ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ” ಮೆಟ್ರಿಕ್ -ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ” ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 30-04-2021 ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಕೆಲವೊಂದು ವಿಶ್ವವಿದ್ಯಾನಿಲಯಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೊಂದಣಿ ಸಂಖ್ಯೆಯನ್ನು ಒದಗಿಸಿರದ ಕಾರಣ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ. ಹಾಗೂ ಕೋವಿಡ್ -19 ಸೋಂಕಿನ ಹಿನ್ನೆಲೆಯಲ್ಲಿ ದಿನಾಂಕ 12-05-2021 ರವರೆಗೂ ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 15-05-2021 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2021
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ : www.ssp.postmatric.karnataka.gov.in