ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬಾಗಲಕೋಟೆ ಸಖಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: ಘಟಕ ಆಡಳಿತಾಧಿಕಾರಿ-1, ಪ್ಯಾರಾ ಲೀಗಲ್ ಪರ್ಸನಲ್-1, ವಕೀಲ-2 ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 15,2021(ಸಂಜೆ 5.30ರೊಳಗೆ)
ವಯೋಮಿತಿ : 45 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಉದ್ದೇಶದಿಂದ ಎಂಎಸ್ ಡಬ್ಲ್ಯೂ, ಎಲ್ಎಲ್ಎಂ, ಎಲ್ಎಲ್ ಬಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಖುದ್ದಾಗಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ವಿಳಾಸ: ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾಡಳಿತ ಭವನ,ನವನಗರ,ಬಾಗಲಕೋಟೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.