ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ/ಹೊಸಕೋಟೆ/ದೊಡ್ಡಬಳ್ಳಾಫುರ/ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗಳ ಕೋವಿಡ್ -19 ಐಸೋಲೇಶನ್ ವಾರ್ಡ್‌ಗಳಲ್ಲಿ ಕರ್ತವ್ಯ ನಿರ್ವಹಿಸಲು ಈ ಕೆಳಕಂಡ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಸೆಪ್ಪೆಂಬರ್ 2021 ರವರೆಗೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನವನ್ನು ದಿನಾಂಕ 22/03/2021 ರಿಂದ (3 ದಿನಗಳು ಮಾತ್ರ) ಹಮ್ಮಿಕೊಳ್ಳಲಾಗಿದ್ದು ಆಸಕ್ತಿವುಳ್ಳ ಅಭ್ಯರ್ಥಿಗಳು ಮೂಲ ದಾಖಲಾತಿ ಮತ್ತು ಜೆರಾಕ್ಸ್ ಪ್ರತಿಗಳೊಂದಿಗೆ ಬೆಳಗ್ಗೆ 11.೦೦ ಗಂಟೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಡಳಿತ ಭವನದ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಕೊಠಡಿ ಸಂಖ್ಯೆ -207, 2ನೇ ಮಹಡಿ, ಬೀರಸಂದ್ರ ಗ್ರಾಮ, ವಿಶ್ವನಾಥಪುರ ಅಂಚೆ ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಇಲ್ಲಿ ಸಂಪರ್ಕಿಸುವುದು.
Author: Mallika
-

ನಮ್ಮ ಮೆಟ್ರೋ ಉದ್ಯೋಗವಕಾಶ: ಈ ಕೂಡಲೇ ಅರ್ಜಿ ಸಲ್ಲಿಸಿ
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(ಬಿಎಂಆರ್‌ಸಿಎಲ್) ವು ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಹುದ್ದೆ ವಿವರ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ಕೆಳಗಿನಂತಿದೆ.
ಹುದ್ದೆ : ನಮ್ಮ ಮೆಟ್ರೋನಲ್ಲಿ ಪ್ರಧಾನ ವ್ಯವಸ್ಥಾಪಕರು (ಎಫ್&ಎ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನುನ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-04-2021ಸಂಜೆ 4.00 ಗಂಟೆಯವರೆಗೆ
ಹುದ್ದೆ ಸಂಖ್ಯೆ : 01
ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 55 ವಯಸ್ಸು ಮೀರಿರಬಾರದು.
ವಿದ್ಯಾಭ್ಯಾಸ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿಯಿಂದ ಗ್ರಾಜ್ಯುಯೇಟ್ ಇನ್ ಕಾಮರ್ಸ್ ನ್ನು ಪಡೆದಿರಬೇಕು. ಪ್ರೊಫೆಷನಲ್ ಕ್ವಾಲಿಫಿಕೇಶನ್ ಗಳಾದ ಚಾರ್ಟೆಡ್ ಅಕೌಂಟೆಂಟ್(ಸಿಎ)/ ಕಾಸ್ಟ್ ಅಕೌಂಟೆಂಟ್(ಐಸಿಡ್ಬ್ಯುಎ)/ಎಂಬಿಎ(ಪೂರ್ಣ ಅವಧಿ) ಯಲ್ಲಿ ಫೈನಾನ್ಸ್ ಹೊಂದಿರಬೇಕು.
ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1,40,000/- ಮಾಸಿಕ ವೇತನ ನಿಗದಿಯಾಗಿರುತ್ತದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಎಪ್ರಿಲ್ 20-04-2021 ಸಂಜೆ 4.00 ಗಂಟೆಯೊಳಗೆ ಸಲ್ಲಿಸಬೇಕು.
ವಿಳಾಸ ಈ ಕೆಳಗಿನಂತಿದೆ:
General Manager (HR&T),Bangalore Metro Rail Corportion Limited,3rd Floor, BMTC Complex,K.H. Road, Shanthinagar, Bangalore-560027ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಆನ್ಲೈನ್ ಅಪ್ಲಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

-

ಬಾಲಕಾರ್ಮಿಕ ಯೋಜನಾ ಸೊಸೈಟಿ ಯಲ್ಲಿ ಹುದ್ದೆ
ಧಾರವಾಡ ಜಿಲ್ಲೆ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 20 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಹುದ್ದೆ: ಬಾಲ ಕಾರ್ಮಿಕ ಯೋಜನಾ ಸೊಸೈಟಿಯು ಯೋಜನಾ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 20,2021
ವೇತನ: ಗೌರವ ಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಎಂ.ಎಸ್.ಡಬ್ಲ್ಯೂ, ಅಭಿವೃದ್ಧಿ ಅಧ್ಯಯನ, ಲಾಭರಹಿತ ಸಂಸ್ಥೆಗಳ(ಎನ್ ಜಿಒ) ಹಾಗೂ ನಿರ್ವಹಣಾ ಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಅನುಭವ : ಹಲವು ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ 5 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದು, ಬಾಲಕಾರ್ಮಿಕ ನಿರ್ಮೂಲನೆ ಮಾಡುವಲ್ಲಿ ಅನುಭವ ಇರುವವರಿಗೆ ಆದ್ಯತೆ.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ಒಳಗಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಮತ್ತು ಇಂಗ್ಲೀಷ್ ಮಾತನಾಡಲು ಹಾಗೂ ಬರೆಯುವ ಕೌಶಲ್ಯ ತಿಳಿದಿರಬೇಕು. ಕಂಪ್ಯೂಟರ್ ಜ್ಞಾನ, ಕಚೇರಿ ಲೆಕ್ಕ ಪತ್ರಗಳ ನಿರ್ವಹಣೆ ತಿಳಿದಿರಬೇಕು.
ಯಾವುದೇ ಸರಕಾರಿ ಕೆಲಸದಿಂದ ವಜಾಗೊಂಡಿರುವವರು, ನಿವೃತ್ತಿ ಹೊಂದಿರುವ, ಸರ್ಕಾರಿ ಕೆಲಸ ಮಾಡುತ್ತಿರುವ ಅಭ್ಯರ್ಥಿಗಳ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿಗಳಿಗಾಗಿ ಯೋಜನಾ ನಿರ್ದೇಶಕರು, ರಾಷ್ಟ್ರಿಯ ಬಾಲ ಕಾರ್ಮಿಕ ಯೋಜನಾ ಸಂಘ, ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದು.
ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಎಪ್ರಿಲ್ 20, 2021 ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು.
ವಿಳಾಸ:
ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ, ಧಾರವಾಡ -

ಕಲಬುರಗಿ ಪದವಿಪೂರ್ವ ಕಾಲೇಜಿನಲ್ಲಿ ಹುದ್ದೆ: ಮಾರ್ಚ್ 25 ಕಡೇ ದಿನಾಂಕ
ಕಲಬುರಗಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ: ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ, ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ವಿದ್ಯಾರ್ಹತೆ: ಎಂಎ, ಎಂಎಸ್ಸಿ,ಬಿ.ಇಡಿ,ಎನ್ ಇಟಿ,ಎಸ್ ಎಲ್ ಇಟಿ ಅರ್ಹತೆ ಉಳ್ಳವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಸಂಬಂಧ ಪಟ್ಟ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಮಾರ್ಚ್ 25, 2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಲಬುರಗಿ ಮಿನಿ ವಿಧಾನಸೌಧದ ಆವರಣದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸ ಬಹುದು.
-

ಬ್ಯಾಂಕ್ ಆಫ್ ಮಹಾರಾಷ್ಟ್ರ : 150 ಹುದ್ದೆಗಳು
ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 06 ಎಪ್ರಿಲ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 22-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-04-2021
ಅರ್ಜಿ ಶುಲ್ಕ: ಆನ್ಲೈನ್ ಮೂಲಕಬ್ಯಾಂಕ್ ಆಫ್ ಮಹಾರಾಷ್ಟ್ರನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.
ಹುದ್ದೆಗಳ ವಿವರ: ಬ್ಯಾಂಕ್ ಆಫ್ ಮಹಾರಾಷ್ಟ್ರ ಜೆನರಲಿಸ್ಟ್ ಆಫೀಸರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ.
ಹುದ್ದೆ ಸಂಖ್ಯೆ: 150
ಹುದ್ದೆ ಸ್ಥಳ: ಆಲ್ ಒವರ್ ಇಂಡಿಯಾ
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು ಯುಆರ್/ಇಡ್ಬ್ಯುಎಸ್/ಒಬಿಸಿ ಅಭ್ಯರ್ಥಿಗಳಿಗೆ ರೂ.1180 ರೂ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.118/-,ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ನ್ನು ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 25 ಹಾಗೂ ಗರಿಷ್ಠ 35 ವಯೋಮಿತಿ ಹೊಂದಿರಬೇಕು.
ಒಬಿಸಿ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.ವೇತನ: ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 48,170/- ರಿಂದ ರೂ.69,810/- ವೇತನವಿರುತ್ತದೆ.
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಬೋರ್ಡ್/ಯುನಿವರ್ಸಿಟಿಯಿಂದ
ಸಿಎ/ಐಸಿಡಬ್ಲುಎ, ಡಿಗ್ರಿ ಹೊಂದಿರಬೇಕು.ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-

InStem ಉದ್ಯೋಗವಕಾಶ
InStem ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2021ಅರ್ಜಿ ಸಲ್ಲಿಕೆ: INSTEM ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.
ಹುದ್ದೆಗಳ ವಿವರ : ಸೀನಿಯರ್ ಟೆಕ್ನಿಕಲ್ ಆಫೀಸರ್, ಟೆಕ್ನಿಕಲ್ ಆಫೀಸರ್, ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಬಿ.ಇ/ಬಿ.ಟೆಕ್ ವಿದ್ಯಾರ್ಹತೆ ಯನ್ನು ಪಡೆದಿರಬೇಕು.
ವಯೋಮಿತಿ : ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ 35 ರಿಂದ 56 ವರ್ಷದೊಳಗಿನವರಾಗಿರಬೇಕು.
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು ಅನ್ ರಿಸರ್ವ್ಡ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ , ಮಹಿಳಾ ಅಭ್ಯರ್ಥಿಗಳು, ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಮಾತ್ರಅರ್ಜಿ ಶುಲ್ಕವನ್ನು ಪಾವತಿಸಬಹುದು.ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಇನ್ಸ್ಟೆಮ್ ವೆಬ್‌ಸೈಟ್ ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ವೆಬ್‌ಸೈಟ್ ಲಿಂಕ್ ಈ ಕೆಳಗಿನಂತಿವೆ : https://www.instem.res.in/jobportal
