ಬಾಗಲಕೋಟೆ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿಯ ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ : ಮಹಿಳಾ ಆಯಾ ಕೆಲಸಗಾರರನ್ನು ಗೌರವ ಸಂಭಾವನೆ ಮೇರೆಗೆ ಭರ್ತಿ ಮಾಡಲು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏಳನೇ ತರಗತಿ ತೇರ್ಗಡೆ ಹೊಂದಿರಬೇಕು. ಹುದ್ದೆಗೆ ಸ್ಥಳೀಯರಿಗೆ ಮೊದಲನೆ ಆದ್ಯತೆ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ : ವಿದ್ಯಾರ್ಹತೆ ಹಾಗೂ ಮೌಖಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಯು ತಾತ್ಕಾಲಿಕವಾಗಿದ್ದು, ಮಾಸಿಕ ಮೂರು ಸಾವಿರ ಗೌರವ ಸಂಭಾವನೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 30, 2021 ರೊಳಗಾಗಿ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ, ಜಿಲ್ಲಾ ಗ್ರಂಥಾಲಯ, ನವನಗರ, ಬಾಗಲಕೋಟೆ ಇವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬಾಗಲಕೋಟೆ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು.