Author: Mallika

  • ಇಂಡಿಯನ್ ಆರ್ಮಿ ಟೆಕ್ನಿಕಲ್ ಎಂಟ್ರಿ ಸ್ಕೀಮ್ ಕೋರ್ಸ್ ಪ್ರಕಟ

    ಇಂಡಿಯನ್ ಆರ್ಮಿ ಟೆಕ್ನಿಕಲ್ ಎಂಟ್ರಿ ಸ್ಕೀಮ್ ಕೋರ್ಸ್ ಪ್ರಕಟ

    ಭಾರತೀಯ ಮಿಲಿಟರಿಯು 2022 ರ ಜನವರಿ ತಿಂಗಳಲ್ಲಿ ಆರಂಭವಾಗಲಿರುವ ಟೆಕ್ನಿಕಲ್ ಎಂಟ್ರಿ ಸ್ಕೀಮ್ (10+2)-46 ನೆ ಬ್ಯಾಚ್ ಕೋರ್ಸ್ ಪ್ರವೇಶಾತಿಗೆ ಸಂಬಂಧಿಸಿದಂತೆ ಶಾರ್ಟ್ ನೋಟಿಪಿಕೇಶನ್ ನ್ನು ಬಿಡುಗಡೆ ಮಾಡಿದೆ.

    ವಿದ್ಯಾರ್ಹತೆ : ಅಭ್ಯರ್ಥಿಗಳು 10+2 ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಶೇ.7೦ ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.( ಭೌತಶಾಸ್ತ್ರ, ರಸಾಯನಶಾಸ್ತ್ರ,ಗಣಿತ) ಇದರ ಜೊತೆಗೆ ಜೆಇಇ ಮೇನ್ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ.

    ಟೆಕ್ನಿಕಲ್ ಎಂಟ್ರಿ ಸ್ಕೀಮ್ ಕೋರ್ಸ್ ಪ್ರವೇಶಕ್ಕೆ ಮಿಲಿಟರಿ ನೇಮಕ ವಿಭಾಗವು ನಿಗದಿಪಡಿಸಿರುವ ಹಲವು ಹಂತದ ಪರೀಕ್ಷೆಗಳನ್ನು ತೇರ್ಗಡೆ ಮಾಡಬೇಕಾಗುತ್ತದೆ. ನಂತರ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

    ಭಾರತೀಯ ಮಿಲಿಟರಿ ಟೆಕ್ನಿಕಲ್ ಎಂಟ್ರಿ ಸ್ಕೀಮ್ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಇತರೆ ಹೆಚ್ಚಿನ ಮಾಹಿತಿಗಳನ್ನು ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ

  • ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹುದ್ದೆ

    ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹುದ್ದೆ

    ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-03-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-03-2021( 5pm)

    ಹುದ್ದೆ: ತಾಂತ್ರಿಕ ಸಂಯೋಜಕರು- 03
    ತಾಲೂಕು ಐಇಸಿ ಸಂಯೋಜಕರು-04
    ತಾಂತ್ರಿಕ ಸಹಾಯಕರು(ತೋಟಗಾರಿಕೆ) – 01
    ತಾಂತ್ರಿಕ ಸಹಾಯಕರು(ಕೃಷಿ)-1

    ವಿದ್ಯಾರ್ಹತೆ :ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಬಿಇ/ಎಂಟೆಕ್,ಯುಜಿ/ಪಿಜಿ/ಸಮೂಹ ಸಂವಹನ, ಬಿ.ಎಸ್ಸಿ/ಎಂ.ಎಸ್ಸಿ ಇನ್ ಅಗ್ರಿಕಲ್ಚರ್,ಬಿ.ಎಸ್ಸಿ/ಎಂ.ಎಸ್ಸಿ ಇನ್ ಹಾರ್ಟಿಕಲ್ಚರ್ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 40 ವಯೋಮಿತಿಯವರು ಅರ್ಜಿ ಸಲ್ಲಿಸಬಹುದು.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,000/- ರಿಂದ ರೂ.29,000/- ರವರೆಗೆ ವೇತನ ವಿರುತ್ತದೆ.

    ಅಭ್ಯರ್ಥಿಗಳು ಅರ್ಜಿಯನ್ನು ಪೋಸ್ಟ್ ಮೂಲಕ ಅಥವಾ ಖುದ್ದಾಗಿ ಈ ವಿಳಾಸಕ್ಕೆ ಸಲ್ಲಿಸಬೇಕು:

    ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಭವನ, ಬೀರಸಂದ್ರ(ಚಪ್ಪರದ ಕಲ್ಲು)ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು-562110

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    https://bangalorerural.nic.in/

  • ಯುಎಎಸ್ ಧಾರವಾಡ ಹುದ್ದೆಗಳಿಗೆ ನೇಮಕ

    ಯುಎಎಸ್ ಧಾರವಾಡ ಹುದ್ದೆಗಳಿಗೆ ನೇಮಕ

    ಯುಎಎಸ್ ಧಾರವಾಡ ( ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಆಸಕ್ತರಿರುವ ಅಭ್ಯರ್ಥಿಗಳು ದಿನಾಂಕ 22-03-2021 ರಂದು (11.00am) ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಯುಎಎಸ್ ಧಾರವಾಡ ನಲ್ಲಿ ಯೋಗ ಟೀಚರ್-01 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ನೋಟಿಫಿಕೇಶನ್ ರಿಲೀಸ್ ಆದ ದಿನಾಂಕ : 08-03-2021

    ಹುದ್ದೆ ಸ್ಥಳ : ಧಾರವಾಡ – ಕರ್ನಾಟಕ

    ವೇತನ : ಯೋಗ ಟೀಚರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ರೂ.20,000/- ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ವಯೋಮಿತಿ : ಯುಎಎಸ್ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ಯುನಿವರ್ಸಿಟಿ ಯಿಂದ ಎಂ.ಎಸ್ಸಿ ತೇರ್ಗಡೆ ಹೊಂದಿರಬೇಕು.

    ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ದಿನಾಂಕ 22-03-2021(11.00am) ,ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.

    ವಿಳಾಸ :
    Office of Dean (Agriculture), Agricultural University, Dharwad – 580005, Karnataka.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಎನ್ಐಟಿಕೆ ನಲ್ಲಿ ಉದ್ಯೋಗವಕಾಶ : ಕೂಡಲೇ ಅರ್ಜಿ ಸಲ್ಲಿಸಿ

    ಎನ್ಐಟಿಕೆ ನಲ್ಲಿ ಉದ್ಯೋಗವಕಾಶ : ಕೂಡಲೇ ಅರ್ಜಿ ಸಲ್ಲಿಸಿ

    ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ ಸುರತ್ಕಲ್ (ಎನ್ಐಟಿಕೆ) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಈ ಹುದ್ದೆಗಳನ್ನು ಮೆಕ್ಯಾನಿಕಲ್ ಇಂಜಿನಿಯರಿಂಗ್ ಸೆಂಟರ್ ನಲ್ಲಿ ಭರ್ತಿ ಮಾಡಿಕೊಳ್ಳಲಿದ್ದು ಒಂದು ವರ್ಷ ಹುದ್ದೆಯ ಅವಧಿ ಇರುತ್ತದೆ.

    ಹುದ್ದೆಗಳ ವಿವರ : ಸೈಂಟಿಫಿಕ್ ಸ್ಟಾಫ್, ಟೆಕ್ನಿಕಲ್ ಸ್ಟಾಫ್, ಪ್ರಾಜೆಕ್ಟ್ ಇಂಜಿನಿಯರ್, ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.

    ವಿದ್ಯಾರ್ಹತೆ : ಸೈಂಟಿಫಿಕ್ ಸ್ಟಾಫ್ ಹುದ್ದೆಗೆ ಬಿಸಿಎ, ಎಂಸಿಎ, ಎಂಎಸ್ಸಿ ತೇರ್ಗಡೆ ಹೊಂದಿರಬೇಕು. ಟೆಕ್ನಿಕಲ್ ಸ್ಟಾಫ್ ಐಟಿಐ ಪಾಸಾಗಿರಬೇಕು. ಟೆಕ್ನಿಕಲ್ ಸ್ಟಾಫ್ ಹುದ್ದೆಗೆ 3 ವರ್ಷ ಡಿಪ್ಲೋಮಾ ಇನ್ ಇಂಜಿನಿಯರಿಂಗ್ ತೇರ್ಗಡೆ ಹೊಂದಿರಬೇಕು. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಬಿಟೆಕ್, ಎಂಟೆಕ್ ಪಾಸಾಗಿರಬೇಕು. ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಪಿಎಚ್ಡಿ ಮಾಡಿರಬೇಕು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-03-2021

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

    ವಿಳಾಸ : ಎನ್ ಐಟಿಕೆ, ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ಕರ್ನಾಟಕ , ಸುರತ್ಕಲ್

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕೆಎಸ್ ಯು ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಕೆಎಸ್ ಯು ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ಸಂಸ್ಕೃತಿ ಯುನಿವರ್ಸಿಟಿ (ಕೆಎಸ್ ಯು ಯುನಿವರ್ಸಿಟಿ)ಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನ ಕ್ಕೆ ದಿನಾಂಕ 17-03-2021( 11.30 am) ಗೆ ಹಾಜರಾಗಬಹುದು.

    ಕರ್ನಾಟಕ ಸಂಸ್ಕೃತಿ ಯುನಿವರ್ಸಿಟಿ (ಕೆಎಸ್ ಯು ಯುನಿವರ್ಸಿಟಿ)ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 03

    ಹುದ್ದೆ ಸ್ಥಳ‌: ಬೆಂಗಳೂರು-ಕರ್ನಾಟಕ

    ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ಯುನಿವರ್ಸಿಟಿ ಯಿಂದ ಎಂಎ, ಪಿಎಚ್ಡಿ,ಪೋಸ್ಟ್ ಗ್ರಾಜ್ಯುಯೇಶನ್, ಎನ್ ಇಟಿ ಯನ್ನು ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಕರ್ನಾಟಕ ಸಂಸ್ಕೃತಿ ಯುನಿವರ್ಸಿಟಿ (ಕೆಎಸ್ ಯು ಯುನಿವರ್ಸಿಟಿ)ನ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಅಭ್ಯರ್ಥಿಗಳು ತಮ್ಮ‌ ಅಗತ್ಯ ದಾಖಲೆಗಳೊಂದಿಗೆ ದಿನಾಂಕ‌17-03-2021 (11.00am ) ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.

    Karnataka Samskrit University, Pampa Mahakavi Road, Chamarajpet, Bengaluru – 560018

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    http://ksu.ac.in/en/
    http://ksu.ac.in/en/
  • ತುಮಕೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

    ತುಮಕೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

    ತುಮಕೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 30 ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-03-2021( 11am ರಿಂದ 3pm)
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

    ತುಮಕೂರು ಜಿಲ್ಲಾ ಪಂಚಾಯತ್ ನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ.

    ಒಟ್ಟು ಹುದ್ದು : 16

    ಹುದ್ದೆಗಳ ವಿವರ : ತಾಲೂಕು ಟೆಕ್ನಿಕಲ್ ಅಸಿಸ್ಟೆಂಟ್( horticulture) – 2
    ತಾಲೂಕು ಟೆಕ್ನಿಕಲ್ ಅಸಿಸ್ಟೆಂಟ್( ಅಗ್ರಿಕಲ್ಚರ್ ಮತ್ತು ಸಿಲ್ಕ್ )-11
    ತಾಲೂಕು ಟೆಕ್ನಿಕಲ್ ಅಸಿಸ್ಟೆಂಟ್( ಫಾರೆಸ್ಟ್)-3

    ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಬೋರ್ಡ್/ ಯುನಿವರ್ಸಿಟಿ ಯಿಂದ ಬಿ.ಎಸ್ಸಿ ತೇರ್ಗಡೆಯಾಗಿರಬೇಕು.

    ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 40 ವಯೋಮಿತಿ ಹೊಂದಿರಬೇಕು.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 30-03-2021 ( 11.am ರಿಂದ 3 pm ) ರೊಳಗೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬೇಕು.
    ವಿಳಾಸ :
    Development Branch (2nd Floor), Zilla Panchayat, Tumakuru,

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ