Ballari Grama Panchayat Recruitment 2024: ಬಳ್ಳಾರಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ 14 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಆರಂಭಿಕ ದಿನಾಂಕ -08/02/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 28/02/2024
ಹುದ್ದೆ ವಿವರಗಳು ಈ ಕೆಳಗಿನಂತಿದೆ.
ಹುದ್ದೆ ಹೆಸರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು
ಹುದ್ದೆ ಸಂಖ್ಯೆ: ಬಳ್ಳಾರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಒಟ್ಟು ಎಂಟು ಗ್ರಾಮ ಪಂಚಾಯಿತಿಗಳಿಗೆ ನೂತನವಾಗಿ ಗ್ರಾಮಪಂಚಾಯಿತಿ ಗ್ರಂಥಾಲಯ ಮ್ತು ಮಾಹಿತಿ ಕೇಂದ್ರಗಳು ಮಂಜೂರಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಒಂದರಂತೆ ಒಟ್ಟು ಎಂಟು ಹುದ್ದೆಗಳು ಮತ್ತು ರಾಜೀನಾಮೆ, ನಿವೃತ್ತಿ ಕಾರಣದಿಂದ ತೆರವಾದ ಆರು ಹುದ್ದೆಗಳು ಸೇರಿ ಒಟ್ಟು 14 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ವಿದ್ಯಾರ್ಹತೆ: ಪಿಯುಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು. ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.
ವಾಸಸ್ಥಳ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರತಕ್ಕದ್ದು.
ವಯೋಮಿತಿ: ಮೇಲಿನ ಹುದ್ದೆಗೆ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ಪೂರೈಸಿರತಕ್ಕದ್ದು. ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಕಂಡಂತೆ ನೀಡಲಾಗಿದೆ.
ಸಾಮಾನ್ಯ ವರ್ಗ 35ವರ್ಷ, 2ಎ, ಎಬಿ, 3ಎ,3ಬಿ -38 ವರ್ಷ, ಪ.ಜಾತಿ/ಪ.ಪಂಗಡ/ಪ್ರ-1 40 ವರ್ಷ
ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ವಿಧಾನ
ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು/ಮೆರಿಟ್ ಅನ್ನು ಹೊಂದಿದ್ದಲ್ಲಿ ವಯಸ್ಸಿನಲ್ಲಿ ಹಿರಿಯರಾದವರನ್ನು ಆಯ್ಕೆಗೆ ಪರಿಗಣಿಸಲಾಗುವುದು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿಯನ್ನು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ವೆಬ್‌ಸೈಟ್ ವಿಳಾಸ https://ballari.nic.in ದಲ್ಲಿ ಸಲ್ಲಿಸುವುದು.
ಅರ್ಜಿ ಶುಲ್ಕ ವಿನಾಯಿತಿಸಲಾಗಿದೆ
ಅರ್ಜಿಯೊಂದಿಗೆ ಈ ಕೆಳಕಾಣಿಸಿದ ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು
ಪಿಯುಸಿ ಅಂಕಪಟ್ಟಿ, ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್‌ನಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿ, ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಪಡೆದಿರುವ ಪ್ರಮಾಣ ಪತ್ರ, ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ, ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿ, ಜಾತಿ ಮತ್ತು ಆದಾರಯ ಪ್ರಮಾಣ ಪತ್ರ
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ