Author: Mallika

  • NBCC ನಲ್ಲಿ 120 ಹುದ್ದೆ: ಸಂಪೂರ್ಣ ವಿವರ ಇಲ್ಲಿದೆ

    NBCC ನಲ್ಲಿ 120 ಹುದ್ದೆ: ಸಂಪೂರ್ಣ ವಿವರ ಇಲ್ಲಿದೆ

    ನ್ಯಾಷನಲ್ ಬಿಲ್ಡಿಂಗ್ಸ್ ಕನ್ಸ್ಟ್ರಕ್ಷನ್ ಕೋರ್ಪರೇಶನ್ ಲಿಮಿಟೆಡ್ (ಎನ್ ಬಿಸಿಸಿ)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 14, ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 25-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-04-2021
    ಅರ್ಜಿ ಶುಲ್ಕ : ಆನ್ಲೈನ್ ಮೂಲಕ.

    ಹುದ್ದೆ: ಸೈಟ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ: 120

    ಹುದ್ದೆ ಸ್ಥಳ : ಆಲ್ ಇಂಡಿಯಾ

    ವೇತನ : ಈ‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.31,000/- ವೇತನ ನಿಗದಿಪಡಿಸಲಾಗಿದೆ.

    ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು ಜನರಲ್/ ಒಬಿಸಿ ಅಭ್ಯರ್ಥಿಗಳಿಗೆ ರೂ. 500/- ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪಿಡ್ಬ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಬೇಸ್ಡ್ ಟೆಸ್ಟ್ (ಸಿಬಿಟಿ) ಮೂಲಕ ಆಯ್ಕೆ ಮಾಡಲಾಗುತ್ತದೆ.

    ವಿದ್ಯಾರ್ಹತೆ: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ಯುನಿವರ್ಸಿಟಿಯಿಂದ ಡಿಪ್ಲೋಮಾ ಪದವಿಯನ್ನು ಹೊಂದಿರಬೇಕು.

    ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 35 ವರ್ಷ ಮೀರಿರಬಾರದು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

    ಆನ್ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ

  • SAIL ನಲ್ಲಿ ಶಿಕ್ಷಕರಿಗೆ ಉದ್ಯೋಗವಕಾಶ

    SAIL ನಲ್ಲಿ ಶಿಕ್ಷಕರಿಗೆ ಉದ್ಯೋಗವಕಾಶ

    ಸ್ಟೀಲ್ ಅಥಾರಟಿ ಆಫ್ ಇಂಡಿಯಾ (ಎಸ್ ಎಐಎಲ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಸಲ್ಲಿಸಲು ಎಪ್ರಿಲ್ 03 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಎಪ್ರಿಲ್ 03, ಸಂಜೆ 5.30 ರೊಳಗೆ

    ಹುದ್ದೆ: ನಿವೃತ್ತ / ಅನುಭವಿ ಶಿಕ್ಷಕ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

    ವಯೋಮಿತಿ: ಮಾರ್ಚ್ 31,2021 ರ ಅನ್ವಯ ಗರಿಷ್ಠ 65 ವರ್ಷ ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಬಹುದು.

    ವಿದ್ಯಾರ್ಹತೆ: ಮಾನ್ಯತೆ ಪಡೆದ ಯುನಿವರ್ಸಿಟಿ/ಬೋರ್ಡ್ ನಿಂದ ಬಿ.ಎಡ್ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಪಡೆದಿರಬೇಕು.

    ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ‌ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಎಪ್ರಿಲ್ 3, 2021 ಸಂಜೆ 5.30 ರೊಳಗಾಗಿ ಈ ಕೆಳಗೆ ನೀಡಲಾಗಿರುವ ಇ- ಮೇಲ್ ವಿಳಾಸಕ್ಕೆ ಮೇಲ್ ಮಾಡಬೇಕು.

    ಇ-ಮೇಲ್ ವಿವರ:
    [email protected]

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

    ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

    ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 06 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 22-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-04-2021
    ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ರೂ.100/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

    ಹುದ್ದೆ : ಟೆಕ್ನಿಶಿಯನ್, ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ: 13

    ಹುದ್ದೆ ಸ್ಥಳ : ಮಡಿಕೇರಿ- ಕರ್ನಾಟಕ

    ಹುದ್ದೆಗಳ ವಿವರ : ಡಿಸ್ಟ್ರಿಕ್ಟ್‌ ಐಇಸಿ ಕೋರ್ಡಿನೇಟರ್-01
    ತಾಲೂಕು ಐಇಸಿ ಕೋರ್ಡಿನೇಟರ್ಸ್ – 02
    ಟೆಕ್ನಿಕಲ್ ಅಸಿಸ್ಟೆಂಟ್ ( ಅರಣ್ಯ) – 01
    ಟೆಕ್ನಿಕಲ್ ಅಸಿಸ್ಟೆಂಟ್ ( ಹೋರಿಕಲ್ಚರ್)-02
    ಬೇರ್ ಫೂಟ್ ಟೆಕ್ನಿಶಿಯನ್ (ಬಿಆರ್ ಟಿ)-07

    ವಿದ್ಯಾರ್ಹತೆ : ಡಿಸ್ಟ್ರಿಕ್ಟ್‌ ಐಇಸಿ ಕೋರ್ಡಿನೇಟರ್ ಮತ್ತು ತಾಲೂಕು ಐಇಸಿ ಕೋರ್ಡಿನೇಟರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೋಮಾ, ಪೋಸ್ಟ್ ಗ್ರಾಜ್ಯುಯೇಶನ್ ಮಾಡಿರಬೇಕು.
    ಟೆಕ್ನಿಕಲ್ ಅಸಿಸ್ಟೆಂಟ್ ( ಅರಣ್ಯ) ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ( ಹೋರಿಕಲ್ಚರ್) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
    ಬೇರ್ ಫೂಟ್ ಟೆಕ್ನಿಶಿಯನ್ (ಬಿಆರ್ ಟಿ) ಹುದ್ದೆಗೆ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು.

    ವಯೋಮಿತಿ: ಕೊಡಗು ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳು ವಯೋಮಿತಿ ಹೊಂದಿರಬೇಕು.

    ವೇತನ: ಡಿಸ್ಟ್ರಿಕ್ಟ್‌ ಐಇಸಿ ಕೋರ್ಡಿನೇಟರ್ ಹುದ್ದೆಗೆ ರೂ. 23,000/-, ತಾಲೂಕು ಐಇಸಿ ಕೋರ್ಡಿನೇಟರ್ಸ್ ಹುದ್ದೆಗೆ ರೂ.18,000/-, ಟೆಕ್ನಿಕಲ್ ಅಸಿಸ್ಟೆಂಟ್ ( ಅರಣ್ಯ) ಮತ್ತು
    ಟೆಕ್ನಿಕಲ್ ಅಸಿಸ್ಟೆಂಟ್ ( ಹೋರಿಕಲ್ಚರ್) ಹುದ್ದೆಗಳಿಗೆ ರೂ. 24,000/- ಬೇರ್ ಫೂಟ್ ಟೆಕ್ನಿಶಿಯನ್ (ಬಿಆರ್ ಟಿ) ರೂ.12,000/- ಮಾಸಿಕ ವೇತನ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 06-04-2021 ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.

    ವಿಳಾಸ:
    Chief Executive Officer, Office of Kodagu Zilla Panchayat, Madikeri, Karnataka.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

  • ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ(ಎಂಪ್ರಿ)ಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ(ಎಂಪ್ರಿ)ಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಪ್ರೊಫೆಷನಲ್ ಸೆಕ್ಯುರಿಟಿ ಸರ್ವಿಸಸ್‌ನಿಂದ ಎಂಪ್ರಿ ಸಂಸ್ಥೆ, ಬೆಂಗಳೂರು ( ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ) ಸಂಶೋಧಣಾ ಅಧ್ಯಯನಗಳಿಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 30-03-2021

    ಹುದ್ದೆಗಳ ವಿವರ: ರಿಸರ್ಚ್ ಅಸಿಸ್ಟೆಂಟ್, ಲ್ಯಾಬ್ ಅಟೆಂಡರ್, ರಿಸರ್ಚ್ ಅಸೋಸಿಯೇಟ್, ಫಂಕ್ಷನಲ್ ಏರಿಯಾ ಅಸೋಸಿಯೇಟ್, ಫಂಕ್ಷನಲ್ ಏರಿಯಾ ಎಕ್ಸ್‌ಪರ್ಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ಅಧಿಕೃತ ವೆಬ್‌ಸೈಟ್ ಲಿಂಕ್‌ ಗಾಗಿ ಇಲ್ಲಿ ಕ್ಲಿಕ್ ಮಾಡಿ

  • ಹುಬ್ಬಳ್ಳಿ ಧಾರವಾಡ ಸ್ಮಾರ್ಟ್‌ ಸಿಟಿ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಹುಬ್ಬಳ್ಳಿ ಧಾರವಾಡ ಸ್ಮಾರ್ಟ್‌ ಸಿಟಿ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಹುಬ್ಬಳ್ಳಿ ಧಾರವಾಡ ಸಿಟಿ ಕಂಪನಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಒಂದು ವರ್ಷದ ಅವಧಿಗೆ ಜನರಲ್ ಮ್ಯಾನೇಜರ್ ( ಟೆಕ್ನಿಕಲ್) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ.

    ಹುದ್ದೆ : ಜನರಲ್ ಮ್ಯಾನೇಜರ್ (ಟೆಕ್ನಿಕಲ್)

    ಹುದ್ದೆ ಸಂಖ್ಯೆ : 01

    ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಚುಲರ್/ಮಾಸ್ಟರ್ ಸಿವಿಲ್ ಇಂಜಿನಿಯರಿಂಗ್ ನ್ನು ಪಡೆದಿರಬೇಕು.
    ಈ ಹುದ್ದೆಯಲ್ಲಿ ಅಭ್ಯರ್ಥಿಗಳಿಗೆ 20 ವರ್ಷದ ಅನುಭವ ಇರಬೇಕು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-04-2021

    ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಜೊತೆಗೆ ಅಗತ್ಯ ದಾಖಲೆಗಳನ್ನು ಈ ಕೆಳಗಿನ ಇ-ಮೇಲ್ ಗೆ ಕಳುಹಿಸಬೇಕು.
    ಇ-ಮೇಲ್ : [email protected]

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

    ಅಧಿಕೃತ ವೆಬ್‌ಸೈಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

  • ಪ್ರಧಾನಮಂತ್ರಿ ಮಾತೃವಂದನ ಯೋಜನೆಯಡಿ ಮಂಗಳೂರಿನಲ್ಲಿ ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

    ಪ್ರಧಾನಮಂತ್ರಿ ಮಾತೃವಂದನ ಯೋಜನೆಯಡಿ ಮಂಗಳೂರಿನಲ್ಲಿ ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

    ಪ್ರಧಾನಮಂತ್ರಿ ಮಾತೃವಂದನ ಯೋಜನೆಯ ಜಿಲ್ಲಾ ಕೋಶದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 31, 2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ಟಾರ- ಮಂಗಳೂರು ಇಲ್ಲಿ ಸಂಪರ್ಕಿಸಬಹುದು.

    ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ಮೇಲಿನ ವಿಳಾಸದಲ್ಲಿ ಪಡೆಯಬಹುದು.