Author: sarkari

  • KAS Jobs 2024: ಕೆಪಿಎಸ್‌ಸಿ ಇಂದ ಕೆಎಎಸ್‌ ಹುದ್ದೆಗಳ ನೇಮಕ; 384 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

    KAS Jobs 2024: ಕೆಪಿಎಸ್‌ಸಿ ಇಂದ ಕೆಎಎಸ್‌ ಹುದ್ದೆಗಳ ನೇಮಕ; 384 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

    Karnataka KAS Jobs 2024: ಕರ್ನಾಟಕ ಗೆಜೆಟೆಡ್‌ ಪ್ರೊಬೆಷನರ್‌ ನಿಯಮಗಳಡಿಯಲ್ಲಿ ಗೆಜೆಟೆಡ್‌ ಪ್ರೊಬೆಷನರ್‌ 2023-24 ನೇ ಸಾಲಿನ ಹುದ್ದೆಗಳನ್ನು ಭರ್ತಿ ಮಾಡಲು ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಒಟ್ಟು 384 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಆರಂಭಿಕ ದಿನಾಂಕ; 04-03-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2024
    ಪೂರ್ವಭಾವಿ ಪರೀಕ್ಷಾ ದಿನಾಂಕ (ತಾತ್ಕಾಲಿಕ) : 05-05-2024

    ಹುದ್ದೆಗಳ ವಿವರ;
    ಹುದ್ದೆ ಹೆಸರು: ಗೆಜೆಟೆಡ್‌ ಪ್ರೊಬೆಷನರ್‌ (ಕೆಎಎಸ್‌ ಹುದ್ದೆಗಳು) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ:
    ಗ್ರೂಪ್‌ ಎ ಹುದ್ದೆಗಳು: 159
    ಗ್ರೂಪ್‌ ಬಿ ಹುದ್ದೆಗಳು: 225

    ವಿದ್ಯಾರ್ಹತೆ: ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
    ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷಗಳು, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 41 ವರ್ಷಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷಗಳು

    ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.600, ಪ್ರವರ್ಗ 2(ಎ),2(ಬಿ),3(ಎ),3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ನೆಟ್‌ಬ್ಯಾಂಕಿಂಗ್‌, ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌,ಯುಪಿಐ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
    ಹೊಸದಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅರ್ಜಿದಾರರು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ https://kpsconline.karnataka.gov.in ಗೆ ಭೇಟಿ ನೀಡಬೇಕು ಮತ್ತು ತಮ್ಮನ್ನು ನೋಂದಾಯಿಸಿಕೊಳ್ಳಲು New Registration ಲಿಂಕ್‌ಅನ್ನು ಕ್ಲಿಕ್ ಮಾಡಬೇಕು.
    ನೋಂದಣಿ ಮತ್ತು ಲಾಗಿನ್‌ ರುಜುವಾತುಗಳನ್ನು ಮಾಡಲು ಇಮೇಲ್‌ ಐಡಿ ಮತ್ತು ಮೊಬೈಲ್‌ ಸಂಖ್ಯೆಯನ್ನು ಇಟ್ಟುಕೊಳ್ಳಬೇಕು.
    ಒಮ್ಮೆ ನೋಂದಾಯಿಸಿದ ಮತ್ತು ಲಾಗಿನ್‌ ಆದ ನಂತರ ಅರ್ಜಿದಾರರ ವಿವರಗಳ ನೋಂದಣಿ ಕ್ಲಿಕ್‌ ಮಾಡಿ ಅಲ್ಲಿ ಕೇಳಲಾದ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಬೇಕು.
    ಅಭ್ಯರ್ಥಿಗಳು ಒಮ್ಮೆ ಮಾತ್ರ ಅರ್ಜಿ ಭರ್ತಿ ಮಾಡಬೇಕಾಗುತ್ತದೆ. ಹಾಗಾಗಿ ನಿಮ್ಮ user id ಮತ್ತು passoword ಗಳನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು.
    ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಎಲ್ಲಾ ವಿವರಗಳು ಸರಿಯಾಗಿದೆಯೇ ಎಂದು ಪರಿಶೀಲಿಸಬೇಕು. ಅನಂತರ ಸಲ್ಲಿಸು ಬಟನ್‌ ಕ್ಲಿಕ್‌ ಮಾಡಬೇಕು. ಸಲ್ಲಿಸಿದ ನಂತರ ವಿವರಗಳನ್ನು ತಪ್ಪಾಗಿ ಸಲ್ಲಿಸಿದ್ದಲ್ಲಿ ಸರಿಪಡಿಸಿಕೊಳ್ಳಲು ಆಯೋಗಕ್ಕೆ ಪತ್ರ ವ್ಯವಹಾರ ಅಥವಾ ಇ-ಮೇಲ್‌ ಮೂಲಕ ಕಳುಹಿಸುವ ಕೋರಿಕೆಯನ್ನು ಪರಿಗಣಿಸಲಾಗುವುದಿಲ್ಲ.

    ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಭರ್ತಿ ಮಾಡಿ, ಭಾವಚಿತ್ರ./ಸಹಿ/ವಯೋಮಿತಿ/ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಅಪ್ಲೋಡ್‌ ಮಾಡಿದ ನಂತರ ಶುಲ್ಕವನ್ನು ನೆಟ್‌ಬ್ಯಾಂಕಿಂಗ್‌/ಡೆಬಿಟ್‌ ಕಾರ್ಡ್‌/ಕ್ರೆಡಿಟ್‌ ಕಾರ್ಡ್‌/ಯುಪಿಐ ಮೂಲಕ ಸಂದಾಯ ಮಾಡಬಹುದು.

    ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು/ಭಾವಚಿತ್ರ/ಸಹಿಯನ್ನು ಅಪ್ಲೋಡ್‌ ಮಾಡದೇ ಇರುವ ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್‌ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತೊಂದರೆ ಉಂಟಾದಲ್ಲಿ ಈ ಕೆಳಕಂಡ ಹೆಲ್ಪ್‌ಲೈನ್‌ ನಂಬರ್‌ ಅನ್ನು ಸಂಪರ್ಕಿಸಲು ಸೂಚಿಸಲಾಗಿದೆ. 080-30574957/30574901

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • SSA Jobs: ಶಿಕ್ಷಕ ವೃತ್ತಿಯ ಹುಡುಕಾಟದಲ್ಲಿದ್ದೀರೇ? ಇಲ್ಲಿದೆ ಭರ್ಜರಿ ಉದ್ಯೋಗಾವಕಾಶ; 240061 ಹುದ್ದೆಗಳ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ

    SSA Jobs: ಶಿಕ್ಷಕ ವೃತ್ತಿಯ ಹುಡುಕಾಟದಲ್ಲಿದ್ದೀರೇ? ಇಲ್ಲಿದೆ ಭರ್ಜರಿ ಉದ್ಯೋಗಾವಕಾಶ; 240061 ಹುದ್ದೆಗಳ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ

    SSA Recruitment 2024: ಸರ್ವಶಿಕ್ಷಣ ಅಭಿಯಾನವು (SSA) ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 240061 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಶಿಕ್ಷಕ, ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗ ಹುಡುಕುವವರು ಈ ಉದ್ಯೋಗಾದವಕಾಶವನ್ನು ಉಪಯೋಗಿಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು 25-ಫೆಬ್ರವರಿ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು 1st March 2024 ವರೆಗೆ ಅರ್ಜಿ ಸಲ್ಲಿಸಬಹುದು.

    ಸಂಸ್ಥೆಯ ಹೆಸರು: ಸರ್ವ ಶಿಕ್ಷಾ ಅಭಿಯಾನ (SSA)
    ಹುದ್ದೆಯ ಹೆಸರು: ಶಿಕ್ಷಕ, ಪ್ಯೂನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 240061 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಹುದ್ದೆ ಹೆಸರು ಮತ್ತು ಹುದ್ದೆ ಸಂಖ್ಯೆ:
    ಪ್ರೈಮರಿ ಟೀಚರ್‌ – 98305
    ಲ್ಯಾಬ್‌ ಟೆಕ್ನಿಷಿಯನ್‌-18650
    ಪ್ಯೂನ್‌-24300
    ಕಾರ್ಯಾಲಯ ಸ್ಟಾಫ್‌ -25964
    ಕಂಪ್ಯೂಟರ್‌ ಟೀಚರ್‌ – 72842

    ವಿದ್ಯಾರ್ಹತೆ: ಪ್ರೈಮರಿ ಟೀಚರ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12th, ಗ್ರಾಜ್ಯುಯೇಷನ್‌ ಪೂರೈಸಿರಬೇಕು.
    ಲ್ಯಾಬ್‌ ಟೆಕ್ನಿಷಿಯನ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪಾಸಾಗಿರಬೇಕು.
    ಪ್ಯೂನ್‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 8 ನೇ ತರಗತಿ ಪಾಸಾಗಿದ್ದರೆ ಸಾಕು.
    ಕಾರ್ಯಾಲಯ ಸ್ಟಾಫ್‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10th,12th ಪಾಸಾಗಿರಬೇಕು.
    ಕಂಪ್ಯೂಟರ್‌ ಟೀಚರ್‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12th, ಡಿಪ್ಲೋಮಾ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಪ್ರೈಮರಿ ಟೀಚರ್‌ – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷ-45 ವರ್ಷ ಆಗಿರಬೇಕು.
    ಲ್ಯಾಬ್‌ ಟೆಕ್ನಿಷಿಯನ್‌- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿಯು ಕನಿಷ್ಠ 18ವರ್ಷ ಹಾಗೂ ಗರಿಷ್ಠ 45 ವರ್ಷ ಆಗಿರಬೇಕು.
    ಪ್ಯೂನ್‌- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.
    ಕಾರ್ಯಾಲಯ ಸ್ಟಾಫ್‌ -ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ 42 ವರ್ಷ ವಯಸ್ಸಾಗಿರಬೇಕು.
    ಕಂಪ್ಯೂಟರ್‌ ಟೀಚರ್‌ – ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಗರಿಷ್ಠ 40 ವರ್ಷ ಆಗಿರಬೇಕು.

    ಅರ್ಜಿ ಶುಲ್ಕ: ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ರೂ.980 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳು ಆನ್‌ಲೈನ್‌ ಪರೀಕ್ಷೆ, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ:
    ಪ್ರೈಮರಿ ಟೀಚರ್-‌ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.43,300 ವೇತನವಿರಲಿದೆ.
    ಲ್ಯಾಬ್‌ ಟೆಕ್ನಿಷಿಯನ್‌ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.39,500 ವೇತನ ದೊರಕಲಿದೆ
    ಪ್ಯೂನ್‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.22,700 ವೇತನ ದೊರಕಲಿದೆ.
    ಕಾರ್ಯಾಲಯ ಸ್ಟಾಫ್‌ ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾಸಿಕ ರೂ.33,500 ವೇತನ ಸಿಗಲಿದೆ.
    ಕಂಪ್ಯೂಟರ್‌ ಟೀಚರ್‌ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.37,700 ವೇತನ ಸಿಗಲಿದೆ.

  • KEA BMTC Conductor Job 2024: 2500 ಬಿಎಂಟಿಸಿ ಕಂಡಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಲಿಂಕ್‌ ಇಲ್ಲಿದೆ

    KEA BMTC Conductor Job 2024: 2500 ಬಿಎಂಟಿಸಿ ಕಂಡಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಲಿಂಕ್‌ ಇಲ್ಲಿದೆ

    KEA BMTC Conductor Job 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಧಿಸೂಚನೆಯಲ್ಲಿ ತಿದ್ದುಪಡಿಗಳ ಅನುಸಾರ ಮಿಕ್ಕುಳಿದ ಹಾಗೂ ಸ್ಥಳೀಯ ಈ ಎರಡೂ ವೃಂದಗಳಿಗೆ ಪ್ರತ್ಯೇಕವಾಗಿ ಮೀಸಲಿರುವ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 2500 ಹುದ್ದೆಗಳು ಖಾಲಿ ಇದ್ದು, ನಿರ್ವಾಹಕ (ಕಂಡಕ್ಟರ್‌) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 10-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2024
    ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ-13-04-2024

    ಒಟ್ಟು ಹುದ್ದೆಗಳು
    ಮಿಕ್ಕುಳಿದ ವೃಂದ-2286 ಹುದ್ದೆಗಳು
    ಸ್ಥಳೀಯ ವೃಂದ-214 ಹುದ್ದೆಗಳು
    ಒಟ್ಟು 2500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ: ಪಿಯುಸಿ (ಆರ್ಟ್ಸ್‌/ಕಾಮರ್ಸ್‌/ ಸೈನ್ಸ್‌) ನಲ್ಲಿ ತೇರ್ಗಡೆ ಅಥವಾ 10+2 ಐ.ಸಿ.ಎಸ್‌.ಇ/ಸಿ.ಬಿ.ಎಸ್‌.ಇ ಉತ್ತೀರ್ಣರಾಗಿರತಕ್ಕದ್ದು. ಅಥವಾ ತತ್ಸಮಾನ ವಿದ್ಯಾರ್ಹತೆ ಅಂದರೆ, ತಾಂತ್ರಿಕ ಶಿಕ್ಷಣ ಇಲಾಖೆಯಿಂದ 03 ವರ್ಷಗಳ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರತಕ್ಕದ್ದು.

    ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಕನಿಷ್ಠ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
    ಸಾಮಾನ್ಯ ವರ್ಗ ಕನಿಷ್ಠ 18 ವರ್ಷಗಳು, 35 ವರ್ಷ ಗರಿಷ್ಠ, 2ಎ/2ಬಿ/3ಎ/3ಬಿ 18 ವರ್ಷ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು, ಹಾಗೂ 38 ವರ್ಷ ಗರಿಷ್ಠ ವಯೋಮಿತಿಯನ್ನು ನೀಡಲಾಗಿದೆ. ಪ.ಜಾ/ಪ.ಪಂ/ಪ್ರವರ್ಗ-1 ಇವರಿಗೆ 18 ವರ್ಷ ಕನಿಷ್ಠ ವಯೋಮಿತಿ, 40 ವರ್ಷ ಗರಿಷ್ಠ ವಯೋಮಿತಿಯನ್ನು ಮೀರಬಾರದು. ಮಾಜಿ ಸೈನಿಕ/ಇಲಾಖಾ ಅಭ್ಯರ್ಥಿ ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.

    ತರಬೇತಿ ಅವಧಿ ಭತ್ಯೆ ಮತ್ತು ವೇತನ ಶ್ರೇಣಿ: ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷ ಕಾಲ ವೃತ್ತಿ ತರಬೇತಿಯಾಗಿ ನಿಯೋಜನೆ ಮಾಡಲಾಗುವುದು. ಈ ತರಬೇತಿ ಅವಧಿಯಲ್ಲಿ ಮಾಸಿಕ ಸಮಗ್ರ ತರಬೇತಿ ಭತ್ಯೆಯಾಗಿ 9,100ರೂ.ನ್ನು ನೀಡಲಾಗುವುದು. ಆಯ್ಕೆಗೊಂಡ ಅಭ್ಯರ್ಥಿಗಳು ಒಂದು ವರ್ಷದ ವೃತ್ತಿ ತರಬೇತಿ ಪೂರೈಸಿದ ನಂತರ ಎರಡು ವರ್ಷಗಳ ಅವಧಿಗೆ ನಿಯಮಾನುಸಾರ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಯನ್ನು ನೇಮಕ ಮಾಡಲಾಗುವುದು. ವೇತನ ಶ್ರೇಣಿ ಈ ರೀತಿ ಇರಲಿದೆ.
    18660-230-19120-280-20240-410-22700-520-25300

    ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ-2ಎ/2ಬಿ/3ಎ/3ಬಿ) ಅಭ್ಯರ್ಥಿಗಳು ರೂ.750 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.500 ಅರ್ಜಿ ಶುಲ್ಕ ವಿಧಿಸಲಾಗಿದೆ.

    ಪರೀಕ್ಷಾ ಕೇಂದ್ರಗಳು: ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೀದರ್‌, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿಯಲ್ಲಿ ನಡೆಸಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

  • Koppala Jobs: ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    Koppala Jobs: ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    District Tuberculosis Elimination Office Koppal Recruitment 2024: ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಛೇರಿ ಕೊಪ್ಪಳ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ (NHM) ಒಟ್ಟು 02 ಹುದ್ದೆಗಳು ಖಾಲಿ ಇದೆ. ಲ್ಯಾಬ್ ಟೆಕ್ನಿಷಿಯನ್, ಕ್ಷಯರೋಗ ಆರೋಗ್ಯ ಸಂದರ್ಶಕರ ಖಾಲಿ ಹುದ್ದೆಗಳಿದ್ದು, ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 14-Mar-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-03-2024

    ಹುದ್ದೆಯ ವಿವರಗಳು;
    ಸಂಸ್ಥೆಯ ಹೆಸರು: ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಛೇರಿ ಕೊಪ್ಪಳ (ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಛೇರಿ ಕೊಪ್ಪಳ)
    ಹುದ್ದೆಗಳ ಸಂಖ್ಯೆ: ಒಟ್ಟು ಹುದ್ದೆ 2
    ಹುದ್ದೆಯ ಹೆಸರು: ಲ್ಯಾಬ್ ಟೆಕ್ನಿಷಿಯನ್, ಕ್ಷಯರೋಗ ಆರೋಗ್ಯ ವಿಸಿಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
    ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.14000-17850/-ರೂ. ವೇತನ ನೀಡಲಾಗುವುದು.

    ಹುದ್ದೆ: ಟ್ಯೂಬರ್‌ಕ್ಯೂಲೊಸಿಸ್‌ ಹೆಲ್ತ್‌ ವಿಸಿಟರ್‌ – 01 ಹುದ್ದೆ
    ಲ್ಯಾಬ್‌ ಟೆಕ್ನಿಷಿಯನ್‌ – 01 ಹುದ್ದೆ

    ವಿದ್ಯಾರ್ಹತೆ: ಟ್ಯೂಬರ್‌ಕ್ಯುಲೊಸಿಸ್‌ ಹೆಲ್ತ್‌ ವಿಸಿಟರ್‌ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 12th, ಗ್ರಾಜ್ಯುಯೇಷನ್‌ ಹೊಂದಿರಬೇಕು.
    ಲ್ಯಾಬ್‌ ಟೆಕ್ನಿಷಿಯನ್‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12th, ಡಿಪ್ಲೋಮಾ ಇನ್‌ ಎಂಎಲ್‌ಟಿ ಪಡೆದಿರಬೇಕು.

    ವಯೋಮಿತಿ: ಅಭ್ಯರ್ಥಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು. ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಛೇರಿ ಕೊಪ್ಪಳದ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

    ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

    ವೇತನ: ಟ್ಯೂಬರ್‌ಕ್ಯುಲೋಸಿಸ್‌ ಹೆಲ್ತ್‌ ವಿಸಿಟರ್‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,850/- ವೇತನ ಸಿಗಲಿದೆ. ಲ್ಯಾಬ್‌ ಟೆಕ್ನಿಷಿಯನ್‌ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.14,000/- ವೇತನ ಸಿಗಲಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

  • RPF Recruitment 20204: ಎಸ್‌ಐ ಮತ್ತು ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ, 4500 ಕ್ಕೂ ಹೆಚ್ಚು ಹುದ್ದೆ, ಹೆಚ್ಚಿನ ಮಾಹಿತಿ ಇಲ್ಲಿದೆ

    RPF Recruitment 20204: ಎಸ್‌ಐ ಮತ್ತು ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ, 4500 ಕ್ಕೂ ಹೆಚ್ಚು ಹುದ್ದೆ, ಹೆಚ್ಚಿನ ಮಾಹಿತಿ ಇಲ್ಲಿದೆ

    RPF Recruitment 2024: ಆರ್‌ಪಿಎಫ್ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆರ್‌ಪಿಎಫ್‌ ನಲ್ಲಿ ಖಾಲಿ ಇರುವ ಸಬ್ ಇನ್‌ಸ್ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲಿಚ್ಛಿಸುವವರು ಈ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು 14-ಮೇ-2024 ರಂದು ಅಥವಾ ಮೊದಲು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-04-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2024

    ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ;
    ಸಂಸ್ಥೆಯ ಹೆಸರು: ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF)
    ಹುದ್ದೆಗಳ ಸಂಖ್ಯೆ: ಒಟ್ಟು 4660 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಯ ಹೆಸರು: ರೈಲ್ವೇ ಪ್ರೊಟೆಕ್ಷನ್‌ ಫೋರ್ಸ್‌ (RPF) ನಲ್ಲಿ ಸಬ್ ಇನ್ಸ್‌ಪೆಕ್ಟರ್, ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವೇತನ: ಸಬ್‌ ಇನ್ಸ್‌ಪೆಕ್ಟರ್‌, ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21700-ರೂ.35400/- ವೇತನ ದೊರಕಲಿದೆ.

    ವಿದ್ಯಾರ್ಹತೆ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜ್ಯುಯೇಷನ್‌ (ಪದವಿ) ಹೊಂದಿರಬೇಕು. ಕಾನ್‌ಸ್ಟೇಬಲ್‌ ಹುದ್ದಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ವರ್ಷ, ಹಾಗೂ ಗರಿಷ್ಠ 28ವರ್ಷ ಮೀರಿರಬಾರದು. ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ಕನಿಷ್ಠ 18 ವರ್ಷ, ಗರಿಷ್ಠ 28 ವರ್ಷ ಮೀರಿರಬಾರದು. ಉಳಿದಂತೆ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ಸಂಸ್ಥೆಯ ನಿಯಮಾನುಸಾರ ನೀಡಲಾಗುತ್ತದೆ.

    ಅರ್ಜಿ ಶುಲ್ಕ: ಎಸ್‌ಸಿ/ಎಸ್‌ಟಿ/ಎಕ್ಸ್‌ ಸರ್ವಿಸ್‌ಮೆನ್/ಮಹಿಳೆಯರು/ ಮೈನಾರಿಟೀಸ್/ಇಬಿಸಿ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಉಳಿದ ಎಲ್ಲಾ ಅಭ್ಯರ್ಥಿಗಳು ರೂ.500 ಅರ್ಜಿ ಶುಲ್ಕನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾತ್ರ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್‌ ಪರೀಕ್ಷೆ, ಫಿಸಿಕಲ್‌ ಎಫಿಶಿಯೆನ್ಸಿ ಟೆಸ್ಟ್‌ (ದೈಹಿಕ ದಕ್ಷತೆ ಪರೀಕ್ಷೆ) ಮತ್ತು ಫಿಸಿಕಲ್‌ ಮೆಷರ್‌ಮೆಂಟ್‌ ಟೆಸ್ಟ್‌ (ದೈಹಿಕ ಮಾಪನ ಪರೀಕ್ಷೆ) ಮೂಲಕ ಅಭ್ಯರ್ಥಿಗಳು ಈ ಹುದ್ದೆಗೆ ಆಯ್ಕೆ ಮಾಡಲಾಗುವುದು.

    ವೇತನ: ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35,400/-, ಕಾನ್‌ಸ್ಟೇಬಲ್‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,700/- ವೇತನ ನಿಗದಿಪಡಿಸಲಾಗಿದೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವ ಇದ್ದವರು ದಾಖಲೆಗಳನ್ನು ಅರ್ಜಿ ಸಲ್ಲಿಸುವ ಮೊದಲು ರೆಡಿಮಾಡಿ ಇಡಬೇಕು.
    ಆರ್‌ಪಿಎಫ್ ಸಬ್ ಇನ್‌ಸ್ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೆಳಗೆ ನೀಡಲಾದ ಲಿಂಕ್‌ ಕ್ಲಿಕ್‌ ಮಾಡಿ.
    ನಂತರ ಆರ್‌ಪಿಎಫ್ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
    ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
    ಅರ್ಜಿ ಶುಲ್ಕ ಪಾವತಿ ಮಾಡುವ ಕಾಲಂ ಕ್ಲಿಕ್‌ ಮಾಡಿ.
    ನಂತರ ಎಲ್ಲಾ ವಿವಿರಗಳನ್ನು ಭರ್ತಿ ಮಾಡಿದ ನಂತರ ಸಲ್ಲಿಸು ಬಟನ್‌ ಕ್ಲಿಕ್‌ ಮಾಡಿ.
    ಕೊನೆಯದಾಗಿ ಕ್ಲಿಕ್ ಬಟನ್‌ ಮೇಲೆ ಕ್ಲಿಕ್ ಮಾಡಿ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ


    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ

  • CMMAC Recruitment 2024: ಬೆಂಗಳೂರಲ್ಲಿ ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗಳಲ್ಲಿ ಆಸಕ್ತಿ ಇರುವವರಿಗೆ ಇಲ್ಲಿದೆ ಸುವರ್ಣವಕಾಶ

    CMMAC Recruitment 2024: ಬೆಂಗಳೂರಲ್ಲಿ ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗಳಲ್ಲಿ ಆಸಕ್ತಿ ಇರುವವರಿಗೆ ಇಲ್ಲಿದೆ ಸುವರ್ಣವಕಾಶ

    CMMACS Recruitment 2024: CMMACS ತನ್ನ ಅಧಿಕೃತ ಅಧಿಸೂಚನೆಯಲ್ಲಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 06 ಹುದ್ದೆಗಳಿದ್ದು, ಆಸಕ್ತರು ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಅಸೋಸಿಯೇಟ್-I ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಬಹುದು. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಹುಡುಕುವವರು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಈ ಹುದ್ದೆಗೆ 05-Mar-2024 09:00 (ಬೆಳಗ್ಗೆ) ನೇರ ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ.

    ಪ್ರಮುಖ ದಿನಾಂಕಗಳು;
    ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ: 21-02-2024
    ನೇರ ಸಂದರ್ಶನಕ್ಕೆ ಹಾಜರಾಗಬೇಕಾದ ದಿನಾಂಕ: 05-03-2024 (ಬೆಳಗ್ಗೆ 9.00)

    ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ;
    ಹುದ್ದೆ: ಸೀನಿಯರ್‌ ಪ್ರಾಜೆಕ್ಟ್‌ ಅಸೋಸಿಯೇಟ್‌, ಪ್ರಾಜೆಕ್ಟ್‌ ಅಸೋಸಿಯೇಟ್-I ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ:
    ಸೀನಿಯರ್‌ ಪ್ರಾಜೆಕ್ಟ್‌ ಅಸೋಸಿಯೇಟ್‌-1 ಹುದ್ದೆ
    ಪ್ರಾಜೆಕ್ಟ್‌ ಅಸೋಸಿಯೇಟ್-I – 5 ಹುದ್ದೆ
    ಒಟ್ಟು 06 ಹುದ್ದೆಗಳು

    ವಿದ್ಯಾರ್ಹತೆ: ಸೀನಿಯರ್‌ ಪ್ರಾಜೆಕ್ಟ್‌ ಅಸೋಸಿಯೇಟ್‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಎಸ್ಸಿ, ಎಂಟೆಕ್‌, ಪಿಎಚ್‌ಡಿ ತೇರ್ಗಡೆ ಹೊಂದಿರಬೇಕು
    ಪ್ರಾಜೆಕ್ಟ್‌ ಅಸೋಸಿಯೇಟ್‌-I ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಅಥವಾ ಬಿ.ಟೆಕ್‌, ಎಂಸಿಎ, ಎಂಎಸ್ಸಿ ಮಾಡಿರಬೇಕು.

    ವಯೋಮಿತಿ: ಸೀನಿಯರ್‌ ಪ್ರಾಜೆಕ್ಟ್‌ ಅಸೋಸಿಯೇಟ್‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 40ವರ್ಷ ಮೀರಿರಬಾರದು. ಪ್ರಾಜೆಕ್ಟ್‌ ಅಸೋಸಿಯೇಟ್-I ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತಿಯು ಗರಿಷ್ಠ 35 ವರ್ಷ ಆಗಿರಬೇಕು. ಈ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಯನ್ನು ನಿಯಮಾನುಸಾರ ನೀಡಲಾಗುತ್ತದೆ.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ: ಸೀನಿಯರ್‌ ಪ್ರಾಜೆಕ್ಟ್‌ ಅಸೋಸಿಯೇಟ್‌- ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿ ಮಾಸಿಕ ರೂ.42,000 ವೇತನ ಇರಲಿದೆ.
    ಪ್ರಾಜೆಕ್ಟ್‌ ಅಸೋಸಿಯೇಟ್-I- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ.31,000 ಮಾಸಿಕ ವೇತನ ಸಿಗಲಿದೆ.

    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಇಲ್ಲಿ ನೀಡಲಾದ ವಿಳಾಸದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.
    ವಿಳಾಸ: CSIR-4PI, NAL ಬೇಲೂರು ಕ್ಯಾಂಪಸ್, ವಿಂಡ್ ಟನಲ್ ರಸ್ತೆ, ಬೆಂಗಳೂರು-560037. ಈ ವಿಳಾಸದಲ್ಲಿ ದಿನಾಂಕ 05-ಮಾರ್ಚ್-2024 ಬೆಳಗ್ಗೆ 09:00ಗೆ ನೇರ ಸಂದರ್ಶನ ನಡೆಯಲಿದೆ.

    ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ನೋಟಿಫಿಕೇಶನ್‌ ಕ್ಲಿಕ್‌ ಮಾಡಿ