Typist Jobs 2024: ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಟೈಪಿಸ್ಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪಿಯುಸಿ ವಿದ್ಯಾರ್ಹತೆ

Written By sarkari

Lorem ipsum dolor sit amet consectetur pulvinar ligula augue quis venenatis. 

Advertisements

Ballari District Court Jobs 2024: ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದ ವಿವಿಧ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 21 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗೆ, ಹೈದರಾಬಾದ್‌ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಹಾಗೂ ಬೆರಳಚ್ಚು ನಕಲುಗಾರರು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 06-05-2024 ಕೊನೆಯ ದಿನಾಂಕವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 06-04-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-05-2024 (11.59 ರಾತ್ರಿವರೆಗೆ)
ಆನ್‌ಲೈನ್‌ ಮೂಲಕ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 08-05-2024 (11.59 ರಾತ್ರಿವರೆಗೆ)

ಹುದ್ದೆಗಳ ವಿವರ ಇಲ್ಲಿದೆ;
ಹುದ್ದೆ ಸಂಖ್ಯೆ:
ಉಳಿಕೆ ವೃಂದದಲ್ಲಿ 1 ಬೆರಳಚ್ಚುಗಾರ, 01 ಬೆರಳಚ್ಚು ನಕಲುಗಾರ
ಹೈದರಾಬಾದ್‌ ಕರ್ನಾಟಕ ಸ್ಥಳೀಯ ವೃಂದದಲ್ಲಿ 12 ಬೆರಳಚ್ಚುಗಾರರು, 7 ಬೆರಳಚ್ಚು ನಕಲುಗಾರರು ಹುದ್ದೆಗಳು ಖಾಲಿ ಇದೆ.
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಅಥವಾ ಡಿಪ್ಲೋಮಾ ಕಮರ್ಷಿಯಲ್‌ ಪ್ರಾಕ್ಟೀಸ್‌ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲೀಷ್‌ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕರ್ಮಷಿಯಲ್‌ ಪ್ರ್ಯಾಕ್ಟೀಸ್‌ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಪಾಸ್‌ ಆಗಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ ವಯೋಮಿತಿ ಆಗಿರಬೇಕು. ಗರಿಷ್ಠ ವಯೋಮಿತಿ ಅರ್ಹತೆ ಈ ಕೆಳಗೆ ನೀಡಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ವೇತನ ;
ಬೆರಳಚ್ಚುಗಾರರು- ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21400-ರೂ.42000 ವರೆಗೆ ವೇತನ ನೀಡಲಾಗುವುದು
ಬೆರಳಚ್ಚು ನಕಲುಗಾರರು- ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21400-ರೂ.42000 ವರೆಗೆ ವೇತನ ಸಿಗಲಿದೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ,3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು ರೂ.250, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಅರ್ಜಿಗಳನ್ನು ಕಡ್ಡಾಯವಾಗಿ ಬಳ್ಳಾರಿ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್‌ https://ballari.dcourts.gov.in/online-recruitment ನಲ್ಲಿ ನೀಡಲಾದ ಲಿಂಕ್‌ ಮೂಲಕ ದಿನಾಂಕ 06-04-2024 ರಿಂದ ದಿನಾಂಕ 06-05-2024 ರ ರಾತ್ರಿ 11.59 ರವರೆಗೆ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ