ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸಲು ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆ: ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಒಂದು ವರ್ಷದ ಅವಧಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಎಲ್.ಎಲ್.ಬಿ ಪದವಿ ಹೊಂದಿರಬೇಕು. ಜಿಲ್ಲಾ/ಉಚ್ಛ ನ್ಯಾಯಾಲಯಗಳಲ್ಲಿ ಕನಿಷ್ಠ 5 ವರ್ಷ ಸ್ವತಂತ್ರವಾಗಿ ನ್ಯಾಯವಾದಿಗಳಾಗಿ ಸೇವೆ ಸಲ್ಲಿಸಿರಬೇಕು.
ವಯೋಮಿತಿ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 65 ವರ್ಷ ಮೀರಿರಬಾರದು.
ಪಾಲಿಕೆಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯ ಗಳಲ್ಲಿ ದಾಖಲಾದ ಸಿವಿಲ್/ಕ್ರಿಮಿನಲ್ ಮೊಕದ್ದಮೆಗಳನ್ನು ನಿರ್ವಹಿಸಿದ ಅನುಭವ ಹೊಂದಿರಬೇಕು.
ನೇಮಕಾತಿಯ ಪೂರ್ವದಲ್ಲಿ ಶಾರೀರಿಕ ಸದೃಢ ಪ್ರಮಾಣ ಪತ್ರವನ್ನು ಸರಕಾರಿ ಜಿಲ್ಲಾ ಸರ್ಜನ್ ರವರಿಂದ ಪಡೆದು ಸಲ್ಲಿಸಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದು.
08392-273479/278168