ಬಾಗಲಕೋಟೆ ಜಿಲ್ಲಾ ಪಂಚಾಯತಿ ಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 25, 2021
ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ದಿನಾಂಕ: ಮಾರ್ಚ್ 30,2021
ಮೆರಿಟ್ ಪಟ್ಟಿ ಆಕ್ಷೇಪನಾ ಪಟ್ಟಿ ಸಲ್ಲಿಸುವ ದಿನಾಂಕ : ಎಪ್ರಿಲ್ 6, 2021
ಅಂತಿಮ ಆಯ್ಕೆ ಪಟ್ಟಿ ಸಲ್ಲಿಸುವ ದಿನಾಂಕ : ಎಪ್ರಿಲ್ 7,2021
ಬಾಗಲಕೋಟೆ ಜಿಲ್ಲಾ ಪಂಚಾಯತ್ ನಲ್ಲಿ ತಾಂತ್ರಿಕ ಸಹಾಯಕರು ಹುದ್ದೆಗೆ ( ಅರಣ್ಯ/ ಕೃಷಿ/ ತೋಟಗಾರಿಕೆ) ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 17
ವೇತನ: ತಾಂತ್ರಿಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,000/- ವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ : ಬಿ.ಎಸ್ಸಿ, ಎಂ.ಎಸ್ಸಿ, ವಿದ್ಯಾರ್ಹತೆ ಯ ಜೊತೆಗೆ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಕನಿಷ್ಠ 21 ಹಾಗೂ ಗರಿಷ್ಠ 40
ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಕೊಠಡಿ ಸಂಖ್ಯೆ 6 ರಲ್ಲಿ ಅರ್ಜಿ ತೆಗೆದುಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 25, ಸಂಜೆ 5.30 ರೊಳಗೆ ಸಲ್ಲಿಸಬೇಕು. ಆನಂತರ ಬಂದ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.