ ತರಗತಿ, ಐಟಿಐ, ಡಿಪ್ಲೋಮಾ. ಪದವಿ ಹಾಗೂ ತತ್ಸಮಾನ ಪದವಿ ಪಡೆದಿರಬೇಕು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ವಯೋಮಿತಿ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷ ಮೀರಿರಬಾರದು.

    ಆಯ್ಕೆ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ ಫಲಿತಾಂಶದ ಮೇಲೆ ನೇಮಕ ಮಾಡಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

  • MHA : 39 ಹುದ್ದೆಗಳಿಗೆ ಅರ್ಜಿ ಆಹ್ವಾನ

    MHA : 39 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಗೃಹಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಕಸ್ತರು ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : 39 ಗ್ರೂಪ್‌ ಎ, ಬಿ ಮತ್ತು ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 30, 2021

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಒಬಿಸಿ/ಅಂಗವಿಕಲ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಅಥವಾ ಅದಕ್ಕೆ ಸಮಾನದ ವಿದ್ಯಾರ್ಹತೆಯನ್ನು ಪಡೆದಿರಬೇಕು.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

    ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ ಎಪ್ರಿಲ್ 30, 2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • DHFWS ಉಡುಪಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    DHFWS ಉಡುಪಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಜಿಲ್ಲಾ ಆರೋಗ್ಯ ಮತ್ತು ಕುಟುಂಟ ಕಲ್ಯಾಣ ಸಂಘ ಉಡುಪಿ (ಡಿಎಚ್‌ಎಫ್‌ಎಸ್‌) 2020-21 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಈ ಕೆಳಗೆ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

    ಅರ್ಹ ಅಭ್ಯರ್ಥಿಗಳಿಂದ ದಿನಾಂಕ 07-04-2021 ರಂದು 10.30 am ನಿಂದ 01.30 pm ವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಕಛೇರಿ, ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಯ ವಿವರ : ಅನೆಸ್ಥಿಟಿಸ್ಟ್‌ -01
    ಗೈನಕಾಲಜಿ ಮತ್ತು ಒಬಸ್ಟೆಟ್ರಿಕ್ಸ್‌-01
    ಪಂಚಕರ್ಮ ತಜ್ಞ ವೈದ್ಯರು-01
    ಡೆಂಟಲ್ ಹೈಜೆನಿಸ್ಟ್‌-01
    ಮೆಡಿಕಲ್ ಆಫೀಸರ್-04
    ಎಎನ್‌ಎಂ-05

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಜಾತಿ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸುವುದು.
    ರೂ.15,000/- ಕ್ಕಿಂತ ಕಡಿಮೆ ವೇತನವಿರುವ ಹುದ್ದೆಗೆ ಪಿ.ಎಫ್.ಸೌಲಭ್ಯ ನೀಡಲಾಗುವುದು.
    ವೈದ್ಯಾಧಿಕಾರಿ – 50 ವರ್ಷದೊಳಗೆ ಪ್ರಥಮ ಆದ್ಯತೆ. 50 ರಿಂದ 65 ವರ್ಷದೊಳಗೆ ದ್ವಿತೀಯ ಆದ್ಯತೆ. 65 ರಿಂದ 70 ವರ್ಷದೊಳಗೆ ತೃತೀಯ ಆದ್ಯತೆ ನೀಡಲಾಗುವುದು.
    ನೇಮಕಾತಿಯು ಜಿಲ್ಲಾ ಆರೋಗ್ಯ ಸಂಘ ಉಡುಪಿ ಇದರ ತೀರ್ಮಾನವೇ ಅಂತಿಮವಾಗಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • BHEL : 389 ಅಪ್ರೆಂಟಿಸ್ ಹುದ್ದೆಗಳ ನೇಮಕ

    BHEL : 389 ಅಪ್ರೆಂಟಿಸ್ ಹುದ್ದೆಗಳ ನೇಮಕ

    ಭಾರತ್ ಹೆವಿ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌(ಬಿಹೆಚ್‌ಇಎಲ್‌) ತ್ರಿಚಿ, ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು , ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ 14-04-2021 ರೊಳಗೆ ಸಲ್ಲಿಸಬಹುದು. ಹುದ್ದೆಗಳ ವಿವರ, ಅರ್ಜಿಶುಲ್ಕ, ವಿದ್ಯಾರ್ಹತೆ ಇನ್ನಿತರ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

    ಹುದ್ದೆಗಳ ವಿವರ : ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆ- 66
    ಟೆಕ್ನಿಷಿಯನ್ ಅಪ್ರೆಂಟಿಸ್ – 70
    ಟ್ರೇಡ್ ಅಪ್ರೆಂಟಿಸ್ – 253

    ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 01-04-2021
    ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ :14-04-2021
    ಶಾರ್ಟ್‌ಲಿಸ್ಟ್‌ ಆದ ಅಭ್ಯರ್ಥಿಗಳ ಲಿಸ್ಟ್‌ ಪ್ರಕಟಣೆ ದಿನಾಂಕ :16-04-2021
    ದಾಖಲೆಗಳ ಪರಿಶೀಲನೆ ನಿರೀಕ್ಷಿತ ದಿನಾಂಕ :21-04-2021
    ಕರ್ತವ್ಯಕ್ಕೆ ಹಾಜರಾಗುವ ದಿನಾಂಕ : ಮುಂದಿನ ದಿನಗಳಲ್ಲಿ ತಿಳಿಸಲಾಗುವುದು

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ಕನಿಷ್ಠ ವರ್ಷ, ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

    ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

    ವಿದ್ಯಾರ್ಹತೆ : ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಡಿಪ್ಲೋಮಾ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ ತೇರ್ಗಡೆಹೊಂದಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • AIISH ಮೈಸೂರು:  ವಿವಿಧ ಹುದ್ದೆ

    AIISH ಮೈಸೂರು: ವಿವಿಧ ಹುದ್ದೆ

    ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-04-2021

    ಹುದ್ದೆ : ಕ್ಲಿನಿಕಲ್ ಸೈಕಾಲಜಿ ಉಪನ್ಯಾಸಕರು- 02
    ಸೆಕ್ಯುರಿಟಿ ಆಫೀಸರ್- 01
    ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥೋಲಾಜಿಸ್ಟ್ ಗ್ರೇಡ್ 2 – 04
    ಆಡಿಯೋಲಾಜಿಸ್ಟ್ – 04

    ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಎಂಎ/ಎಂ.ಎಸ್ಸಿ/ಪದವಿ/ಬಿಎಸ್ಸಿ ಪದವಿ ಯನ್ನು ಪಡೆದಿರಬೇಕು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ. 100 ನ್ನು “Director,AIISH Mysore ” ಗೆ ಡಿ.ಡಿ.ತೆಗೆಯಬೇಕು.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ವಯೋಮಿತಿ : ಕ್ಲಿನಿಕಲ್ ಸೈಕಾಲಜಿ ಉಪನ್ಯಾಸಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ,
    ಸೆಕ್ಯುರಿಟಿ ಆಫೀಸರ್ ಹುದ್ದೆಗೆ ಗರಿಷ್ಠ 65 ವರ್ಷ
    ಸ್ಪೀಚ್ ಲ್ಯಾಂಗ್ವೇಜ್ ‌ಪ್ಯಾಥೋಲಾಜಿಸ್ಟ್ ಗ್ರೇಡ್ ಹಾಗೂ
    ಆಡಿಯೋಲಾಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವಯೋಮಿತಿ ಹೊಂದಿರಬೇಕು.

    ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ‌ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ‌ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 16, ಎಪ್ರಿಲ್ ರೊಳಗಾಗಿ ಸಲ್ಲಿಸಬೇಕು.

    ವಿಳಾಸ : Chief Administrative Officer, All India Institute of Speech and Hearing, Manasagangotri, Mysore – 570006

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • NRTI ನಲ್ಲಿ ಉದ್ಯೋಗವಕಾಶ

    NRTI ನಲ್ಲಿ ಉದ್ಯೋಗವಕಾಶ

    ಭಾರತ ಸರಕಾರದ ರೈಲ್ವೇ ಸಚಿವಾಲಯದ ಆಡಳಿತ ನಿಯಂತ್ರಣದಡಿ ನ್ಯಾಷನಲ್ ರೈಲ್ ಮತ್ತು ಟ್ರಾನ್ಸ್‌ಪೋಟೇಷನ್ ಇನ್ಸ್‌ಸ್ಟಿಟ್ಯೂಟ್ (ಎನ್‌ಆರ್‌ಟಿಐ), ವಡೋದರಾ ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಇತ್ತೀಚೆಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈಗ ಪ್ರಸ್ತುತ ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿದ ಅಂತಿಮ ದಿನಾಂಕವನ್ನು ವಿಸ್ತರಿಸಿ ಪ್ರಕಟಣೆಯನ್ನು ಹೊರಡಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಉಪಕುಲಪತಿ
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ-30-04-2021

    ಈ ಮೇಲಿನ ಹುದ್ದೆಯ ವಯೋಮಿತಿ, ಅವಶ್ಯಕ ವಿದ್ಯಾರ್ಹತೆ ಇತ್ಯಾದಿ ವಿವರಗಳನ್ನು ಈ ಕೆಳಗಿನ ಎನ್‌ಆರ್‌ಟಿಐ ವೆಬ್‌ಸೈಟ್ ನಲ್ಲಿ ಲಭ್ಯವಿದೆ.

    ವೆಬ್‌ಸೈಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

    ಒಂದು ವೇಳೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಾಧ್ಯವಾಗದಿದ್ದಲ್ಲಿ ಭರ್ತಿ ಮಾಡಿದ ಅರ್ಜಿಯ ಕರಡು ಪ್ರತಿಯನ್ನು ನೊಂದಾಯಿತ ಅಂಚೆ/ಸ್ಪೀಡ್ ಸಹಾಯದಿಂದ , ದಿ ಡೆಪ್ಯೂಟಿ ಡೈರೆಕ್ಟರ್( ಟ್ರೈನಿಂಗ್) ರೈಲ್ವೇ ಬೋರ್ಡ್‌, ಮಿನಿಸ್ಟ್ರಿ ಆಫ್‌ ರೈಲ್ವೇಸ್, ರೂಂ ನಂ-359, ರೈಲ್ ಭವನ, ನವದೆಹಲಿ- 110001 ಇಲ್ಲಿಗೆ ಸಲ್ಲಿಸಬೇಕು.

    ಆನ್‌ಲೈನ್ ಅರ್ಜಿ ಸಲ್ಲಿಸಲು ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ