Author: Mallika

  • ಬಾಲಭವನ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಬಾಲಭವನ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ದಾವಣಗೆರೆ ಜಿಲ್ಲಾ ಬಾಲ ಭವನದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ‌.

    ಹುದ್ದೆ: ಬಾಲ ಭವನದಲ್ಲಿ ಜಿಲ್ಲಾಭವನದಲ್ಲಿ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    2021-22 ನೇ ಸಾಲಿನಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ಹೊಂದಿರುವ ಜೊತೆಗೆ ಕಂಪ್ಯೂಟರ್ ಜ್ಞಾನ, ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕ್ಷೇತ್ರದಲ್ಲಿ ಕೌಶಲ್ಯ ಹೊಂದಿರಬೇಕು. ಬಾಲಭವನದಲ್ಲಿ ಕನಿಷ್ಠ 5 ವರ್ಷ ಹಾಗೂ ಅಥವಾ ಅದಕ್ಕಿಂತ ಮೇಲ್ಪಟ್ಟು ಅನುಭವ ಹೊಂದಿರುವವರಿಗೆ ಆದ್ಯತೆ ಮೇರೆಗೆ ವಿದ್ಯಾರ್ಹತೆಯಲ್ಲಿ ಸಡಿಲಿಕೆ ನೀಡಲಾಗಿದೆ.

    ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಹಾಗೂ ಅದಕ್ಕಿಂತ ಮೇಲ್ಪಟ್ಟು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

    ವೇತನ : ಕಾರ್ಯಕ್ರಮ ಸಂಯೋಜಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.15,000/- ವೇತನ ನೀಡಲಾಗುತ್ತದೆ.

    ಕಚೇರಿ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ರೂ. 10,000/- ವೇತನ ನಿಗದಿಪಡಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಬಾಲಭವನ, ಜೆಹೆಚ್ ಬಡಾವಣೆ, ಪಾರ್ಕ್ -1 ಎ ಬ್ಲಾಕ್, ನಾಗನೂರು ರಸ್ತೆ, ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದು

  • ನೀಟ್ ವೇಳಾಪಟ್ಟಿ ಬಿಡುಗಡೆ

    ನೀಟ್ ವೇಳಾಪಟ್ಟಿ ಬಿಡುಗಡೆ

    ರಾಷ್ಟ್ರೀಯ ಪರೀಕ್ಷೆ ಏಜೆನ್ಸಿಯು ( ಎನ್‌ಟಿಎ) ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರ್ಯಾನ್ಸ್ ಟೆಸ್ಟ್ ( ನೀಟ್) 2021 ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ನೀಟ್ 2021(ಯುಜಿ) ಪರೀಕ್ಷೆಗೆ ಆನ್‌ಲೈನ್ ಮೂಲಕ ರಿಜಿಸ್ಟ್ರೇಶನ್ ಪಡೆಯಬಹುದಾಗಿದೆ. ನೀಟ್ ಯುಜಿ ಪರೀಕ್ಷೆ ವೇಳಾಪಟ್ಟಿತಯ ಆಗಸ್ಟ್ 01, 2021 ರಂದು 11 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಬಾರಿ ನೀಟ್ 2021 ಪರೀಕ್ಷೆಯು ಒಂದೇ ಬಾರಿ ನಡೆಸಲಿದೆ. ಈ ಬಗ್ಗೆ ಎನ್‌ಟಿಎ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಇದಕ್ಕೂ ಮೊದಲು ನೀಟ್ ಪರೀಕ್ಷೆ ಎರಡು ಬಾರಿ ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಎನ್‌ಟಿಎ ಅಭ್ಯರ್ಥಿಗಳ ಸಂಶಯಕ್ಕೆ ಉತ್ತರ ನೀಡಿದೆ.

    ನೀಟ್(ಯುಜಿ) ೨೦೨೧ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು https://nta.ac.in, https://ntaneet.nic.in ವೆಬ್‌ಸೈಟ್ ಭೇಟಿ ನೀಡಬಹುದು

  • ಗೃಹರಕ್ಷಕ ದಳ ಸಂದರ್ಶನ:  ಇಲ್ಲಿದೆ ಸಂಪೂರ್ಣ ವಿವರ

    ಗೃಹರಕ್ಷಕ ದಳ ಸಂದರ್ಶನ: ಇಲ್ಲಿದೆ ಸಂಪೂರ್ಣ ವಿವರ

    ಬಳ್ಳಾರಿ ಜಿಲ್ಲೆಯ ರೂಪನಗುಡಿ, ಸಿರಗುಪ್ಪ, ಕುಡುತನಿ, ತೋರಣಗಲ್ಲು ಮತ್ತು ಬಳ್ಳಾರಿ ಘಟಕದಲ್ಲಿ ಗೃಹರಕ್ಷಕರ ವಾದ್ಯವೃಂದ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

    ಗೃಹರಕ್ಷಕ ವಾದ್ಯವೃಂದ ಸದಸ್ಯರ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ಮಾ.16 ರಂದು ಬೆಳಿಗ್ಗೆ 8 ಕ್ಕೆ ಬಳ್ಳಾರಿ ನಗರದ ಡಿ.ಎ.ಆರ್ ಮೈದಾನದಲ್ಲಿ ಸಂದರ್ಶನ ನಡೆಯುತ್ತದೆ ಎಂದು ಜಿಲ್ಲಾ ಗೃಹರಕ್ಷಕ ದಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಆಧಾರ್ ಕಾರ್ಡ್, ಕುಟುಂಬದ ಪಡಿತರ ಚೀಟಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಡ್ರೈವಿಂಗ್ ಲೈಸೆನ್ಸ್‌ ಜೊತೆಗೆ ಸಂದರ್ಶನ ಪತ್ರ ತರುವುದು ಕಡ್ಡಾಯವೆಂದು ತಿಳಿಸಿದೆ.

    ಜೆರಾಕ್ಸ್‌ ದಾಖಲಾತಿಗಳನ್ನು ಪರಿಗಣಿಸುವುದಿಲ್ಲ. ಗೃಹರಕ್ಷಕ ಘಟದಲ್ಲಿನ ಸದಸ್ಯತ್ವ ಬಯಸಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ವಾದ್ಯವೃಂದ ಸಲಕರಣೆಗಳನ್ನು ತಾವೇ ತರುವುದರ ಜೊತೆಗೆ ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಬರಬೇಕಾಗಿದೆ. ಸರಕಾರದಿಂದ ಯಾವುದೇ ರೀತಿಯ ಭತ್ಯೆ ಪಾವತಿಸುವುದಿಲ್ಲ ಎಂದು ಜಿಲ್ಲಾ ಗೃಹರಕ್ಷಕ ದಳ ತಿಳಿಸಿದೆ.

  • ಯುಪಿಎಸ್ ಸಿ ಫಲಿತಾಂಶ ಪ್ರಕಟ

    ಯುಪಿಎಸ್ ಸಿ ಫಲಿತಾಂಶ ಪ್ರಕಟ

    ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 2020 ನೇ ಸಾಲಿನ ಯುಪಿಎಸ್ ಸಿ ಎನ್ ಡಿಎ, ಎನ್ ಎ 1 ಸಾಲಿನ ಪರೀಕ್ಷೆ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಸದರಿ ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ಯುಪಿಎಸ್ ಸಿ ಆಪೀಶಿಯಲ್ ವೆಬ್‌ಸೈಟ್‌ ಗೆ ಭೇಟಿ ನೀಡಿ ಅಂಕಗಳನ್ನು ಚೆಕ್ ಮಾಡಬಹುದು. ಯುಪಿಎಸ್ ಸಿ ಫಲಿತಾಂಶವನ್ನು ಮಾರ್ಚ್ 7, 2021 ರಂದು ಬಿಡುಗಡೆ ಮಾಡಲಾಗಿದೆ.

    ಕೇಂದ್ರ ಲೋಕಸೇವಾ ಅಫೀಶಿಯಲ್ ವೆಬ್‌ಸೈಟ್‌ https://upsc.gov.in/ ಗೆ ಭೇಟಿ ನೀಡಿ.

  • ಕೋಲಾರ ಜಿಲ್ಲಾ ಪಂಚಾಯತಿನಲ್ಲಿ ಉದ್ಯೋಗ

    ಕೋಲಾರ ಜಿಲ್ಲಾ ಪಂಚಾಯತಿನಲ್ಲಿ ಉದ್ಯೋಗ

    ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾ‌ಪಂಚಾಯತಿಯಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ತಾಲ್ಲೂಕು ಪಂಚಾಯತಿ ಮಟ್ಟದಲ್ಲಿ ತಾಂತ್ರಿಕ ಸಹಾಯಕರು-04 (ತೋಟಗಾರಿಕೆ 3, ಅರಣ್ಯ 1) ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿಯನ್ನು ಕೋಲಾರ ಜಿಲ್ಲಾ‌ ಪಂಚಾಯತ್, ಕಚೇರಿಯಿಂದ ಪಡೆದು, ಖುದ್ದಾಗಿ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-03-2021 ಸಂಜೆ 5.00 ಗಂಟೆಯವರೆಗೆ.

  • ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

    ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

    ಮೈಸೂರು ಜಿಲ್ಲೆಯಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನಾರೋಗ್ಯ ಸಂಸ್ಥೆ, ನಿಮ್ಹಾನ್ಸ್‌ನ ಎಪಿಡಿಯಾಮಾಲಜಿ ವಿಭಾಗ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರಕಾರದ ಅನುದಾನಿತ ಯೋಜನೆಯಾದ “ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ’ ಮತ್ತು’ ಅನುಷ್ಠಾನ ಯೋಜನೆ’ ಯಡಿಯಲ್ಲಿ ಯುವ ಪರಿವರ್ತಕರಾಗಿ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

    ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 35 ವರ್ಷದೊಳಗಿರಬೇಕು.

    ವಿದ್ಯಾರ್ಹತೆ : ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಇತರೆ ಅನುಭವ : ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಲು ಬರುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ, ಹುಮ್ಮಸ್ಸು, ಉತ್ತಮ, ಅಂತರ್ವ್ಯಕ್ತಿತ್ವ, ಸಂವಹನ ಕೌಶಲ್ಯದ ಜತೆಗೆ ಸಂವಾದ ಕೌಶಲ್ಯ,ಸೇವಾ ಮನೋಭಾವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

    ಹುದ್ದೆ ಸ್ಥಳ : ಮೈಸೂರು ಜಿಲ್ಲೆಯಲ್ಲಿ ಪ್ರಯಾಣಿಸುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 18 , 2021

    ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ನಿರ್ದೇಶಕರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು : 0821-2444922, 9611069973