Author: sarkari

  • BSNL Recruitment 2024: 558 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಸ್‌ಎನ್‌ಎಲ್-‌ ತಿಂಗಳಿಗೆ 50ಸಾವಿರಕ್ಕಿಂತಲೂ ಹೆಚ್ಚು ಸಂಬಳ

    BSNL Recruitment 2024: 558 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಸ್‌ಎನ್‌ಎಲ್-‌ ತಿಂಗಳಿಗೆ 50ಸಾವಿರಕ್ಕಿಂತಲೂ ಹೆಚ್ಚು ಸಂಬಳ

    BSNL Recruitment 2024: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 558 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಶೀಘ್ರದಲ್ಲೇ ಈ ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸುವ ದಿನಾಂಕ ಬಿಡುಗಡೆಯಾಗಲಿದೆ. ಬಿಎಸ್‌ಎನ್‌ಎಲ್‌ ನಲ್ಲಿ ಸೀನಿಯರ್ ಎಕ್ಸಿಕ್ಯೂಟಿವ್ ಟ್ರೈನಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲು ಇಚ್ಛಿಸುವವರು ಈ ಉದ್ಯೋಗದ ಪ್ರಯೋಜನವನ್ನು ಪಡೆದುಕೊಳ್ಳಬಹುದು.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಶೀಘ್ರದಲ್ಲೇ ಪ್ರಕಟವಾಗಲಿದೆ.
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ ಪ್ರಕಟವಾಗಲಿದೆ.

    ಹುದ್ದೆಗಳ ವಿವರ;
    ಹುದ್ದೆಯ ಹೆಸರು: ಭಾರತ್‌ ಸಂಚಾರ್‌ ನಿಗಮ್‌ ಲಿಮಿಟೆಡ್‌ (BSNL) ನಲ್ಲಿ ಸೀನಿಯರ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆಯ ಹೆಸರು ಮತ್ತು ಸಂಖ್ಯೆ:
    ಟೆಲಿಕಾಂ ಕಾರ್ಯಾಚರಣೆಗಳು- 450 ಹುದ್ದೆಗಳು
    ಹಣಕಾಸು – 84 ಹುದ್ದೆಗಳು
    ನಾಗರಿಕ – 13 ಹುದ್ದೆಗಳು
    ಎಲೆಕ್ಟ್ರಿಕಲ್- 11 ಹುದ್ದೆಗಳು
    ಹುದ್ದೆ ಸಂಖ್ಯೆ: ಒಟ್ಟು 558 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

    ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.24900-50500/- ಪ್ರತಿ ತಿಂಗಳು ವೇತನ ನೀಡಲಾಗುವುದು.

    ವಿದ್ಯಾರ್ಹತೆ: ಟೆಲಿಕಾಂ ಕಾರ್ಯಾಚರಣೆ- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.E ಅಥವಾ B.Tech in EEE/ECE/CSE/IT/Instrumentation Engineering ತೇರ್ಗಡೆ ಹೊಂದಿರಬೇಕು.
    ಹಣಕಾಸು- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು CA, CMA ಮಾಡಿಬೇಕು.
    ಸಿವಿಲ್- ಈ ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್ ಮಾಡಿರಬೇಕು
    ಎಲೆಕ್ಟ್ರಿಕಲ್: ಈ ಹುದ್ದೆಗೆ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್ ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

    ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • ONGC Recruitment 2024: ಒಎನ್‌ಜಿಸಿಯಲ್ಲಿದೆ ಉದ್ಯೋಗಾವಕಾಶ; ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ

    ONGC Recruitment 2024: ಒಎನ್‌ಜಿಸಿಯಲ್ಲಿದೆ ಉದ್ಯೋಗಾವಕಾಶ; ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ

    ONGC Recruitment 2024: ONGC ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು 25 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಜಿಯೋಫಿಸಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು ಭರ್ತಿ ಮಾಡಲು ಆಹ್ವಾನಿಸಿದ ಖಾಲಿ ಹುದ್ದೆಗಳಿಗೆ ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಮಾಡುವವರು ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು 06-Mar-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 29-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-03-2024
    ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನಕ್ಕಾಗಿ ಪ್ರವೇಶ ಕಾರ್ಡ್‌ನ ವಿತರಣೆಯ ದಿನಾಂಕ: 07-ಮಾರ್ಚ್-2024
    ಸಂದರ್ಶನದ ದಿನಾಂಕ: 10ನೇ ಮತ್ತು 11ನೇ ಮಾರ್ಚ್ 2024
    ಫಲಿತಾಂಶಗಳ ಘೋಷಣೆಯ ತಾತ್ಕಾಲಿಕ ದಿನಾಂಕ: 13-ಮಾರ್ಚ್-2024

    ಹುದ್ದೆಗಳ ವಿವರ:
    ಹುದ್ದೆ : ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ -22 ಪೋಸ್ಟ್‌, ಜಿಯೋಫಿಸಿಸ್ಟ್-3 ಪೋಸ್ಟ್‌ಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ: ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)ವು ಒಟ್ಟು 25 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

    ವೇತನ: ಮೇಲೆ ತಿಳಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.60000-180000/- ರವರೆಗೆ ವೇತನ ದೊರಕಲಿದೆ.

    ವಿದ್ಯಾರ್ಹತೆ: ಜಿಯೋಫಿಸಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಟೆಕ್, ಸ್ನಾತಕೋತ್ತರ ಪದವಿ ಮಾಡಿಬೇಕು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್: ಬಿ.ಇ ಅಥವಾ ಬಿ.ಟೆಕ್ ಇನ್ EEE/ಇನ್‌ಸ್ಟ್ರುಮೆಂಟೇಶನ್/ಮೆಕ್ಯಾನಿಕಲ್/ಪೆಟ್ರೋಲಿಯಂ

    ವಯಸ್ಸಿನ ಮಿತಿ: ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷ. ಈ ವಯಸ್ಸನ್ನು ಮೀರಿರಬಾರದು. OBC (NCL) ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಎಸ್‌ಸಿ/ಎಸ್‌ಟಿ/PwBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. GEN/EWS/OBC ಅಭ್ಯರ್ಥಿಗಳಿಗೆ ರೂ.1000 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅಭ್ಯರ್ತೀಗಳು ಆನ್‌ಲೈನ್‌ ಮೂಲಕ ಮಾತ್ರವೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: GATE 2023ಯ ಮಾರ್ಕ್ಸ್‌, ಕ್ವಾಲಿಫಿಕೇಶನ್‌, ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ.

  • KPSC Job: ಕೆಪಿಎಸ್‌ಸಿ ಇಂದ 364 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

    KPSC Job: ಕೆಪಿಎಸ್‌ಸಿ ಇಂದ 364 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

    Karnataka SSLR Recruitment 2024: ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 364 ಲ್ಯಾಂಡ್‌ ಸರ್ವೇಯರ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲು ಇಚ್ಛಿಸುವವರು ಈ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 10-Apr-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2024
    ಭೂಮಾಪಕರ (HK) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 06-Jul-2024
    ಭೂಮಾಪಕರ (HK) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 07-Jul-2024
    ಭೂಮಾಪಕರ (RPC) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 20-ಜುಲೈ-2024
    ಭೂಮಾಪಕರ (RPC) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 21-ಜುಲೈ-2024

    ಹುದ್ದೆಯ ಈ ಕೆಳಗೆ ನೀಡಲಾಗಿದೆ.
    ಭೂಮಾಪಕರ ಹುದ್ದೆ:
    ಹೈದರಾಬಾದ್‌ -ಕರ್ನಾಟಕ ವೃಂದ (HK)-100
    ಉಳಿಕೆ ಮೂಲ ವೃಂದ (RPC)-264

    ಶೈಕ್ಷಣಿಕ ಅರ್ಹತೆ:
    ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ITI, 12th, ಡಿಪ್ಲೊಮಾ, B.E ಅಥವಾ B.Tech ಸಿವಿಲ್ ಇಂಜಿನಿಯರಿಂಗ್ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
    CAT-2ಎ/2ಬಿ/3ಎ/3ಬಿ- 03 ವರ್ಷ, SC/ST/Cat-1- 05 ವರ್ಷ, PWD/ವಿಧವೆ- 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: SC/ST/Cat-I/PWD ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300, ಸಾಮಾನ್ಯ ಅಭ್ಯರ್ಥಿಗಳು: ರೂ.600/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್‌ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಸೂಚಿಸಲಾಗಿದೆ.

    ವೇತನ: ಅಭ್ಯರ್ಥಿಗಳಿಗೆ ಮಾಸಿಕ ರೂ.23,500-ರೂ.47,650 ಶ್ರೇಣಿಯಲ್ಲಿ ವೇತನ ನೀಡಲಾಗುವುದು.

    ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಲಿಂಕ್‌ಗೆ ಕ್ಲಿಕ್‌ ಮಾಡಿ
    ಭೂ ಮಾಪಕ (HK), ಭೂ ಮಾಪಕ (RPC) ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

  • BEL Jobs: ಬೆಂಗಳೂರಿನ BEL ಕಂಪನಿಯಲ್ಲಿ 517 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ 40ಸಾವಿರ ಸಂಬಳ

    BEL Jobs: ಬೆಂಗಳೂರಿನ BEL ಕಂಪನಿಯಲ್ಲಿ 517 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ 40ಸಾವಿರ ಸಂಬಳ

    BEL Recruitment 2024: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 517 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಯ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು 13-Mar-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-03-2024

    ಹುದ್ದೆಗಳ ವಿವರ ಇಲ್ಲಿ ನೀಡಲಾಗಿದೆ.
    ಹುದ್ದೆ: ಟ್ರೈನಿ ಇಂಜಿನಿಯರ್‌ ಹುದ್ದೆಗೆ ಬಿಇಎಲ್‌ ಸಂಸ್ಥೆ ಅರ್ಜಿ ಆಹ್ವಾನಿಸಲಾಗಿದೆ.
    ಹುದ್ದೆ ಸಂಖ್ಯೆ: ಒಟ್ಟು 517 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

    BEL ಹುದ್ದೆಯ ವಲಯವಾರು ಪೋಸ್ಟ್‌ಗಳ ಸಂಖ್ಯೆ ವಿವರ
    ಕೇಂದ್ರ 68
    ಪೂರ್ವ 86
    ಪಶ್ಚಿಮ 139
    ಉತ್ತರ 78
    ಈಶಾನ್ಯ 15
    ದಕ್ಷಿಣ 131
    ಒಟ್ಟು 517 ಹುದ್ದೆಗಳು.

    ವಿದ್ಯಾರ್ಹತೆ: B.E ಅಥವಾ B.Tech, M.E ಅಥವಾ M.Tech ಅನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

    ವಯೋಮಿತಿ: B.E ಅಥವಾ B.Tech ಮಾಡಿದ ಅಭ್ಯರ್ಥಿಗಳಿಗೆ 28 ​​ವರ್ಷಗಳು ಮತ್ತು M.E ಅಥವಾ M.Tech ಮಾಡಿದ ಅಭ್ಯರ್ಥಿಗಳಿಗೆ 30 ವರ್ಷ ನಿಗದಿಪಡಿಸಲಾಗಿದೆ.

    ವಯೋಮಿತಿ ಸಡಿಲಿಕೆ: SC/ST ಅಭ್ಯರ್ಥಿಗಳಿಗೆ 05 ವರ್ಷ, OBC (NCL) ಅಭ್ಯರ್ಥಿಗಳಿಗೆ 03 ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: SC/ST/PwBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಎಲ್ಲಾ ಇತರ ಅಭ್ಯರ್ಥಿಗಳು ರೂ.150/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಬಿಐ ಕಲೆಕ್ಟ್‌ ಮೂಲಕ ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30ಸಾವಿರದಿಂದ 40ಸಾವಿರದವರೆಗೆ ವೇತನ ಸಿಗಲಿದೆ.

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • KSRTC Recruitment: 2020ನೇ ಸಾಲಿನ 3745 ಕೆಎಸ್‌ಆರ್‌ಟಿಸಿ ನೇಮಕಾತಿ ಕುರಿತು ಗುಡ್‌ನ್ಯೂಸ್‌; ಆಯ್ಕೆ ಪ್ರಕ್ರಿಯೆ ದಿನಾಂಕ ಪ್ರಕಟ

    KSRTC Recruitment: 2020ನೇ ಸಾಲಿನ 3745 ಕೆಎಸ್‌ಆರ್‌ಟಿಸಿ ನೇಮಕಾತಿ ಕುರಿತು ಗುಡ್‌ನ್ಯೂಸ್‌; ಆಯ್ಕೆ ಪ್ರಕ್ರಿಯೆ ದಿನಾಂಕ ಪ್ರಕಟ

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ನೆನೆಗುದ್ದಿಗೆ ಬಿದ್ದಿದ್ದ 2020ನೇ ಸಾಲಿನ ಚಾಲಕ ಕಂ ನಿರ್ವಾಹಕ ಹುದ್ದೆಗಳ ಭರ್ತಿಗೆ ಸಂಬಂಧಪಟ್ಟಂತೆ ಇದೀಗ ಗುಡ್‌ನ್ಯೂಸ್‌ವೊಂದು ಬಂದಿದೆ. ಹೌದು, 2020ನೇ ಸಾಲಿನ ಚಾಲಕ ಕಂ ನಿರ್ವಾಹಕ ಹುದ್ದೆಗೆ ಸಂಬಂಧ ಪಟ್ಟಂತೆ ಸರಕಾರ ನೀಡಿರುವ ಆದೇಶದ ಪ್ರಕಾರ 2000 ಹುದ್ದೆಗಳಿಗೆ ಸೀಮಿತಗೊಳಿಸಿ ಭರ್ತಿ ಮಾಡಲು ಕ್ರಮ ವಹಿಸಲಾಗುತ್ತಿದೆ. ಮೀಸಲಾತಿ ನಿಯಮಗಳ ಅನ್ವಯ ವರ್ಗವಾರು ಹುದ್ದೆಗಳ ಸಂಖ್ಯೆಯನ್ನು ಪರಿಷ್ಕರಿಸಿ ನಿಗಮದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಾಗಿದೆ.

    ದಿನಾಂಕ 03-03-2024 ರಿಂದ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ksrtc.karnataka.gov.in ನಲ್ಲಿ ಕರೆಪತ್ರವನ್ನು ಡೌನ್‌ಲೋಡ್‌ ಮಾಡಿ, ನಿಗಿದಿತ ದಿನಾಂಕದಂದು ಮೂಲ ದಾಖಲಾತಿ ಜೊತೆಗೆ ಸಮಯಕ್ಕೆ ಹಾಜರಾಗಲು ಸೂಚಿಸಲಾಗಿದೆ.

    2020ರ ಫೆಬ್ರವರಿಯಲ್ಲಿ ಕೆಎಸ್‌ಆರ್‌ಟಿಸಿ ಒಟ್ಟು 3745 ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿತ್ತು. ಚಾಲಕ ಹುದ್ದೆಗಳಿಗೆ 1200, ಚಾಲಕ ಕಂ ನಿರ್ವಾಹಕ 2545 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು.

    ಪ್ರಸ್ತುತ 2000 ಹುದ್ದೆಗಳಿಗೆ ಮಾತ್ರ ಆಯ್ಕೆ ಪ್ರಕ್ರಿಯೆ ಮುಂದುವರೆಸಿಲು ನಿರ್ಧಾರ ಕೈಗೊಳ್ಳಲಾಗಿದೆ.

    ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಈ ಕೆಳಗೆ ವಿಶೇಷ ಸೂಚನೆಗಳನ್ನು ನೀಡಲಾಗಿದೆ.
    ಪ್ರಸ್ತುತ ಅಭ್ಯರ್ಥಿಗಳ ಮೂಲ ದಾಖಲಾತಿ/ದೇಹದಾರ್ಢ್ಯತೆ ಪರಿಶೀಲನೆ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ನಡೆಸಲಾಗುವುದು. ಇದಕ್ಕಾಗಿ ಪ್ರತ್ಯೇಕ ದಿನಾಂಕ/ಸ್ಥಳವನ್ನು ಕೂಡಾ ಹೇಳಲಾಗುವುದು. ಈ ಹುದ್ದೆಗೆ ಆಯ್ಕೆಯು ಅಭ್ಯರ್ಥಿಗಳು ತಾವು ಚಾಲನಾ ವೃತ್ತಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್‌, ಮೀಸಲಾತಿ ನಿಯಮಗಳಿಗೆ ಅನುಗುಣವಾಗಿ ನಡೆಯುತ್ತದೆ. ಆಯ್ಕೆಯ ಪ್ರಕ್ರಿಯೆಯಲ್ಲಿ ಯಾರ ಹಸ್ತಕ್ಷೇಪ ನಡೆಯುವುದಿಲ್ಲ, ಹಾಗಾಗಿ ಅಭ್ಯರ್ಥಿಗಳು ಶಿಫಾರಸ್ಸು, ಮಧ್ಯವರ್ತಿಗಳ ಮೋಸಕ್ಕೆ ಒಳಗಾಗಬಾರದೆಂದು ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

    ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆ: ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಮೇಲೆ ತಿಳಿಸಿದ ಹುದ್ದೆಗಳಿಗೆ ಅಭ್ಯರ್ಥಿಗಳು ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಸಿ 500 ಅಂಕಗಳ ಅಂಕಪಟ್ಟಿಯನ್ನು (ಮುಕ್ತ ವಿವಿಯಿಂದ ಪಡೆದಿರುವುದು) ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. HTV ಚಾಲನಾ ಪರವಾನಿಗೆ ಹೊಂದಿ ಕನಿಷ್ಠ ಎರಡು ವರ್ಷದ್ದಾಗಿರಬೇಕು. ಭಾರೀ ವಾಹನ ಚಾಲನಾ ಪರವಾನಿಗೆ ಹಾಗೂ ಕರ್ನಾಟಕ ಪಿಎಸ್‌ವಿ ಬ್ಯಾಡ್ಜ್‌ ಹೊಂದಿರುವುದು ಅಗತ್ಯ.

    ಚಾಲಕ ಕಂ ಕಂಡಕ್ಟರ್‌ ಹುದ್ದೆಗೆ ಇರಬೇಕಾದ ಅರ್ಹತೆಗಳು:
    ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. HTV ಚಾಲನಾ ಪರವಾನಿಗೆ ಹೊಂದಿ ಕನಿಷ್ಠ ಎರಡು ವರ್ಷಗಳಾಗಿರಬೇಕು. ಚಾಲ್ತಿಯಲ್ಲಿರುವ ನಿರ್ವಾಹಕ ಪರವಾನಗಿ ಮತ್ತು ಕರ್ನಾಟಕ ಬ್ಯಾಡ್ಜ್‌ ಹೊಂದಿರುವುದು ಅವಶ್ಯಕ.

    ವೇತನ;
    ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಎರಡು ವರ್ಷಗಳ ಕಾಲ ಕೆಲಸದ ಮೇಲೆ ತರಬೇತಿ ನೀಡಲಾಗುವುದು. ಈ ಸಮಯದಲ್ಲಿ ಚಾಲಕ ಹುದ್ದೆಗೆ ಮಾಸಿಕ ರೂ.10000, ಚಾಲಕ ಕಂ ನಿರ್ವಾಹಕ ಹುದ್ದೆಗೆ ರೂ.9100 ರೂ ನೀಡಲಾಗುವುದು.
    ಎರಡು ವರ್ಷಗಳ ನಂತರ ನಿರ್ದಿಷ್ಟ ಘಟಕಗಳಿಗೆ ಅಭ್ಯರ್ಥಿಗಳನ್ನು ನೇಮಿಸಲಾಗುವುದು. ಹಾಗೂ ಅಭ್ಯರ್ಥಿಗಳ ವೇತನ 12400-170-12740-14240-320-15840-420-16680-530-18270-640-19550 ರಷ್ಟು ಇರುತ್ತದೆ.

    ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಮೂಲ ದಾಖಲಾತಿಗಳ ಪರಿಶೀಲನೆ/ದೈಹಿಕ ಅರ್ಹತೆಯ ಪರಿಶೀಲನೆ/ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗಲು ಅಡ್ಮಿಟ್‌ ಕಾರ್ಡ್‌ ನೀಡಲಾಗುವುದು. ಇಲ್ಲಿ ದಿನಾಂಕ, ಸ್ಥಳ, ದಾಖಲೆಗಳ ಕುರಿತು ಮಾಹಿತಿ ಬರುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದವರಿಗೆ ಒಟ್ಟು 50 ಅಂಕ, ತಲಾ 25 ಅಂಕಗಳಂತೆ ಎರಡು ಬಾರಿ ಚಾಲನಾ ಸಾಮರ್ಥ್ಯ ವೃತ್ತಿ ಪರೀಕ್ಷೆಯನ್ನು ಗಣಕೀಕೃತ ಟ್ರ್ಯಾಕ್‌ನಲ್ಲಿ ಮಾಡಲಾಗುತ್ತದೆ. ಈ ಪರೀಕ್ಷೆಯಲ್ಲಿ 25 ಅಂಕಗಳನ್ನು ಪಡೆದ ಅಭ್ಯರ್ಥಿಗಳಿಗೆ ಮಾತ್ರ ಆಯ್ಕೆಗೆ ಅವಕಾಶ ನೀಡಲಾಗುವುದು. ಚಾಲನಾ ವೃತ್ತಿ ಪರೀಕ್ಷೆಯ ಐದು ವಿವಿಧ ಪರೀಕ್ಷೆಗಳ ಪೈಕಿ ಕನಿಷ್ಠ ಅಂಕಗಳನ್ನು ಗಳಿಸಿದವರು ಮಾತ್ರ ಮುಂದಿನ ಪರೀಕ್ಷೆಗೆ ಹಾಜರಾಗಲು ಅರ್ಹರಾಗುತ್ತಾರೆ.

  • SSC ಇಂದ 2000 ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಹೆಚ್ಚಿನ ಮಾಹಿತಿ ಇಲ್ಲಿದೆ

    SSC ಇಂದ 2000 ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಹೆಚ್ಚಿನ ಮಾಹಿತಿ ಇಲ್ಲಿದೆ

    SSC Jobs 2024: ಸಿಬ್ಬಂದಿ ನೇಮಕಾತಿ ಆಯೋಗವು ಫೇಸ್‌ 12 ಸೆಲೆಕ್ಷನ್‌ ಪೋಸ್ಟ್‌ಗಳ ನೇಮಕಾತಿ ಪರೀಕ್ಷೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಎಸ್‌ಎಸ್‌ಸಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 2049 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-03-2024 ರ ರಾತ್ರಿ 11 ಗಂಟೆಯವರೆಗೆ
    ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 19-03-2024
    ಅರ್ಜಿ ತಿದ್ದುಪಡಿ ದಿನಾಂಕ: ಮಾರ್ಚ್‌ 23,24 ರ ರಾತ್ರಿ 11 ಗಂಟೆಯವರೆಗೆ ನಡೆಯಲಿದೆ.
    ಪರೀಕ್ಷೆ ದಿನಾಂಕ (ಕಂಪ್ಯೂಟರ್‌): ಮೇ.6-8,2024 (ಸಂಭಾವ್ಯ)

    ಹುದ್ದೆಗಳ ವಿವರ
    ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ?
    ಮಲ್ಟಿಟಾಸ್ಕಿಂಗ್‌ ಸ್ಟಾಫ್‌, ರಿಹ್ಯಾಬಿಲಿಟೇಶನ್‌ ಕೌನ್ಸೆಲರ್‌, ಕಂಸರ್‌ವೇಶನ್‌ ಅಸಿಸ್ಟಂಟ್‌, ಟೆಕ್ನಿಕಲ್‌ ಅಸಿಸ್ಟಂಟ್‌, ಟೆಕ್ನಿಕಲ್‌ ಸೂಪರಿಂಟೆಂಡೆಂಟ್‌, ಜೂನಿಯರ್‌ ಸೀಡ್‌ ಅನಾಲಿಸ್ಟ್‌, ಅಕೌಂಟೆಂಟ್‌, ಹೆಡ್‌ ಕ್ಲರ್ಕ್‌, ಸ್ಟಾಫ್‌ ಕಾರ್‌ ಡ್ರೈವರ್‌, ಗರ್ಲ್ಸ್‌ ಕೆಡೆಟ್‌ ಇನ್‌ಸ್ಟ್ರಕ್ಟರ್‌, ಮೆಕ್ಯಾನಿಕಲ್‌ ವಿಭಾಗ ಚಾರ್ಜ್‌ಮನ್‌, ಸೈಂಟಿಫಿಕ್‌ ಅಸಿಸ್ಟೆಂಟ್‌, ರಿಸರ್ಚ್‌ ಇನ್ವೆಸ್ಟಿಗೇಟರ್‌, ಜೂನಿಯರ್‌ ಕಂಪ್ಯೂಟರ್‌ ಅಪರೇಟರ್‌, ಸಬ್‌ ಎಡಿಟರ್‌ (ಹಿಂದಿ), ಸಬ್‌ ಎಡಿಟರ್‌ (ಇಂಗ್ಲೀಷ್‌), ಸೀನಿಯರ್‌ ಸೈಂಟಿಫಿಕ್‌ ಅಸಿಸ್ಟೆಂಟ್‌ (ಬಯೋಲಜಿ), ಇತರೆ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ: ಮೇಲೆ ನೀಡಲಾದ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.

    ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.2000 ರಿಂದ ರೂ.40000 ವರೆಗೆ ವೇತನವಿರುತ್ತದೆ.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಮತ್ತು ಆಫ್‌ಲೈನ್‌ ಚಲನ್‌ ಮೂಲಕ ಪಾವತಿಸಬೇಕು. ಎಸ್‌ಸಿ.ಎಸ್ಟಿ,ಮಹಿಳಾ ಅಭ್ಯರ್ಥಿಗಳು,PwBD ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

    ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 42 ವರ್ಷ ವಯಸ್ಸಾಗಿರಬೇಕು.

    ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯೂಡಿ (ಒಬಿಸಿ)ಅಭ್ಯರ್ಥಿಗಳಿಗೆ 13 ವರ್ಷ, ಪಿಡಬ್ಲೂಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅಭ್ಯರ್ಥಿಗಳನ್ನು ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌, ದಾಖಲೆಗಳ ಪರಿಶೀಲನೆ ಮೂಲಕ ಮೇಲ್ಕಂಡ ಹುದ್ದೆಗೆ ಆಯ್ಕೆ ಮಾಡಲಾಗುವುದು.

    ಪರೀಕ್ಷೆಯ ಕೇಂದ್ರಗಳು ಎಲ್ಲೆಲ್ಲಿದೆ?
    ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಕವರಟ್ಟಿ, ಬೆಳಗಾವಿ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

    ಅರ್ಜಿ ಸಲ್ಲಿಸುವ ವಿಧಾನ;
    ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು https://ssc.gov.in ಗೆ ಭೇಟಿ ನೀಡಬೇಕು, ನಂತರದ ಪುಟದಲ್ಲಿ ಕಾಣುವ Login or Register ಎಂಬಲ್ಲಿ ಕ್ಲಿಕ್‌ ಮಾಡಬೇಕು. ಈ ಲಿಂಕ್‌ ಕ್ಲಿಕ್‌ ಮಾಡಿದಾಗ ಇನ್ನೊಂದು ಪೇಜ್‌ ಬರುತ್ತದೆ, ಅಲ್ಲಿ ನಿಮ್ಮ ವಿವರಗಳನ್ನು ನೀಡಿ ರಿಜಿಸ್ಟ್ರೇಷನ್‌ ಮಾಡ್ಕೊಳ್ಳಿ. ಆಮೇಲೆ ಇನ್ನೊಮ್ಮೆ ಲಾಗಿನ್‌ ಆಗಿ ಎಲ್ಲಾ ಮಾಹಿತಿ, ದಾಖಲೆ ಸಹಿತ ನೀಡಿ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ