Author: Mallika

  • ಕೆಎಸ್ಎಸ್ಎಫ್ ಸಿಎಲ್ ಮಂಗಳೂರು : ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕೆಎಸ್ಎಸ್ಎಫ್ ಸಿಎಲ್ ಮಂಗಳೂರು : ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿ. ದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಶಾಖಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅನುಭವ : ಸಹಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡಿ ಅನುಭವ ಇರುವ ಅಭ್ಯರ್ಥಿಗಳಿಗೆ ಆದ್ಯತೆ.

    ಸಹಕಾರಿ ಸಿಬ್ಬಂದಿ ಸೇವಾ ನಿಯಮದಂತೆ ವೇತನ ಮತ್ತಿತರೆ ಸೌಲಭ್ಯಗಳನ್ನು ನೀಡಲಾಗುತ್ತದೆ.

    ಆಸಕ್ತರು ಈ ಕೆಳಕಂಡ ವಿಳಾಸದಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ 10-04-2021 ರೊಳಗೆ ಖುದ್ದಾಗಿ ಅಂಚೆ ಮೂಲಕ ಸಲ್ಲಿಸಬಹುದು. ‌
    ವಯೋಮಿತಿ, ವಿದ್ಯಾರ್ಹತೆ ಮತ್ತಿತರೆ ಹೆಚ್ಚಿನ ವಿವರಗಳನ್ನು ಕಛೇರಿಯಲ್ಲಿ ಅಥವಾ ದೂರವಾಣಿ ಸಂಖ್ಯೆ 9480276535 ಮೂಲಕ ಪಡೆಯಬಹುದು.

    ವಿಳಾಸ: ‌

    ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿ. ಸಾನು ಪ್ಯಾಲೇಸ್, ಪಿ.ವಿ.ಎಸ್ ಸರ್ಕಲ್ ಹತ್ತಿರ, ಎಂ.ಜಿ.ರಸ್ತೆ ಕೋಡಿಯಾಲ್ ಬೈಲ್, ಮಂಗಳೂರು

  • ಕಲಬುರಗಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

    ಕಲಬುರಗಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

    ಕಲಬುರಗಿ ಜಿಲ್ಲಾ ಪಂಚಾಯತಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌.

    ಹುದ್ದೆಗಳ ವಿವರ : ಬಿ.ಎಫ್.ಟಿ (bare foot technician) ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 30

    ಅರ್ಜಿಗಳನ್ನು ಸಲ್ಲಿಸುವವರು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. ಅಂದರೆ
    ಅರ್ಜಿ ಸಲ್ಲಿಸುವ ವ್ಯಕ್ತಿಯ ಹಿಂದಿನ 3 ವರ್ಷಗಳಲ್ಲಿ ಕನಿಷ್ಠ ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿಕಾರನಾಗಿ ಕೆಲಸವನ್ನು ಮಾಡಿರಬೇಕು.

    ವಿದ್ಯಾರ್ಹತೆ: ಕನಿಷ್ಠ 10 ನೇ ತರಗತಿ ತೇರ್ಗಡೆ ಹೊಂದಿರಬೇಕು.

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ‌ ರೂ. 12,000/- ನೀಡಲಾಗುತ್ತದೆ.

    ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಮಹಿಳಾ ಅಭ್ಯರ್ಥಿಗಳಿಗೆ ಸಾಕಷ್ಟು ಪ್ರಾಧಾನ್ಯತೆ ನೀಡಲಾಗುತ್ತದೆ.

    ವಯೋಮಿತಿ: ಅಭ್ಯರ್ಥಿಗಳಿಗೆ ಗರಿಷ್ಠ 45 ವಯಸ್ಸಾಗಿರಬೇಕು.

    ಬಿಎಫ್ ಟಿ ಗಳನ್ನು ಕುಶಲ ಕಾರ್ಮಿಕರೆಂದು(skilled laboures ) ಪರಿಗಣಿಸಿ ಕರ್ತವ್ಯ ಕ್ಕೆ ನಿಯೋಜಿಸಿಕೊಳ್ಳಲಾಗುತ್ತದೆ. ಖಾಯಂ ಹುದ್ದೆ ಆಗಿರುವುದಿಲ್ಲ.

    ಅರ್ಹ ಅಭ್ಯರ್ಥಿಗಳು ಕಲಬುರಗಿ‌ ಜಿಲ್ಲಾ ಪಂಚಾಯತಿಯ ನರೇಗಾ ಶಾಖೆಯಿಂದ ನಿಗದಿತ ನಮೂನೆಯ ಅರ್ಜಿಯನ್ನು ಪಡೆದು ಭರ್ತಿ ಮಾಡಿ, ಅವಶ್ಯ ದಾಖಲಾತಿಗಳೊಂದಿಗೆ ಮಾರ್ಚ್ 30 ರೊಳಗಾಗಿ( ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ) ಅರ್ಜಿ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ 9482046044, 9480866010

  • ಎನ್‌ಎಂಡಿಸಿನಲ್ಲಿ 304 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಎನ್‌ಎಂಡಿಸಿನಲ್ಲಿ 304 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾಪೋರೇಶನ್ ಲಿಮಿಟೆಡ್ ( ಎನ್‌ಎಂಡಿಸಿ) ನಲ್ಲಿ ವಿವಿಧ ಹುದ್ದೆಗಳಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಮಾರ್ಚ್ 31,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಗಳ ವಿವರ, ಅರ್ಜಿ ಶುಲ್ಕ, ವಿದ್ಯಾರ್ಹತೆ, ವಯೋಮಿತಿಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ.

    ಹುದ್ದೆಗಳ ವಿವರ : ಎನ್‌ಎಂಡಿಸಿ ನಲ್ಲಿ ವರ್ಕ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 304 ಹುದ್ದೆ

    ವಿದ್ಯಾರ್ಹತೆ : ಐಟಿಐ, ಮೆಟ್ರಿಕ್, ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಶುಲ್ಕ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ. ೧೫೦/- ನ್ನು ಆನ್‌ಲೈನ್ ಮೂಲಕ ಅಥವಾ ಚಲನ್ ಮೂಲಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 18,100/- ರಿಂದ 35,040 ರೂ.ಗಳವರೆಗೆ ವೇತನವನ್ನು ನೀಡಲಾಗುವುದು.

    ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 30 ವಯೋಮಿತಿಯನ್ನು ಹೊಂದಿರಬೇಕು.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

    ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ ಮಾರ್ಚ್ 31, 2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಎಪ್ರಿಲ್ 15,2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

  • ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

    ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

    ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಗೊಳಪಡುವ ಮಹಾನಗರ ಪಾಲಿಕೆಗಳು, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಧಿಕಾರಿ/ ನೌಕರರುಗಳು ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ದಾಖಲಿಸುವ ನ್ಯಾಯಾಲಯ ಪ್ರಕರಣಗಳ ನಿರ್ವಹಣೆಗಾಗಿ ಉಪಕಾನೂನು ಅಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನಿವೃತ್ತ ಜಿಲ್ಲಾ ನ್ಯಾಯಾಧೀಶರನ್ನು ಕೆಳಕಂಡ ಷರತ್ತುಗಳನ್ವಯ ನೇಮಕ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    1.ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರಬೇಕು.
    2.ಸರಕಾರಿ ಕಛೇರಿಗಳಲ್ಲಿ/ ಸಚಿವಾಲಯದಲ್ಲಿ ಕಾನೂನು ಸಲಹೆಗಾರರಾಗಿ ಉತ್ತಮ ಸೇವೆ ಸಲ್ಲಿಸಿದವರನ್ನು ಆದ್ಯತೆಯ ಮೇರೆ ಪರಿಗಣಿಸಲಾಗುವುದು.
    3.ಆಯ್ಕೆಯಾದ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಗೆ ಸರಕಾರದ ಸುತ್ತೋಲೆಗಳನ್ವಯ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ಸಂಭಾವನೆ ನಿಗದಿಪಡಿಸಲಾಗುವುದು.
    4.ಉಪಕಾನೂನು ಅಧಿಕಾರಿ ಹುದ್ದೆಯ ಆಯ್ಕೆಯಲ್ಲಿ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಯಲಯರವರ ನಿರ್ಧಾರವೇ ಅಂತಿಮ.

    ಸ್ವವಿವರಗಳೊಂದಿಗೆ ಅರ್ಜಿಗಳನ್ನು ಅಂಚೆ ಮೂಲಕವಾಗಲೀ ಅಥವಾ ಖುದ್ದಾಗಲೀ ನಿರ್ದೇಶಕರು, ಪೌರಾಡಳಿತ ನಿರ್ದೇಶಾನಲಯ, 9 ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ.ಬಿ.ಆರ್ . ಅಂಬೇಡ್ಕರ್ ವೀಧಿ, ಬೆಂಗಳೂರು-01 ಈ ವಿಳಾಸದಲ್ಲಿ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 29-03-2021 ರಂದು ಸಾಯಂಕಾಲ 5.30 ಗಂಟೆಗೆ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 080-22868386

  • ಕೆಎಸ್ ಎಸ್ ಸಿ ಎಫ್ ಪ್ರಕಟಣೆ

    ಕೆಎಸ್ ಎಸ್ ಸಿ ಎಫ್ ಪ್ರಕಟಣೆ

    ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ, ಬೆಂಗಳೂರು ಇದರಲ್ಲಿ 10 ಜವಾನ ಹುದ್ದೆಗಳ ನೇರ ನೇಮಕಾತಿಗಾಗಿ ದಿನಾಂಕ : 05-03-2021 ರಂದು ಹೊರಡಿಸಿರುವ ಪ್ರಕಟಣೆಯನ್ವಯ, ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಮತ್ತು ಸಹಕಾರ ವಿಷಯ ಹಾಗೂ ಸಾಮಾನ್ಯ ಜ್ಞಾನದ ಕುರಿತು ಲಿಖಿತ ಪರೀಕ್ಷೆಗಳನ್ನು ನಡೆಸಲಾಗುವುದು.

    ಇನ್ನುಳಿದಂತೆ ಯಾವುದೇ ಬದಲಾವಣೆಗಳು ಇರುವ. ಹೆಚ್ಚಿನ ವಿವರಗಳು ಮಹಾಮಂಡಳದ ವೆಬ್‌ಸೈಟ್‌ www.recruitapp.in/ksccf2021 ನಲ್ಲಿ ಲಭ್ಯವಿರುತ್ತದೆ.

  • ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಉದ್ಯೋಗ: ಕೂಡಲೇ ಅರ್ಜಿ ಸಲ್ಲಿಸಿ

    ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಉದ್ಯೋಗ: ಕೂಡಲೇ ಅರ್ಜಿ ಸಲ್ಲಿಸಿ

    ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸಲು ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ: ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಒಂದು ವರ್ಷದ ಅವಧಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಎಲ್.ಎಲ್.ಬಿ ಪದವಿ ಹೊಂದಿರಬೇಕು. ಜಿಲ್ಲಾ/ಉಚ್ಛ ನ್ಯಾಯಾಲಯಗಳಲ್ಲಿ ಕನಿಷ್ಠ 5 ವರ್ಷ ಸ್ವತಂತ್ರವಾಗಿ ನ್ಯಾಯವಾದಿಗಳಾಗಿ ಸೇವೆ ಸಲ್ಲಿಸಿರಬೇಕು.

    ವಯೋಮಿತಿ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 65 ವರ್ಷ ಮೀರಿರಬಾರದು.

    ಪಾಲಿಕೆಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯ ಗಳಲ್ಲಿ ದಾಖಲಾದ ಸಿವಿಲ್/ಕ್ರಿಮಿನಲ್ ಮೊಕದ್ದಮೆಗಳನ್ನು ನಿರ್ವಹಿಸಿದ ಅನುಭವ ಹೊಂದಿರಬೇಕು.

    ನೇಮಕಾತಿಯ ಪೂರ್ವದಲ್ಲಿ ಶಾರೀರಿಕ ಸದೃಢ ಪ್ರಮಾಣ ಪತ್ರವನ್ನು ಸರಕಾರಿ ಜಿಲ್ಲಾ ಸರ್ಜನ್ ರವರಿಂದ ಪಡೆದು ಸಲ್ಲಿಸಬೇಕಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದು.
    08392-273479/278168